Belthangady 622 ಕೆರೆ ಸಮಿತಿಗಳ ಬಲವರ್ಧನೆ: ಡಾ| ಮಂಜುನಾಥ್
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಪ್ರೇರಣ ಕಾರ್ಯಾಗಾರದ
Team Udayavani, Sep 26, 2023, 11:35 PM IST
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ಎಸ್‌ಕೆಡಿಆರ್‌ಡಿಪಿ)ಯು “ನಮ್ಮೂರು ನಮ್ಮಕೆರೆ’ ಕಾರ್ಯಕ್ರಮದಡಿ ರಾಜ್ಯಾದ್ಯಂತ ಪುನಶ್ಚೇತನಗೊಳಿಸಿದ 622 ಕೆರೆಗಳ ಸಮಿತಿಗಳ 6 ಸಾವಿರಕ್ಕೂ ಮಿಕ್ಕಿದ ಪದಾಧಿಕಾರಿಗಳಿಗೆ ಆಯಾ ಜಿಲ್ಲಾ ಮಟ್ಟದಲ್ಲಿ ಪ್ರೇರಣ ಕಾರ್ಯಾಗಾರ ನಡೆಸುವ ಮೂಲಕ ಕೆರೆ ಸಮಿತಿಗಳ ಬಲವರ್ಧನೆಗೊಳಿಸಲು ಉದ್ದೇಶಿಸಲಾಗಿದೆ ಎಂದು ಸಂಸ್ಥೆಯ ಕಾರ್ಯ ನಿರ್ವಾಹಕ ನಿರ್ದೇಶಕ ಡಾ| ಎಲ್.ಎಚ್. ಮಂಜುನಾಥ್ ತಿಳಿಸಿದ್ದಾರೆ.
ಕೆರೆಗಳು ನೀರಿನ ಸಂಗ್ರಹ ಮೂಲ, ಅಂತರ್ಜಲ ಹೆಚ್ಚಿಸುವ ಪಾತ್ರೆ, ಪ್ರಾಣಿ- ಪಕ್ಷಿ, ಜೀವ ಸಂಕುಲಗಳ ಜೀವನಾಡಿ. ಇಂತಹ ಕೆರೆಗಳನ್ನು ರಕ್ಷಿಸಿ ಮುಂದಿನ ಪೀಳಿಗೆಗೆ ವರ್ಗಾಯಿಸುವುದು ನಮ್ಮೆಲ್ಲರ ಮುಖ್ಯ ಜವಾಬ್ದಾರಿಯಾಗಿರುತ್ತದೆ. ಆದರೆ ಅದೆಷ್ಟೋ ಕೆರೆಗಳು ನೀರುಸಂಗ್ರಹ ಸಾಮರ್ಥ್ಯವನ್ನು ಕಳೆದು ಕೊಂಡಿವೆ. ಗಿಡಗಂಟಿ ಬೆಳೆದು, ಹೂಳು ತುಂಬಿ ಮುಚ್ಚಿಹೋಗಿವೆ. ಮರಳು, ಮಣ್ಣಿಗಾಗಿ ಕೆರೆಯನ್ನು ಅಗೆದು ವಿರೂಪ ಗೊಳಿಸಲಾಗಿದೆ. ಒತ್ತುವರಿಯಿಂದಾಗಿ ನೀರು ಹರಿದು ಬರುತ್ತಿದ್ದ ಕಾಲುವೆಗಳು ಇಲ್ಲದಂತಾಗಿದೆ. ಹನಿ ನೀರಿಗಾಗಿ ಪರದಾಡುತ್ತಿರುವ ರೈತರ ಹಾಗೂ ನೀರಿಗಾಗಿ ಬಹಳ ದೂರದವರೆಗೆ ಅಲೆಯುತ್ತಿರುವ ಮಹಿಳೆಯರ ಸಂಕಷ್ಟ ಗಮನಿಸಿದ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ| ಡಿ. ವೀರೇಂದ್ರ ಹೆಗ್ಗಡೆ ಹಾಗೂ ಹೇಮಾವತಿ ವೀ. ಹೆಗ್ಗಡೆಯವರು ಪಾರಂಪರಿಕ ಕೆರೆಗಳ ಪುನಶ್ಚೇತನಕ್ಕಾಗಿ ನಮ್ಮೂರು ನಮ್ಮ ಕೆರೆ ಕಾರ್ಯಕ್ರಮವನ್ನು 2016 ರಲ್ಲಿ ಪ್ರಾರಂಭಿಸಿದರು. ಇದುವರೆಗೆ ರಾಜ್ಯಾದ್ಯಂತ 622 ಕೆರೆಯ ಪುನಶ್ಚೇತನ ಕಾರ್ಯ ನಡೆಸಲಾಗಿದೆ.
ಪ್ರೇರಣ ಕಾರ್ಯಕ್ರಮದಲ್ಲಿ…
ಕೆರೆಯ ಶಾಶ್ವತ ನಿರ್ವಹಣೆಯ ಬಗ್ಗೆ ಮಾಹಿತಿ, ಕೆರೆ ಸಮಿತಿಯನ್ನು ಸರಕಾರದ ನಿಯಮದಡಿ ನೋಂದಣಿ ಮಾಡಿಕೊಳ್ಳುವುದು, ಕೆರೆ ಅಭಿವೃದ್ಧಿಗಾಗಿ ವಿವಿಧ ಇಲಾಖೆಗಳ ಅನುದಾನಗಳ ಮಾಹಿತಿ, ಇತರ ಸಂಘ-ಸಂಸ್ಥೆಗಳಿಂದ ಅನುದಾನ ಪಡೆದು ಅಭಿವೃದ್ಧಿ ಕಾರ್ಯ ನಡೆಸಲು ಪ್ರೇರಣೆ ನೀಡಲಾಗುವುದು. ಅಷ್ಟೇ ಅಲ್ಲದೆ ಕೆರೆಗಳ ಸುತ್ತ ಗಿಡ ನಾಟಿ, ಕೆರೆ ಹಾಗೂ ಸುತ್ತಮುತ್ತ ಮಲಿನ ಮಾಡದಂತೆ ಅರಿವು, ಕೆರೆ ಅತಿಕ್ರಮಣ ತಡೆಯುವ ಕುರಿತು ಜಾಗೃತಿ, ಕೆರೆ ಅಭಿವೃದ್ಧಿಗಾಗಿ ಇರುವ ವಿವಿಧ ಅಭಿವೃದ್ಧಿ ಯೋಜನೆಗಳು ಮತ್ತು ಅವಕಾಶಗಳ ಬಗ್ಗೆ ಜಲತಜ್ಞರಿಂದ ಹಾಗೂ ಇಲಾಖಾ ಅಧಿಕಾರಿಗಳಿಂದ ಮಾರ್ಗದರ್ಶನ ನೀಡಲಾಗುತ್ತಿದೆ ಎಂದು ಡಾ| ಮಂಜುನಾಥ್ ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Fraud Case: ಗೂಗಲ್ ಪೇ ಮಾಡಿದೆ ಎಂದು ಹೇಳಿ ಮೋಸ
Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ
Puttur: ಸ್ಕೂಲ್ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್
Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು
MUST WATCH
ಹೊಸ ಸೇರ್ಪಡೆ
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.