Surat: ಒಂದೇ ಕುಟುಂಬದ 7 ಮಂದಿ ಸಾಮೂಹಿಕ ಆತ್ಮಹತ್ಯೆ!
- ಸೂರತ್‌ನಲ್ಲೊಂದು ಹೃದಯ ವಿದ್ರಾವಕ ಘಟನೆ
Team Udayavani, Oct 28, 2023, 8:37 PM IST
ಸೂರತ್: ಗುಜರಾತ್‌ನ ಸೂರತ್ ನಗರದ ಮನೆಯೊಂದರಲ್ಲಿ ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ 7 ಮಂದಿಯ ಮೃತದೇಹ ಪತ್ತೆಯಾಗಿದ್ದು, ಇದೊಂದು ಸಾಮೂಹಿಕ ಆತ್ಮಹತ್ಯೆ ಇರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
ಅದಾಜಾನ್ ಪ್ರದೇಶದ ಅಪಾರ್ಟ್‌ಮೆಂಟ್‌ವೊಂದರಲ್ಲಿ ಈ ಕುಟುಂಬವು ಆತ್ಮಹತ್ಯೆಗೆ ಶರಣಾಗಿದ್ದು, ಅಲ್ಲಿ ಸಿಕ್ಕಿರುವ ಪತ್ರವೊಂದರಲ್ಲಿ “ಹಣಕಾಸಿನ ಸಂಕಷ್ಟವೇ ನಮ್ಮ ಈ ನಿರ್ಧಾರಕ್ಕೆ ಕಾರಣ” ಎಂದು ಬರೆಯಲಾಗಿದೆ. ಮೃತರನ್ನು ಮನೆಯ ಯಜಮಾನ ಮನೀಷ್ ಸೋಲಂಕಿ(37), ಅವರ ಪತ್ನಿ, ಅಪ್ಪ-ಅಮ್ಮ, 6 ವರ್ಷದ ಪುತ್ರ, 10 ಮತ್ತು 13 ವರ್ಷದ ಇಬ್ಬರು ಪುತ್ರಿಯರು ಎಂದು ಗುರುತಿಸಲಾಗಿದೆ.
ಸೋಲಂಕಿ ಅವರು ಗುತ್ತಿಗೆದಾರನಾಗಿ ಕೆಲಸ ಮಾಡುತ್ತಿದ್ದರು. ಸಾಲವಾಗಿ ಕೊಟ್ಟ ಮೊತ್ತವು ವಾಪಸ್ ಬರದ ಹಿನ್ನೆಲೆಯಲ್ಲಿ ಈ ಕುಟುಂಬವು ಆರ್ಥಿಕ ಸಮಸ್ಯೆಗೆ ಸಿಲುಕಿತ್ತು. ಮೃತರಲ್ಲಿ 6 ಮಂದಿ ವಿಷಕಾರಿ ವಸ್ತು ಸೇವನೆಯಿಂದ ಅಸುನೀಗಿದ್ದರೆ, ಮನೀಷ್ ಸೋಲಂಕಿ ಮಾತ್ರ ನೇಣಿಗೆ ಕೊರಳೊಡ್ಡಿದ್ದಾರೆ. ಅಂದರೆ, ಕುಟುಂಬ ಸದಸ್ಯರಿಗೆ ತಾವೇ ವಿಷ ಉಣಬಡಿಸಿ, ನಂತರ ಸೋಲಂಕಿ ನೇಣು ಹಾಕಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಇವರ ಸಾವಿಗೆ ನಿಖರ ಕಾರಣವೇನೆಂದು ತನಿಖೆ ನಂತರ ತಿಳಿದುಬರಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rahul Gandhi: ದಲಿತನೆಂಬ ಕಾರಣಕ್ಕೆ ಪೊಲೀಸ್ ವಶದಲ್ಲಿ ವ್ಯಕ್ತಿ ಕೊ*ಲೆ
Congress MP: ವಾರಕ್ಕೆ 70 ಗಂಟೆ ಬೇಡ, 4 ದಿನ ಕೆಲಸ ಸಾಕು: ತ.ನಾಡು ಸಂಸದ ಕಾರ್ತಿ
Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್ ವಿಧಿವಶ
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Rahul Gandhi: ದಲಿತನೆಂಬ ಕಾರಣಕ್ಕೆ ಪೊಲೀಸ್ ವಶದಲ್ಲಿ ವ್ಯಕ್ತಿ ಕೊ*ಲೆ
Congress MP: ವಾರಕ್ಕೆ 70 ಗಂಟೆ ಬೇಡ, 4 ದಿನ ಕೆಲಸ ಸಾಕು: ತ.ನಾಡು ಸಂಸದ ಕಾರ್ತಿ
ಕರಾವಳಿಯಲ್ಲಿ “ಕರ್ನಾಟಕ ಕೂಟ’: ಜ. 17-23ರ ವರೆಗೆ ಮಂಗಳೂರು, ಉಡುಪಿಯಲ್ಲಿ
Uppinangady; ಕಾಡಾನೆ ಸಂಚಾರದಿಂದ ಹಿರೇಬಂಡಾಡಿ ಗ್ರಾಮಸ್ಥರು ಭಯಭೀತ
Vijay Hazare Trophy: ಕರ್ನಾಟಕಕ್ಕೆ ಸತತ 2ನೇ ಗೆಲುವಿನ ಸಿಹಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.