Mangalore: ಮಂಗಳೂರು ಸ್ಮಾರ್ಟ್ ಸಿಟಿಗೆ 806 ಕೋಟಿ ರೂ. ಬಿಡುಗಡೆ
Team Udayavani, Jul 5, 2023, 8:00 AM IST
ಬೆಂಗಳೂರು: ಸ್ಮಾರ್ಟ್ಸಿಟಿ ಅಭಿಯಾನದಡಿ ಮಂಗಳೂರು ನಗರಕ್ಕೆ 806 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ ಎಂದು ನಗರಾಭಿವೃದ್ಧಿ ಸಚಿವ ಬಿ.ಎಸ್. ಸುರೇಶ್ ಹೇಳಿದ್ದಾರೆ.
ವಿಧಾನಪರಿಷತ್ತಿನ ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯ ಮಂಜುನಾಥ ಭಂಡಾರಿ ಪ್ರಶ್ನೆಗೆ ಸದನದಲ್ಲಿ ಮಂಡಿಸಲಾದ ಉತ್ತರದಲ್ಲಿ ಸಚಿವರು ಈ ಮಾಹಿತಿ ನೀಡಿದ್ದಾರೆ. ಸ್ಮಾರ್ಟ್ಸಿಟಿ ಅಭಿಯಾನದಡಿ ಮಂಗಳೂರು ನಗರಕ್ಕೆ ಕೇಂದ್ರ ಸರಕಾರದಿಂದ 390 ಕೋಟಿ ಹಾಗೂ ರಾಜ್ಯ ಸರಕಾರದಿಂದ 414 ಕೋಟಿ ರೂ. ಸೇರಿ ಒಟ್ಟು 806 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ. ಬಿಡು ಗಡೆಯಾದ ಅನುದಾನದಲ್ಲಿ 739.39 ಕೋಟಿ ರೂ. ಅನುದಾನ ವೆಚ್ಚ ಮಾಡಿ ಶೇ. 92ರಷ್ಟು ಆರ್ಥಿಕ ಪ್ರಗತಿ ಸಾಧಿಸಲಾಗಿದೆ.
ಎಲ್ಲ ಕಾಮಗಾರಿಗಳಿಗೆ ಕಾರ್ಯಾದೇಶ
ಸ್ಮಾರ್ಟ್ಸಿಟಿ ಅಭಿಯಾನದಡಿ 53 ಕಾಮಗಾರಿಗಳಿಗೆ ಟೆಂಡರ್ ಕರೆದು, ಎಲ್ಲ ಕಾಮಗಾರಿಗಳಿಗೆ ಕಾರ್ಯಾದೇಶ ನೀಡಲಾಗಿದೆ. ಈ 53 ಕಾಮಗಾರಿಗಳ ಪೈಕಿ 30 ಕಾಮಗಾರಿಗಳು ಪೂರ್ಣಗೊಂಡಿದ್ದು, 20 ಕಾಮಗಾರಿಗಳು ಪ್ರಗತಿಯಲ್ಲಿವೆ. 3 ಕಾಮಗಾರಿಗಳನ್ನು ಪ್ರಾರಂಭಿಸಬೇಕಾಗಿದೆ. ಸ್ಮಾರ್ಟ್ಸಿಟಿ ಯೋಜನೆಯಡಿ ಕಳಪೆ ಕಾಮಗಾರಿ ಬಗ್ಗೆ ಯಾವುದೇ ದೂರು ಬಂದಿಲ್ಲ ಎಂದು ಸಚಿವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.