86 ದಿನ ಬಾಕಿ ; 2 ವರ್ಷ ನಂತರ ಅದ್ದೂರಿ ದಸರಾ ಉತ್ಸವಕ್ಕೆ ಸಿದ್ಧತೆ
ಧನಂಜಯ, ಅಶ್ವತ್ಥಾಮ ಸೇರಿ 15 ಆನೆ ಕರೆತರಲು ಅರಣ್ಯ ಇಲಾಖೆ ಸಿದ್ಧತೆ ನಡೆಸಿದೆ
Team Udayavani, Jul 1, 2022, 5:44 PM IST
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾಗೆ ಸಾಂಸ್ಕೃತಿಕ ನಗರಿ ಮೈಸೂರು ಸದ್ದಿಲ್ಲದೆ ಸಜ್ಜಾಗುತ್ತಿದೆ. ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ಯಾದ ಜಂಬೂ ಸವಾರಿಗೆ ಗಜಪಡೆ ಕರೆತರಲು ಅರಣ್ಯ ಇಲಾಖೆ ಸಿದ್ಧತೆ ನಡೆಸಿದೆ.
ಕೊರೊನಾ ಸೋಂಕು ಹಿನ್ನೆಲೆ ಕಳೆದೆರೆಡು ವರ್ಷಗಳಿಂದ ಅರಮನೆ ಆವರಣಕ್ಕೆ ಸೀಮಿತವಾಗಿದ್ದ ದಸರಾ ಮಹೋತ್ಸವವನ್ನು ಈ ಬಾರಿ ಅದ್ದೂರಿಯಾಗಿ ಆಚರಿಸಲು ಸರ್ಕಾರ ನಿರ್ಧರಿಸಿದೆ. ಇದರ ಜತೆಗೆ ದಸರಾ ಉತ್ಸವಕ್ಕೆ ಮೆರುಗು ನೀಡುವ ದಸರಾ ಆನೆಗಳನ್ನು ಮೈಸೂರಿಗೆ ಕರೆತರಲು ಅರಣ್ಯ ಇಲಾಖೆ ಸಿದ್ಧತೆ ಕೈಗೊಂಡಿದೆ. ಅದಕ್ಕಾಗಿ ಮೈಸೂರು, ಕೊಡಗು ಹಾಗೂ ಚಾಮರಾಜನಗರ ಜಿಲ್ಲೆಯಲ್ಲಿರುವ ಆನೆ ಶಿಬಿರಗಳಿಗೆ ತೆರಳಿ ಎಲ್ಲಾ ಆನೆಗಳ ಆರೋಗ್ಯ, ಅವುಗಳ ಸಾಮರ್ಥ್ಯ, ಸ್ವಭಾವವನ್ನು ಪರೀಕ್ಷಿಸಿ ತಿಂಗಳ ಅಂತ್ಯದೊಳಗೆ 2022ರ ದಸರಾ ಉತ್ಸವದಲ್ಲಿ ಪಾಲ್ಗೊಳ್ಳಲಿರುವ ಆನೆಗಳ ಪಟ್ಟಿ ಅಂತಿಮಗೊಳಿಸಲಿದ್ದಾರೆ. ಅದಕ್ಕಾಗಿ ಜು.10ರ ಬಳಿಕ ಎಲ್ಲಾ ಆನೆ ಶಿಬಿರಗಳಿಗೂ ಅಧಿಕಾರಿಗಳ ತಂಡ ತೆರಳಲಿದೆ.
ಆನೆಗಳ ಆಹಾರ ಪೂರೈಕೆಗೆ ಟೆಂಡರ್: ದಸರಾ ಉತ್ಸವಕ್ಕೆ 86 ದಿನ ಬಾಕಿ ಇದ್ದು, ಸೆ.26ರಿಂದ ನವರಾತ್ರಿ ಆರಂಭವಾಗಲಿದೆ. ಅ.5ರ ವಿಜಯ ದಶಮಿಯ ದಿನ ಜಂಬೂ ಸವಾರಿ ನಡೆಯಲಿದೆ. ಅದರ ಅಂಗವಾಗಿ 60 ದಿನ ಮುಂಚಿತವಾಗಿಯೇ ಆನೆಗಳನ್ನು ಮೈಸೂರಿಗೆ ಕರೆತರಲು ಅರಣ್ಯ ಇಲಾಖೆ ನಿರ್ಧರಿಸಿದೆ. ಅವುಗಳಿಗೆ ಗುಣಮಟ್ಟ ಆಹಾರ ಪೂರೈಕೆಗೆ ಇಲಾಖೆ ಟೆಂಡರ್ ಆರಂಭಿಸಿದ್ದು, ತಿಂಗಳ ಅಂತ್ಯಕ್ಕೆ ಪೂರ್ಣಗೊಳ್ಳಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಈ ಬಾರಿ 15 ಆನೆಗಳು?: ಕೊರೊನಾ ಸೋಂಕು ಹಿನ್ನೆಲೆ ಕಳೆದ ಎರಡು ವರ್ಷಗಳಿಂದ ದಸರಾ ಉತ್ಸವವನ್ನು ಸರ್ಕಾರ ಅರಮನೆಗೆ ಸೀಮಿತಗೊಳಿಸಿ, ಸರಳವಾಗಿ ಆಚರಿಸಿತ್ತು. ಈ ಬಾರಿ ಅದ್ದೂರಿಯಾಗಿ ನಡೆಸಲು ಸರ್ಕಾರ ಚಿಂತನೆ ನಡೆಸಿದೆ. ಅದಕ್ಕಾಗಿ ಅಂಬಾರಿ ಆನೆ ಅಭಿಮನ್ಯು ಜತೆಗೆ ಅರ್ಜುನ, ಗೋಪಾಲಸ್ವಾಮಿ, ವಿಕ್ರಮ, ಧನಂಜಯ, ಅಶ್ವತ್ಥಾಮ ಸೇರಿ 15 ಆನೆ ಕರೆತರಲು ಅರಣ್ಯ ಇಲಾಖೆ ಸಿದ್ಧತೆ ನಡೆಸಿದೆ. ಜುಲೈ ಅಂತ್ಯದೊಳಗೆ ಅವುಗಳ ಪಟ್ಟಿಯನ್ನು
ಅಂತಿಮಗೊಳಿಸಿ ದಸರಾ ಉನ್ನತ ಮಟ್ಟದ ಸಮಿತಿ ಸಭೆಗೆ ನೀಡಲಿದೆ.
ಆಗಸ್ಟ್ ಮೊದಲ ವಾರದಲ್ಲಿ ಗಜಪಯಣ: ದಸರಾ ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ಆನೆಗಳ ಆಯ್ಕೆ ಪಟ್ಟಿಗೆ ಒಪ್ಪಿಗೆ ಸಿಕ್ಕ ಬಳಿಕ, ಆಗಸ್ಟ್ ಮೊದಲ ವಾರದಲ್ಲಿ ಗಜಪಯಣ ಕಾರ್ಯಕ್ರಮ ನಡೆಯಲಿದೆ. ನಾಗರ ಹೊಳೆಯ ವೀರನಹೊಸಹಳ್ಳಿಯಲ್ಲಿ ಗಜಪಯಣದ ಮೂಲಕ ಮೈಸೂರಿಗೆ ಆನೆಗಳನ್ನು ಕರೆತಲಾಗುತ್ತದೆ.
ಎರಡು ವರ್ಷಗಳಿಂದ ದಸರಾ ಉತ್ಸವ ಅರಮನೆಗೆ ಸೀಮಿತವಾದ ಹಿನ್ನೆಲೆ ಆನೆಗಳಿಗೆ ರಾಜಮಾರ್ಗದಲ್ಲಿ ಜಂಬೂ ಸವಾರಿ ತಾಲೀಮು ಹೆಚ್ಚು ಅಗತ್ಯವಿದೆ. ಈ ಹಿನ್ನೆಲೆ 60 ದಿನ ಮುಂಚಿತವಾಗಿಯೇ ಗಜಪಡೆಯನ್ನು ಕರೆತಂದು ನಿತ್ಯ ಬೆಳಗ್ಗೆ ಮತ್ತು ಸಂಜೆ ಒಣ ತಾಲೀಮು ನಡೆಸಿ, ಬಳಿಕ ಬಾರ ಹೊರುವ ತಾಲೀಮು ನಡೆಸುವ ಮೂಲಕ ಜಂಬೂ ಸವಾರಿಗೆ ಅಷ್ಟೂ ಆನೆಗಳನ್ನು ಅಣಿ ಗೊಳಿಸಲು ಅರಣ್ಯ ಇಲಾಖೆ ನಿರ್ಧರಿಸಿದೆ.
ಈ ಬಾರಿಯ ದಸರಾ ಉತ್ಸವಕ್ಕೆ 86 ದಿನ ಬಾಕಿ ಇದೆ. ಆನೆಗಳಿಗೆ ವಿಯದಶಮಿಯಂದು ನಡೆಯುವ ಜಂಬೂ ಸವಾರಿಗೆ ಅಗತ್ಯ ತಾಲೀಮು ನೀಡಲು 60 ದಿನ ಮುಂಚಿತವಾಗಿ ಆನೆಗಳನ್ನುಮೈಸೂರಿಗೆ ಕರೆತರಲಾಗುವುದು. ಅದಕ್ಕಾಗಿ ಆನೆ ಶಿಬಿರಗಳಿಗೆ ತೆರಳಿ ತಿಂಗಳಾಂತ್ಯಕ್ಕೆ ದಸರಾ ಆನೆಗಳ ಪಟ್ಟಿ ಸಿದ್ಧ ಪಡಿಸುತ್ತೇವೆ.
● ಡಾ.ವಿ.ಕರಿಕಾಳನ್, ಡಿಸಿಎಫ್
ವನ್ಯಜೀವಿ ವಿಭಾಗ ಮೈಸೂರು.
● ಸತೀಶ್ ದೇಪುರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysuru: ಯೋಗಾನರಸಿಂಹಸ್ವಾಮಿ ದೇಗುಲದಲ್ಲಿ ಭಕ್ತರಿಗೆ 2 ಲಕ್ಷ ಲಡ್ಡು ವಿತರಣೆ
Mysuru: ಕೆಆರ್‌ಎಸ್ ರಸ್ತೆಗೆ “ಸಿದ್ದರಾಮಯ್ಯ ಆರೋಗ್ಯ ಮಾರ್ಗ’ ನಿಶ್ಚಿತ: ಲಕ್ಷ್ಮಣ್
Sandalwood: ಪ್ರತಿಭೆ ಪ್ರದರ್ಶಿಸಲು ಕಲಾವಿದರಿಗೆ ಸೂಕ್ತ ವೇದಿಕೆ ಅಗತ್ಯ: ನಟ ಡಾಲಿ ಧನಂಜಯ
Hunsur: ಹುತಾತ್ಮ ಧಿವಿನ್ ಅಂತಿಮ ದರ್ಶನ ಪಡೆದ ಗ್ರಾಮಸ್ಥರು
Mysuru: ಇನ್ಫೋಸಿಸ್ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್ ಫ್ರಂ ಹೋಂ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್ ಪಟೇಲ್
Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.