ರಾಜ್ಯದಲ್ಲಿ 12 ವರ್ಷಗಳಲ್ಲಿ 881ಸಾವು! ಸಿಡಿಲಾಘಾತದಿಂದ ಸಾವು ಬೆಳಗಾವಿ,ಬೀದರ್‌ನಲ್ಲೇ ಹೆಚ್ಚು

ದಕ್ಷಿಣ ಕನ್ನಡ, ಉಡುಪಿಯಲ್ಲೂ 2018ರ ಬಳಿಕ ಸಿಡಿಲಿನ ಆಘಾತದಿಂದ ಸಾವಿನ ಸಂಖ್ಯೆ ಹೆಚ್ಚಳ!

Team Udayavani, May 18, 2024, 7:35 AM IST

lರಾಜ್ಯದಲ್ಲಿ 12 ವರ್ಷಗಳಲ್ಲಿ 881ಸಾವು! ಸಿಡಿಲಾಘಾತದಿಂದ ಸಾವು ಬೆಳಗಾವಿ,ಬೀದರ್‌ನಲ್ಲೇ ಹೆಚ್ಚು

ಪುತ್ತೂರು: ಕ್ಷಣ ಮಾತ್ರದಲ್ಲೇ ಪ್ರಾಣ ಪಕ್ಷಿ ಹಾರಿಹೋಗುವಷ್ಟು ಆತಂಕಕಾರಿಯಾಗಿರುವ ಸಿಡಿಲಿನ ಆಘಾತಕ್ಕೆ ಪ್ರಾಣ ತೆತ್ತವರ ಸಂಖ್ಯೆ ದಿಗಿಲು ಮೂಡಿಸುವಂತಿದೆ. ಕಳೆದ 12 ವರ್ಷಗಳಲ್ಲಿ ರಾಜ್ಯದಲ್ಲಿ ಸಿಡಿಲಿನ ಆಘಾತಕ್ಕೆ 881 ಮಂದಿ ಸಾವನ್ನಪ್ಪಿದ್ದಾರೆ.

ಕಂದಾಯ ಇಲಾಖೆಯ ವಿಪತ್ತು ನಿರ್ವಹಣ ವಿಭಾಗ 2011ರಿಂದ 2023ರ ತನಕ ಪಟ್ಟಿ ಮಾಡಿರುವ ಅಂಕಿಅಂಶಗಳು ಸಿಡಿಲಿನ ಅಪಾಯದ ಮಟ್ಟವನ್ನು ತೆರೆದಿಟ್ಟಿವೆ.

ಬೆಳಗಾವಿ ಅಪಾಯ
ರಾಜ್ಯದಲ್ಲೇ ಸಿಡಿಲಿನ ಆಘಾತದ ಅಪಾಯದ ಪಟ್ಟಿಯಲ್ಲಿ ಬೆಳಗಾವಿ, ಬಳಿಕ ಬೀದರ್‌, ಕಲಬುರಗಿ ಜಿಲ್ಲೆ ಇವು. ಅತೀ ಹೆಚ್ಚು ಸಾವಿನ ಪ್ರಕರಣ ವರದಿಯಾಗಿರುವ 3 ಜಿಲ್ಲೆಗಳು ಇವು. ಬೆಳಗಾವಿ ಯಲ್ಲಿ ಕಳೆದ 12 ವರ್ಷಗಳಲ್ಲಿ 63 ಮಂದಿ, ಬೀದರ್‌, ಕಲಬುರಗಿ ಜಿಲ್ಲೆಗಳಲ್ಲಿ ತಲಾ 38 ಮಂದಿ ಸಿಡಿಲಿನಿಂದ ಸಾವನ್ನಪ್ಪಿದ್ದಾರೆ.

ಪ್ರಸ್ತಾವನೆಗಷ್ಟೇ ಸೀಮಿತವಾದ ಮಿಂಚು ಪ್ರತಿಬಂಧಕ ಟವರ್‌
ದ.ಕ. ಜಿಲ್ಲೆಯಲ್ಲಿ ಸಿಡಿಲಿನ ತೀವ್ರತೆ ಇರುವ 13 ಕಡೆಗಳಲ್ಲಿ ಮಿಂಚು ಪ್ರತಿಬಂಧಕ ಟವರ್‌ ಅಳವಡಿಸಬೇಕು ಎಂಬ ಬೇಡಿಕೆಗೆ ಎಂಟು ವರ್ಷ ಕಳೆದಿದ್ದು, ಸ್ಪಂದನೆ ಸಿಕ್ಕಿಲ್ಲ. ಆಯಾ ತಾಲೂಕಿನ ಕಂದಾಯ ಇಲಾಖೆಗಳು ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ಇನ್ನೂ ಅನುದಾನ ಬಿಡುಗಡೆ ಆಗಿಲ್ಲ.

ಪಾಲನೆ ಆಗದ ನಿಯಮ
15 ಮೀ.ಗಿಂತ ಹೆಚ್ಚು ಎತ್ತರವಿರುವ ಗೋಪುರಗಳು, ಖಾಸಗಿ ಕಟ್ಟಡಗಳು, ಶ್ರದ್ಧಾ ಕೇಂದ್ರಗಳು, ಇನ್ನಿತರ ಕಟ್ಟಡಗಳಲ್ಲಿ ಮಿಂಚು ಪ್ರತಿಬಂಧಕ ಅಳವಡಿಸುವುದು ಕಡ್ಡಾಯ. ಆದರೆ ಆ ಕಾರ್ಯ ಬಹುತೇಕ ಕಡೆಗಳಲ್ಲಿ ಆಗಿಲ್ಲ. ಅಧಿಕಾರಿಗಳು ಪರಿಶೀಲನೆಯನ್ನು ನಡೆಸಿಲ್ಲ. ಮಿಂಚು ಮತ್ತು ಸಿಡಿಲಿನ ಹೊಡೆತ 30 ಸಾವಿರ ಫ್ಯಾರನ್‌ ಹೀಟ್‌ನಿಂದ 50 ಸಾವಿರ ಫ್ಯಾರನ್‌ ಹೀಟ್‌ ಉಷ್ಣಾಂಶವನ್ನು ಬಿಡುಗಡೆ ಮಾಡಬಲ್ಲವು. ಅಂದರೆ ಇದು ಸೂರ್ಯನ ಮೇಲ್ಮೈ ತಾಪಮಾನಕ್ಕಿಂತಲೂ ಹೆಚ್ಚಿರುತ್ತದೆ. ದೊಡ್ಡ ಕಟ್ಟಡಗಳನ್ನು ಈ ಸಿಡಿಲಿನ ಹೊಡೆತದಿಂದ ರಕ್ಷಿಸಲು ತ್ರಿಶೂಲಾಕಾರದ ಲೋಹದ ಸಲಾಕೆಯನ್ನು ಕಟ್ಟಡದ ಮೇಲೆ ನೆಟ್ಟು ಅದರ ಕೆಳತುದಿಯನ್ನು ಒಂದು ವಾಹಕದ ಮೂಲಕ ಭೂಮಿಗೆ ಸಂಪರ್ಕಿಸುತ್ತಾರೆ. ಇದೇ ಮಿಂಚು ಬಂಧಕ. ಮೋಡದಿಂದ ಪ್ರೇರೇಪಿತಗೊಂಡ ವಿದ್ಯುತ್‌ ಅಂಶ ಮಿಂಚು ಪ್ರತಿಬಂಧಕ ಹಾಗೂ ವಾಹಕಗಳ ಮೂಲಕ ಭೂಮಿಯನ್ನು ಸೇರಿ ಸಿಡಿಲಿನ ಅಪಾಯ ತಪ್ಪುತ್ತದೆ.

ಕರಾವಳಿಯಲ್ಲೂ ಸಾವು ಏರಿಕೆ
ಅಂಕಿ ಅಂಶಗಳ ಪ್ರಕಾರ 2011ರಿಂದ 2017ರ ತನಕ ಉಡುಪಿ, ದ.ಕ. ಜಿಲ್ಲೆಯಲ್ಲಿ ಸಿಡಿಲಿನ ಆಘಾತಕ್ಕೆ ಬಲಿಯಾದವರ ಸಂಖ್ಯೆ ಕಡಿಮೆ. ಈ ಅವಧಿಯಲ್ಲಿ 7 ಜನ ಮೃತಪಟ್ಟಿದ್ದರು. ಆದರೆ 2018ರ ಅನಂತರ ಅವಿಭಜಿತ ಜಿಲ್ಲೆಯಲ್ಲಿ ಸಿಡಿಲಿನ ಆಘಾತದಿಂದ ಉಂಟಾಗುತ್ತಿರುವ ಜೀವಹಾನಿಯ ಪ್ರಮಾಣ ಹೆಚ್ಚಳವಾಗಿರುವುದು ಆತಂಕಕಾರಿ ಸಂಗತಿ. 2018ರಿಂದ 2023ರ ಅವಧಿಯಲ್ಲಿ 21 ಮಂದಿ ಸಿಡಿಲಿನಿಂದ ಮೃತಪಟ್ಟಿದ್ದಾರೆ. ಇದರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ 12 ಮಂದಿ, ಉಡುಪಿ ಜಿಲ್ಲೆಯ 9 ಮಂದಿ ಸೇರಿದ್ದಾರೆ. ಕಳೆದ 12 ವರ್ಷಗಳಲ್ಲಿ ಉಡುಪಿ ಜಿಲ್ಲೆಯಲ್ಲಿ 13, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 15 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. 2024ರ ಮಳೆಗಾಲ ಪೂರ್ಣ ಪ್ರಮಾಣದಲ್ಲಿ ಆವರಿಸಿಕೊಳ್ಳುವ ಮೊದಲೇ ಅವಿಭಜಿತ ಜಿಲ್ಲೆಯಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಈ ಪೈಕಿ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿ ಇಬ್ಬರು ಹಾಗೂ ಸುಳ್ಯ ಮತ್ತು ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ತಲಾ ಓರ್ವರು ಮೃತರಾಗಿದ್ದಾರೆ.

ಯಾವ ತಿಂಗಳಲ್ಲಿ
ಆಘಾತ ಹೆಚ್ಚು
ಎಪ್ರಿಲ್‌, ಮೇ, ಜೂನ್‌ ತಿಂಗಳಿನಲ್ಲಿ ಸಿಡಿಲಿನ ಆಘಾತಕ್ಕೆ ಸಿಲುಕಿ ಹೆಚ್ಚು ಮಂದಿ ಮೃತಪಟ್ಟಿರುವುದು ಗಮನಕ್ಕೆ ಬರುತ್ತದೆ. ರಾಜ್ಯದಲ್ಲಿ 2011ರಿಂದ 2023ರ ತನಕ ಎಪ್ರಿಲ್‌ನಲ್ಲಿ 191, ಮೇ ತಿಂಗಳಲ್ಲಿ 228, ಜೂನ್‌ನಲ್ಲಿ 137 ಮಂದಿ ಮೃತಪಟ್ಟಿದ್ದಾರೆ. 2022ರ ಎಪ್ರಿಲ್‌ನಲ್ಲಿ 33, 2023ರ ಮೇ ತಿಂಗಳಲ್ಲಿ 33, 2015ರ ಜೂನ್‌ನಲ್ಲಿ 18 ಮಂದಿ ಸಾವನ್ನಪ್ಪಿರುವುದು ತಿಂಗಳಿನ ಲೆಕ್ಕಾಚಾರದಲ್ಲಿ ಗರಿಷ್ಠವಾಗಿದೆ.

881 ಸಾವು
ಕಳೆದ 12 ವರ್ಷಗಳಲ್ಲಿ ರಾಜ್ಯದಲ್ಲಿ ಒಟ್ಟು 881 ಜನ ಸಿಡಿಲಿನಿಂದ ಮೃತಪಟ್ಟಿದ್ದಾರೆ. 2011ರಲ್ಲಿ 24, 2012ರಲ್ಲಿ 24, 2013ರಲ್ಲಿ 27, 2014ರಲ್ಲಿ 63, 2015ರಲ್ಲಿ 66, 2016ರಲ್ಲಿ 51, 2017ರಲ್ಲಿ 87, 2018ರಲ್ಲಿ 89, 2019ರಲ್ಲಿ 109, 2020ರಲ್ಲಿ 78, 2021ರಲ್ಲಿ 89, 2022ರಲ್ಲಿ 111, 2023ರಲ್ಲಿ 63 ಮಂದಿ ಸಿಡಿಲಿಗೆ ಪ್ರಾಣ ತೆತ್ತಿದ್ದಾರೆ. ಅಂಕಿ ಅಂಶಗಳ ಪ್ರಕಾರ 2017ರ ಅನಂತರ ಸಿಡಿಲಿನಿಂದ ಉಂಟಾಗುತ್ತಿರುವ ಸಾವಿನ ಸಂಖ್ಯೆಯಲ್ಲಿ ಹೆಚ್ಚಳ ಕಾಣುತ್ತಿದೆ.

ಗುಡುಗು ಸಿಡಿಲಿನ ಅಪಾಯದಿಂದ ಪಾರಾಗಲು ವಹಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಮಾಹಿತಿ ನೀಡಲಾಗಿದೆ. ತಳಮಟ್ಟ ದಲ್ಲಿಯೂ ಜಾಗೃತಿ ಮೂಡಿಸಲು
ಸೂಚನೆ ನೀಡಲಾಗುವುದು.
-ಮುಲ್ಲೈ ಮುಗಿಲನ್‌,
ಜಿಲ್ಲಾಧಿಕಾರಿ, ದ.ಕ. ಜಿಲ್ಲೆ

ಕಿರಣ್‌ ಪ್ರಸಾದ್‌ ಕುಂಡಡ್ಕ

ಟಾಪ್ ನ್ಯೂಸ್

DKShi

Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್

Mangaluru: Kumaraswamy will turn whenever, however: Jameer Ahmed

Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್‌ ಅಹಮದ್‌

Kollywood: ಬಹಿರಂಗ ಪತ್ರ ಬರೆದು ಧನುಷ್‌ ಮೇಲೆ ರೇಗಾಡಿದ ನಟಿ ನಯನತಾರಾ; ಆಗಿರುವುದೇನು?

Kollywood: ಬಹಿರಂಗ ಪತ್ರ ಬರೆದು ಧನುಷ್‌ ಮೇಲೆ ರೇಗಾಡಿದ ನಟಿ ನಯನತಾರಾ; ಆಗಿರುವುದೇನು?

Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ

Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ

13-notes-1

Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Maharashtra Election: Focus on winning the booth: Modi’s Mantra to Workers

Maharashtra Election: ಬೂತ್‌ ಗೆಲ್ಲುವತ್ತ ಗಮನ ಹರಿಸಿ: ಕಾರ್ಯಕರ್ತರಿಗೆ ಮೋದಿ ಕರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-notes-1

Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!

2-news

ಹೆದ್ದಾರಿ ತಡೆ ನಡೆಸಿದ ಆರೋಪ; ಸುಳ್ಯ, ಬೈಂದೂರು ಶಾಸಕರ ಸಹಿತ ಹಲವರ ವಿರುದ್ಧ ಪ್ರಕರಣ

Puturu-Crime

Puttur: ‘ಕಾಡಿನೊಳಗಿದ್ದೇನೆ ದಾರಿ ಸಿಗುತ್ತಿಲ್ಲ’ ಎಂದಾತ 7 ತಿಂಗಳ ಬಳಿಕವೂ ಪತ್ತೆಯಾಗಿಲ್ಲ!

Suside-Boy

Putturu: ನೇಣು ಬಿಗಿದು ಆತ್ಮಹತ್ಯೆ

Accident-logo

Bantwala: ಶಾಲಾ ವಾಹನ ಢಿಕ್ಕಿ; ಸ್ಕೂಟರ್‌ ಸವಾರ ಸಾವು

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

DKShi

Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್

Mangaluru: Kumaraswamy will turn whenever, however: Jameer Ahmed

Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್‌ ಅಹಮದ್‌

Kollywood: ಬಹಿರಂಗ ಪತ್ರ ಬರೆದು ಧನುಷ್‌ ಮೇಲೆ ರೇಗಾಡಿದ ನಟಿ ನಯನತಾರಾ; ಆಗಿರುವುದೇನು?

Kollywood: ಬಹಿರಂಗ ಪತ್ರ ಬರೆದು ಧನುಷ್‌ ಮೇಲೆ ರೇಗಾಡಿದ ನಟಿ ನಯನತಾರಾ; ಆಗಿರುವುದೇನು?

Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ

Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ

14-darshan

Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.