ವಿಗ್ ಮತ್ತು ಒಳ ಉಡುಪಿನಲ್ಲಿ 9 ಕೋಟಿ ರೂ. ಮೌಲ್ಯದ ಡ್ರಗ್ಸ್: ಮಹಿಳೆ ಬಂಧನ
Team Udayavani, Dec 21, 2023, 12:30 AM IST
ಮುಂಬಯಿ: ವಿಗ್ ಮತ್ತು ಒಳ ಉಡುಪಿನಲ್ಲಿ 9 ಕೋಟಿ ರೂ. ಮೌಲ್ಯದ ಮಾದಕ ವಸ್ತುವನ್ನು ಕಳ್ಳಸಾಗಣೆ ಮಾಡುತ್ತಿದ್ದ ಉಗಾಂಡ ಮೂಲದ ಮಹಿಳೆಯೊಬ್ಬಳು ಮುಂಬಯಿ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದಿರುವ ಘಟನೆ ವರದಿಯಾಗಿದೆ. ಇಥಿಯೋಪಿಯಾದ ಅದ್ದೀಸ್ ಅಬಾಬಾ ವಿಮಾನ ನಿಲ್ದಾಣದಿಂದ ಆಗಮಿಸಿದ್ದ ಮಹಿಳೆಯನ್ನು ಮುಂಬಯಿ ವಿಮಾನ ನಿಲ್ದಾಣದಲ್ಲಿ ಕಂದಾಯ ಗುಪ್ತಚರ ಇಲಾಖೆ (ಡಿಆರ್ಐ) ಅಧಿಕಾರಿಗಳು ತಡೆಹಿಡಿದು ಪರೀಕ್ಷಿಸಿದ್ದಾರೆ.
ಈ ವೇಳೆ ಆಕೆಯ ವಿಗ್ ಮತ್ತು ಒಳ ಉಡುಪಿನಲ್ಲಿ 8.9 ಕೋಟಿ ರೂ. ಮೌಲ್ಯದ 890 ಗ್ರಾಂ ಕೊಕೈನ್ ಪತ್ತೆಯಾಗಿದೆ. ಬಳಿಕ ಆಕೆಯನ್ನು ಬಂಧಿಸಿ, ನ್ಯಾಯಾಂಗ ತನಿಖೆಗೆ ಒಳಪಡಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಡಿಆರ್ಐ ಇಂಥ ವಿಶಿಷ್ಟ ಪತ್ತೆ ಕಾರ್ಯಾಚರಣೆಯಲ್ಲಿ ಪರಿಣತವಾಗಿದ್ದು, ಈ ಹಿಂದೆಯೂ ಸ್ಯಾನಿಟರಿ ಪ್ಯಾಡ್, ವಿಸ್ಕಿ ಬಾಟಲ್ ಸೇರಿದಂತೆ ವಿವಿಧ ರೀತಿಯಲ್ಲಿ ಅಡಗಿಸಿ ಸಾಗಿಸಲು ಯತ್ನಿಸಿದ್ದ ಮಾದಕವಸ್ತುಗಳನ್ನು ಪತ್ತೆಹಚ್ಚಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jammu and Kashmir: ಕಂದಕಕ್ಕೆ ಉರುಳಿದ ಸೇನಾ ವಾಹನ; ಕುಂದಾಪುರದ ಯೋಧ ಅನೂಪ್ ಹುತಾತ್ಮ
Sabarimala: ಶಬರಿಮಲೆ- ಭಕ್ತರ ಸಂಖ್ಯೆ ಹೆಚ್ಚಳ; ವ್ಯಾಪಾರಿಗಳಿಗೆ 10.87 ಲಕ್ಷ ರೂ. ದಂಡ
Rajasthan:150 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಮಗು; 3 ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯ
Maharashtra: ಬಾಸ್ ಜತೆ ಸೆ*ಕ್ಸ್ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್
PM Modi: ಇಂದು ಕೆನ್-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.