Union Budget ಶಿಕ್ಷಣಕ್ಕೆ 9 ಸಾವಿರ ಕೋಟಿ ರೂ. ಖೋತಾ!
ಕಳೆದ ಬಾರಿ 1.29 ಲಕ್ಷ ಕೋಟಿ ರೂ. ಮೀಸಲು; ಈ ಬಾರಿ ಕೇವಲ 1.20 ಕೋಟಿ ರೂ. ಅನುದಾನ
Team Udayavani, Jul 24, 2024, 7:05 AM IST
ಹೊಸದಿಲ್ಲಿ: ಪ್ರಸಕ್ತ ಬಜೆಟ್‌ನಲ್ಲಿ ಕೇಂದ್ರ ಸರ್ಕಾರವು ಒಟ್ಟು 1.20 ಲಕ್ಷ ಕೋಟ ರೂ. ಮೀಸಲಿಟ್ಟಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ, 9 ಸಾವಿರ ಕೋಟಿ ರೂ. ಕಡಿಮೆಯಾಗಿದೆ. ಕಳೆದ 1.29 ಲಕ್ಷ ಕೋಟಿ ರೂ. ಮೀಸಲಿಡಲಾಗಿತ್ತು. ದೇಶಿ ಸಂಸ್ಥೆಗಳಲ್ಲಿ ಉನ್ನತ ಶಿಕ್ಷಣ ಕೈಗೊಳ್ಳುವ ವಿದ್ಯಾರ್ಥಿಗಳಿಗೆ 10 ಲಕ್ಷ ರೂ. ಸಾಲ ಒದಗಿಸುವ ಬಗ್ಗೆ ಘೋಷಣೆ ಮಾಡಲಾಗಿದೆ. ಕೇಂದ್ರ ಸರ್ಕಾರದ ಯಾವುದೇ ಯೋಜನೆ ಮತ್ತು ನೀತಿಗಳ ಫಲಾನುಭವಿಯಾಗಿರದ ವಿದ್ಯಾರ್ಥಿಗಳಿಗೆ ಈ ಸಾಲ ದೊರೆಯಲಿದೆ.
ಮುಂದಿನ 5 ವರ್ಷಗಳಲ್ಲಿ ಶಿಕ್ಷಣ ಕ್ಷೇತ್ರದ ಸಮಗ್ರ ಏಳಿಗೆಗೆ ಬಜೆಟ್ ಘೋಷಣೆಗಳು ಸಹಕಾರಿಯಾಗಲಿವೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅಭಿಪ್ರಾಯಪಟ್ಟಿದ್ದಾರೆ.
ಸಂಶೋಧನೆ, ಆವಿಷ್ಕಾರಕ್ಕೆ ಹಣ:
ಶೈಕ್ಷಣಿಕ ಸಂಸ್ಥೆಗಳಲ್ಲಿ ಸಂಶೋಧನೆ ಮತ್ತು ಆವಿಷ್ಕಾರಕ್ಕೆ 161 ಕೋಟಿ ರೂ. ಒದಗಿಸಲಾಗಿದೆ. ಅದೇ ರೀತಿ, ಜಾಗತಿಕ ಮಟ್ಟದ ಸಂಸ್ಥೆಗಳಿಗಾಗಿ 1800 ಕೋಟಿ ರೂ. ಮೀಸಲಿಡಲಾಗಿದೆ.
ಯುಜಿಸಿಗೆ ಕೇವಲ 2,500 ಕೋಟಿ ರೂ
ವಿಶ್ವವಿದ್ಯಾಲಯಗಳ ಅನುದಾನ ಆಯೋಗ(ಯುಜಿಸಿ)ಗೆ ಕಡಿಮೆ ಹಣವನ್ನು ಮೀಸಲಿಡಲಾಗಿದೆ. ಕಳೆದ ವರ್ಷ 6,409 ಕೋಟಿ ರೂ. ನೀಡಲಾಗಿತ್ತು. ಈ ವರ್ಷ ಈ ಅನುದಾನದಲ್ಲಿ ಶೇ.60.99ರಷ್ಟು ಖೋತಾ ಆಗಿದೆ. ಅಂದರೆ, ಕೇವಲ 2,500 ಕೋಟಿ ರೂ. ಮಾತ್ರ ಮೀಸಲಿಡಲಾಗಿದೆ. ಇದೇ ವೇಳೆ, ಕೇಂದ್ರ ವಿಶ್ವವಿದ್ಯಾಲಯಗಳಿಗೆ ಅನುದಾನ ಹೆಚ್ಚಿಸಲಾಗಿದೆ. 12 ಸಾವಿರ ಕೋಟಿ ರೂ.ನಿಂದ 15,427 ಕೋಟಿ ರೂ.ಗೆ ಹೆಚ್ಚಿಸಲಾಗಿದೆ.
ಐಐಎಂ, ಐಐಟಿಗಳಿಗೂ
ಅನುದಾನದ ಬರ!
ಸತತ ಎರಡನೇ ವರ್ಷವೂ ದೇಶದ ಐಐಎಂಗಳು ಅನುದಾನ ಕೊರತೆಯನ್ನು ಎದುರಿಸುತ್ತಿವೆ. ಈ ಸಂಸ್ಥೆಗಳಿದ್ದ 608 ಕೋಟಿ ರೂ. ಮೀಸಲು ಹಣವನ್ನು ಕಳೆದ ವರ್ಷ 300 ಕೋಟಿ ರೂ.ಗೆ ಇಳಿಸಲಾಗಿತ್ತು. ಈ ಬಜೆಟ್‌ನಲ್ಲಿ ಆ ಮೊತ್ತವನ್ನು 212 ಕೋಟಿ ರೂ.ಗೆ ಇಳಿಕೆ ಮಾಡಲಾಗಿದೆ! ಅದೇ ರೀತಿ, ಭಾರತೀಯ ತಾಂತ್ರಿಕ ಸಂಸ್ಥೆ(ಐಐಟಿ)ಗಳು ಅನುದಾನದಲ್ಲಿ ಭಾರೀ ಕಡಿಮೆ ಮಾಡಲಾಗಿದೆ. ಈ ವರ್ಷ ಕೇವಲ 10,324 ಕೋಟಿ ರೂ. ಮೀಸಲಿಡಲಾಗಿದೆ.
ಯುಪಿಎಸ್ ಪರೀಕ್ಷೆಗೆ 200 ಕೋಟಿ ರೂ.
ಬಜೆಟ್‌ನಲ್ಲಿ ಕೇಂದ್ರ ಲೋಕ ಸೇವಾ ಆಯೋಗಕ್ಕೆ 425.71 ಕೋಟಿ ರೂ ಬಿಡುಗಡೆಯಾಗಿದೆ. ಇದರಲ್ಲಿ ಯುಪಿಎಸ್‌ಸಿ ಪರೀಕ್ಷೆ ಹಾಗೂ ನೇಮಕಾತಿಗೆ 200 ಕೋಟಿ ರೂ, ವೇತನ, ಭತ್ಯೆ ಹಾಗೂ ಇತರೇ ಉದ್ದೇಶಕ್ಕಾಗಿ 208.99 ಕೋಟಿ ರೂ ಬಳಕೆಯಾಗಲಿದೆ . ಭ್ರಷ್ಟಾಚಾರ ನಿಗ್ರಹ ದಳ ಲೋಕಪಾಲ್‌ಗೆ 33.32ಕೋಟಿ ರೂ ಹಂಚಿಕೆಯಾಗಿದ್ದು ಹಾಗೂ ಸೆಂಟ್ರಲ್ ವಿಜಿಲೆನ್ಸ್ ಕಮಿಷನ್‌ಗೆ 51.31 ಕೋಟಿ ರೂ ನೀಡಲಾಗಿದೆ.
ಉನ್ನತ ಶಿಕ್ಷಣಕ್ಕಾಗಿ 10 ಲಕ್ಷ ರೂ. ಸಾಲ!
ಉನ್ನತ ಶಿಕ್ಷಣವನ್ನು ಪಡೆಯಲು ಹಣದ ತೊಂದರೆ ಎದುರಿಸುವ ಯುವಕರನ್ನು ಗಮನದಲ್ಲಿಟ್ಟುಕೊಂಡು ಸಾಲ ಯೋಜನೆಯನ್ನು ಘೋಷಿಸಲಾಗಿದೆ. ಇದರನ್ವಯ, ದೇಶಿ ಸಂಸ್ಥೆಗಳಲ್ಲಿ ಉನ್ನತ ಶಿಕ್ಷಣ ಕೈಗೊಳ್ಳುವ ವಿದ್ಯಾರ್ಥಿಗಳಿಗೆ 10 ಲಕ್ಷ ರೂ. ಸಾಲವನ್ನು ನೀಡಲಾಗುತ್ತದೆ. ಈ ಉದ್ದೇಶಕ್ಕಾಗಿ ಇ-ವೋಚರರ್‌ಗಳನ್ನು° ಪ್ರತಿ ವರ್ಷ 1 ಲಕ್ಷ ರೂ. ವಿದ್ಯಾರ್ಥಿಗಳಿಗೆ ನೇರವಾಗಿ ಸಾಲದ ಮೊತ್ತದ ಶೇಕಡಾ 3 ರಷ್ಟು ವಾರ್ಷಿಕ ಬಡ್ಡಿ ರಿಯಾಯಿತಿಗಾಗಿ ನೀಡಲಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raj Thackeray ಮಹಾ ಫಲಿತಾಂಶದ ನಂತರ ಪ್ರಮುಖ ಪಾತ್ರ ವಹಿಸಲಿದ್ದಾರೆ: ನಂದಗಾಂವ್ಕರ್
Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ
The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ
Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…
Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು
MUST WATCH
ಹೊಸ ಸೇರ್ಪಡೆ
Raj Thackeray ಮಹಾ ಫಲಿತಾಂಶದ ನಂತರ ಪ್ರಮುಖ ಪಾತ್ರ ವಹಿಸಲಿದ್ದಾರೆ: ನಂದಗಾಂವ್ಕರ್
Ration Card: ಅನರ್ಹರಿಗೆ ಬಿಪಿಎಲ್ ಕಾರ್ಡ್ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ
ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ
Laddu Mutya: ಬದುಕು ಅರಳಿಸಿದ ಬಾಗಲಕೋಟೆಯ ಭಗವಂತ: ತಮಾಷೆಯ ವಸ್ತುವಲ್ಲ ಲಡ್ಡು ಮುತ್ಯಾ
KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.