Mobile: ದೇಶದಲ್ಲೇ ಈಗ ಶೇ.99.2 ಮೊಬೈಲ್ ಉತ್ಪಾದನೆ!: ಅಶ್ವಿನಿ ವೈಷ್ಣವ್
Team Udayavani, Nov 25, 2023, 11:59 PM IST
ಹೊಸದಿಲ್ಲಿ: ದೇಶವನ್ನು ಉತ್ಪಾದನ ಕ್ಷೇತ್ರದ ಪ್ರಧಾನ ಕೇಂದ್ರವನ್ನಾಗಿ ಮಾಡಬೇಕು ಎಂಬ ಪ್ರಧಾನಿ ಮೋದಿಯವರ ಕನಸು ನನಸಾಗುವತ್ತ ಸಾಗಿದೆ. ದೇಶದಲ್ಲಿಯೇ ಈಗ ಪ್ರಮುಖ ಕಂಪೆನಿಗಳ ಮೊಬೈಲ್ ಅನ್ನು ಉತ್ಪಾದಿಸಲಾಗುತ್ತಿದೆ ಎಂದು ಕೇಂದ್ರ ದೂರಸಂಪರ್ಕ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ.
ದೇಶದ ಮೊಬೈಲ್ ಕ್ಷೇತ್ರ 9 ವರ್ಷಗಳ ಅವಧಿಯಲ್ಲಿ 20 ಬಾರಿ ಬೆಳವಣಿಗೆ ಸಾಧಿಸಿದೆ ಎಂದು ಅವರು ಟ್ವೀಟ್ ಮಾಡಿದ್ದಾರೆ. 2014ರಲ್ಲಿ ಶೇ.78 ಮೊಬೈಲ್‌ಗಳನ್ನು ಆಮದು ಮಾಡಿಕೊಳ್ಳುವ ಮೂಲಕ ಇತರ ದೇಶಗಳನ್ನು ಅವಲಂಬಿ ಸಬೇಕಾಗುತ್ತಿತ್ತು. ಪ್ರಸಕ್ತ ಸಾಲಿನಲ್ಲಿ ಶೇ.99.2ರಷ್ಟು ಫೋನ್‌ಗಳನ್ನು ದೇಶದಲ್ಲಿಯೇ ಉತ್ಪಾದಿಸಲಾಗಿದೆ. ಈ ಮೂಲಕ ಪ್ರಮುಖ ಕಂಪೆನಿಗಳ ಉತ್ಪನ್ನಗಳು ಮೇಡ್ ಇನ್ ಇಂಡಿಯಾ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದು ಟ್ವೀಟ್ ಮಾಡಿದ್ದಾರೆ. ಅದಕ್ಕೆ ಪೂರಕವಾಗಿ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ದೂರಸಂಪರ್ಕ ಕ್ಷೇತ್ರದ ಪ್ರಮುಖರ ಜತೆಗೆ ಸಭೆಯನ್ನೂ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics; ಮತಕ್ಕಾಗಿ ಮುಸ್ಲಿಮರನ್ನು ಒಡೆವ ಕೆಲಸ ಕಾಂಗ್ರೆಸ್ ಮಾಡುತ್ತಿದೆ: ಬಿಜೆಪಿ
Maha Election; ಚು.ಆಯೋಗದಿಂದ ಉದ್ಧವ್ ಠಾಕ್ರೆ ಬ್ಯಾಗ್ ಪರಿಶೀಲನೆ, ವಿವಾದ
Manipura: ಇಬ್ಬರು ಶವ ಪತ್ತೆ, ಮಕ್ಕಳು ಸೇರಿ 6 ಮಂದೆ ಕಾಣೆ
ದಾವೂದ್, ನಟ ಸಲ್ಮಾನ್ ಸಂಪರ್ಕ ಇದ್ದಿದ್ದಕ್ಕೆ ಸಿದ್ಧಿಕಿ ಹತ್ಯೆ: ಶೂಟರ್
Ranchi: ವಕ್ಫ್ ಮಂಡಳಿಯು ಕರ್ನಾಟಕದಲ್ಲಿ ದೇಗುಲ, ರೈತರ ಭೂಮಿಯ ಕಸಿದಿದೆ: ಅಮಿತ್ ಶಾ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.