Ayodhya: ರಾಮಮಂದಿರಕ್ಕೆ ಬಾಂಬ್ ಬೆದರಿಕೆ- 12ರ ಬಾಲಕ ಪೊಲೀಸರ ವಶಕ್ಕೆ
Team Udayavani, Sep 20, 2023, 11:53 PM IST
ಲಕ್ನೋ: ಅಯೋಧ್ಯೆಯಲ್ಲಿ ನಿರ್ಮಾಣಗೊಳ್ಳುತ್ತಿರುವ ರಾಮ ಮಂದಿರಕ್ಕೆ ಬಾಂಬ್ ದಾಳಿಯ ಬೆದರಿಕೆ ಇದೆ ಎಂದು ಕರೆ ಮಾಡಿದ್ದಕ್ಕಾಗಿ 12 ವರ್ಷದ ಬಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. 112 ತುರ್ತು ಸಂಖ್ಯೆಗೆ ಕರೆ ಮಾಡಿ, ಸೆ.21ರಂದು ರಾಮ ಮಂದಿರದ ಮೇಲೆ ಬಾಂಬ್ ದಾಳಿ ನಡೆಸಲಾಗುತ್ತದೆ ಎಂದು ಬೆದರಿಕೆ ಹಾಕಲಾಗಿತ್ತು. ತನಿಖೆಯ ವೇಳೆ ಫತೇಹ್ಗಢದ 12 ವರ್ಷದ ಬಾಲಕ ತನ್ನ ತಂದೆಯ ಫೋನ್ನಿಂದ ಈ ರೀತಿ ಬೆದರಿಕೆ ಒಡ್ಡಿರುವುದು ತಿಳಿದುಬಂದಿದೆ.
ಬಾಲಕ, ತಂದೆಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಜಾಲತಾಣದಲ್ಲಿ ಸೆ. 21ರಂದು ಮಂದಿರಕ್ಕೆ ಬಾಂಬ್ ದಾಳಿ ನಡೆಸಲಾಗುತ್ತದೆ ಎಂಬ ವೀಡಿ ಯೋ ನೋಡಿದ್ದರ ಬಗ್ಗೆ ತಿಳಿಸಲು ಕರೆ ಮಾಡಿದ್ದೆ ಎಂದು ಬಾಲಕ ಹೇಳಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕನಸಲ್ಲೂ ಅಂಬೇಡ್ಕರ್ರನ್ನು ಅವಮಾನಿಸಿಲ್ಲ: ಅಮಿತ್
Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
Mumbai: ಗೇಟ್ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.