Puttur: ವಿದ್ಯಾರ್ಥಿಗಳಿಗೆ “ಆಪತ್ತು”ತಂದ ವಿಪತ್ತಿನ ಸಿಗ್ನಲ್!
Team Udayavani, Oct 12, 2023, 10:21 PM IST
ಪುತ್ತೂರು: ವಿಪತ್ತು ಸಂದರ್ಭದಲ್ಲಿ ಮೊಬೈಲ್ ಮೂಲಕ ಎಚ್ಚರಿಕೆಯ ಸಂದೇಶವನ್ನು ನೀಡುವ ಬಗ್ಗೆ ಪ್ರಾಯೋಗಿಕ ಪರೀಕ್ಷೆ ಗುರುವಾರ ದೇಶಾದ್ಯಂತ ನಡೆದಿದೆ. ಆದರೆ ಇದು ಪುತ್ತೂರಿನ ಕಾಲೇಜೊಂದರ ಹಲವು ವಿದ್ಯಾರ್ಥಿಗಳ ಪಾಲಿಗೆ ಮಾತ್ರ “ಆಪತ್ತು’ ತಂದಿದೆ!
ತರಗತಿಯೊಳಗೆ ಮೊಬೈಲ್ ಕೊಂಡೊಯ್ಯುವುದಕ್ಕೆ ನಿಷೇಧ ಇದ್ದರೂ ಎಷ್ಟೋ ವಿದ್ಯಾರ್ಥಿಗಳು ಸೈಲೆಂಟ್ ಮೋಡ್‌ನಲ್ಲಿ ಇರಿಸಿ ಉಪನ್ಯಾಸಕರ ಗಮನಕ್ಕೆ ಬಾರದಂತೆ ಕೊಂಡೊಯ್ಯುವುದು ಸಾಮಾನ್ಯ. ಆದರೆ ಗುರುವಾರ ಬೆಳಗ್ಗೆ 11.45ರ ಸುಮಾರಿಗೆ ಧ್ವನಿ ಮತ್ತು ಕಂಪನದೊಂದಿಗೆ ಮೊಬೈಲ್‌ಗಳಿಗೆ ಎಚ್ಚರಿಕೆ ಸಂದೇಶ ಬರಲಾರಂಭಿಸಿದ್ದು, ಸೈಲೆಂಟ್ ಮೋಡ್‌ನಲ್ಲಿರುವ ಮೊಬೈಲ್‌ಗಳೂ ತಮ್ಮ ಇರವನ್ನು ತೋರಿಸಿದವು.
ಈ ಸಂದೇಶ ಮತ್ತು ಧ್ವನಿಗೆ ಯಾರೂ ಭಯಪಡಬೇಕಿಲ್ಲ ಎಂದು ದೂರಸಂಪರ್ಕ ಇಲಾಖೆ ತಿಳಿಸಿದ್ದರೂ ವಿದ್ಯಾರ್ಥಿಗಳು ಕಕ್ಕಾಬಿಕ್ಕಿಯಾದರು.ಉಪನ್ಯಾಸಕರಿಗೆ ಯಾರೆಲ್ಲಾ ತರಗತಿಯೊಳಗೆ ಮೊಬೈಲ್ ಬಳಸುತ್ತಿದ್ದಾರೆ ಅನ್ನುವ ಸಂಗತಿ ತಿಳಿಯಿತು. ಉಪನ್ಯಾಸಕರು ಮೊಬೈಲನ್ನು ತಾತ್ಕಾಲಿಕವಾಗಿ ವಶಕ್ಕೆ ಪಡೆದು ಮುಂದೆ ತರಗತಿಯೊಳಗೆ ತರದಂತೆ ವಿದ್ಯಾರ್ಥಿಗಳಿಗೆ ಎಚ್ಚರಿಕೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Shimoga; ಕಾಂಗ್ರೆಸ್-ಮುಸ್ಲಿಮರ ವಿರುದ್ದ ಹೇಳಿಕೆ: ಈಶ್ವರಪ್ಪ ವಿರುದ್ದ ಸುಮೋಟೋ ಪ್ರಕರಣ
Thirthahalli: ಶಾಸಕ ಸ್ಥಾನವನ್ನು ಗಿರವಿ ಇಟ್ಟರಾ ಆರಗ ಜ್ಞಾನೇಂದ್ರ ?
MUST WATCH
ಹೊಸ ಸೇರ್ಪಡೆ
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್
Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ
Manipal KMC Hospital: ಮಲ್ಪೆ ಬೀಚ್‌ನಲ್ಲಿ ಮಧುಮೇಹ ಜಾಗೃತಿ
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.