Chamarajanagar: ಮಲೆ ಮಹದೇಶ್ವರ ಬೆಟ್ಟದ ಲಾಡು ತಯಾರಿಕಾ ಪಾಕಶಾಲೆಯಲ್ಲಿ ಬೆಂಕಿ ಅವಘಡ
Team Udayavani, Dec 1, 2023, 7:32 PM IST
ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ಲಾಡು ತಯಾರಿಕಾ ಘಟಕದಲ್ಲಿ ಅನಿಲ ಸೋರಿಕೆಯಿಂದ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಲಾಡು ತಯಾರಿಕಾ ಸಾಮಾಗ್ರಿಗಳು ಹಾಗೂ ಕಟ್ಟಡಕ್ಕೆ ಹಾನಿಯುಂಟಾಗಿರುವ ಘಟನೆ ಜರುಗಿದೆ.
ಏನಿದು ಘಟನೆ?: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಲಾಡು ತಯಾರಿಕಾ ಘಟಕದಲ್ಲಿ ಮಧ್ಯಾಹ್ನ 2 ಗಂಟೆಯ ಸುಮಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಇದನ್ನು ಗಮನಿಸಿದ ಘಟಕದ ಸಿಬ್ಬಂದಿ ಎಚ್ಚೆತ್ತು ಬೆಂಕಿಯನ್ನು ನಂದಿಸಲು ಪ್ರಯತ್ನಿಸಿದ್ದಾರೆ. ಅಲ್ಲದೆ ಅಗ್ನಿಶಾಮಕ ಇಲಾಖೆಗೆ ದೂರವಾಣಿ ಮುಖಾಂತರ ಮಾಹಿತಿ ನೀಡಿದ್ದಾರೆ. ಈ ವೇಳೆಗೆ ಬೆಂಕಿಯ ಕೆನ್ನಾಲಿಗೆ ಕಟ್ಟಡದ ತುಂಬೆಲ್ಲಾ ಆವರಿಸುತ್ತಿತ್ತು. ತಕ್ಷಣ ಸ್ಥಳದಲ್ಲಿದ್ದ ಸಿಬ್ಬಂದಿ ಸ್ಥಳದಲ್ಲಿದ್ದ ನೀರು ಮತ್ತು ಮಣ್ಣನ್ನು ಬಳಸಿಕೊಂಡು ಬೆಂಕಿಯನ್ನು ನಂದಿಸಿ ಹತೋಟಿಗೆ ತಂದಿದ್ದರು. ಈ ವೇಳೆಗೆ ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಕಟ್ಟಡದಲ್ಲಿ ಆವರಿಸಿದ್ದ ಹೊಗೆಯನ್ನು ನಿಯಂತ್ರಣಕ್ಕೆ ತರುವಲ್ಲಿ ಯಶಸ್ವಿಯಾದರು. ಈ ವೇಳೆಗಾಗಲೇ ಲಾಡು ತಯಾರಿಕೆಗೆ ಬಳಸುತ್ತಿದ್ದ ಕೆಲ ಪದಾರ್ಥಗಳು ಬೆಂಕಿಗೆ ಆಹುತಿಯಾಗಿದ್ದು, ಪಾತ್ರೆ ಮತ್ತು ಬಾಣಲೆಗಳು ಮತ್ತು ಕಟ್ಟಡದ ಗೋಡೆಗಳು ಸುಟ್ಟು ಕರಕಲಾದಂತಾಗಿವೆ.
ಘಟನೆಗೆ ಕಾರಣವೇನು?: ಎಂದಿನಂತೆ ಶ್ರೀ ಕ್ಷೇತ್ರದ ಲಾಡು ತಯಾರಿಕ ಘಟಕದಲ್ಲಿ ಸಿಬ್ಬಂದಿ ಲಾಡು ತಯರಿಕೆಯಲ್ಲಿ ನಿರತರಾಗಿದ್ದರು. ಈ ವೇಳೆಗೆ ಘಟಕದ ಹೊರಭಾಗದಲ್ಲಿ ಅನಿಲದ ಸಿಲಿಂಡರ್‌ಗಳನ್ನು ಬದಲಾಯಿಸಲಾಗಿತ್ತು. ಈ ವೇಳೆ ಒಂದು ಸಿಲಿಂಡರನ್ನು ಸಮರ್ಪಕವಾಗಿ ಅಳವಡಿಸದೆ ಇದ್ದುದರಿಂದ ಅನಿಲ ಸೋರಿಕೆ ಉಂಟಾಗಿ ಬಳಿಕ ಬೆಂಕಿ ತಗುಲಿ ಹೊತ್ತಿ ಉರಿದಿದೆ ಎನ್ನಲಾಗಿದೆ. ಇದಲ್ಲದೆ ತಯಾರಿಕಾ ಘಟಕದ ಗೋಡೆಗಳಲ್ಲಿ ಎಣ್ಣೆ ಮತ್ತು ತುಪ್ಪದ ಜಿಡ್ಡು ಹೆಚ್ಚಿನ ಪ್ರಮಾಣದಲ್ಲಿ ಇದ್ದುದರಿಂದ ಬೆಂಕಿಯು ಮತ್ತಷ್ಟು ಹೆಚ್ಚಾಗಲು ಕಾರಣವಾಗಿದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minister K.J. George: ಒಂದೇ ದಿನದಲ್ಲಿ 2500 ಲೈನ್‌ಮ್ಯಾನ್ ನೇಮಕ ಸಂದರ್ಶನ
Bandipur: ಸಫಾರಿಯಲ್ಲಿ ಪ್ರವಾಸಿಗರ ಮುಂದೆಯೇ ಜಿಂಕೆ ಬೇಟೆಯಾಡಿದ ಚಿರತೆ
Birla Opus Paints: ಚಾಮರಾಜನಗರದಲ್ಲಿ ಬಿರ್ಲಾ ಒಪಸ್ ಪೇಂಟ್ಸ್ 4ನೇ ಕಾರ್ಖಾನೆ ಆರಂಭ
Gundlupet: ಜಿಂಕೆ ಮಾಂಸ ಸಾಗಾಣೆ: ಐವರ ಬಂಧಿಸಿದ ಅರಣ್ಯಾಧಿಕಾರಿಗಳು
Kollegala: ಎತ್ತಿನಗಾಡಿಗೆ ಸಾಮ್ರಾಟ್ ಟರ್ಬೇ ವಾಹನ ಡಿಕ್ಕಿ; ಎತ್ತು ಸಾವು
MUST WATCH
ಹೊಸ ಸೇರ್ಪಡೆ
Puttur: ಸ್ಕೂಲ್ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್
Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು
Kasaragod: ಫ್ಯಾಶನ್ ಗೋಲ್ಡ್ ವಂಚನೆ ಪ್ರಕರಣ: ಪೂಕೋಯ ತಂಙಳ್ ಮತ್ತೆ ಬಂಧನ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.