USA: ಮೋದಿ ನೋಡಲು ವ್ಹೀಲ್‌ಚೇರ್‌ನಲ್ಲಿ ಬಂದಿದ್ದ ಅಮೆರಿಕ ಮಾಜಿ ಸಚಿವ ನಿಧನ
- ಮೋದಿಯವರ ಅಪ್ಪಟ ಅಭಿಮಾನಿಯಾಗಿದ್ದ ಹೆನ್ರಿ ಕಿಸ್ಸಿಂಗರ್
Team Udayavani, Nov 30, 2023, 9:34 PM IST
ವಾಷಿಂಗ್ಟನ್: 100ರ ಇಳಿ ವಯಸ್ಸಿನಲ್ಲೂ, ಅನಾರೋಗ್ಯದ ನಡುವೆಯೂ ಪ್ರಧಾನಿ ನರೇಂದ್ರ ಮೋದಿ ಅವರ ಮಾತುಗಳನ್ನು ಆಲಿಸಲೆಂದು ವ್ಹೀಲ್‌ಚೇರ್‌ನಲ್ಲಿ ವಾಷಿಂಗ್ಟನ್‌ಗೆ ಬಂದಿದ್ದ ಅಮೆರಿಕದ ಮಾಜಿ ವಿದೇಶಾಂಗ ಸಚಿವ ಹೆನ್ರಿ ಕಿಸ್ಸಿಂಗರ್ (100) ಗುರುವಾರ ನಿಧನರಾಗಿದ್ದಾರೆ.
ಜೂನ್‌ನಲ್ಲಿ ಅಮೆರಿಕ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಹಾಗೂ ವಿದೇಶಾಂಗ ಸಚಿವ ಆ್ಯಂಟನಿ ಬ್ಲಿಂಕನ್ ಅವರು ಜಂಟಿಯಾಗಿ ಆಯೋಜಿಸಿದ್ದ ಔತಣ ಕೂಟದಲ್ಲಿ ಪ್ರಧಾನಿ ಮೋದಿ ಭಾಗಿಯಾಗಿದ್ದರು. ಈ ವೇಳೆ ಅವರ ಮಾತುಗಳನ್ನು ಆಲಿಸಲೆಂದೇ ಕಿಸ್ಸಿಂಗರ್ ಆಗಮಿಸಿದ್ದರು. ಪ್ರಧಾನಿ ಮೋದಿ ಅವರ ಬಗ್ಗೆ ತೀವ್ರ ಅಭಿಮಾನ ಹೊಂದಿದ್ದ ಕಿಸ್ಸಿಂಗರ್, ಮೋದಿ ನೇತೃತ್ವದಲ್ಲಿ ಭಾರತ-ಅಮೆರಿಕದ ಸಂಬಂಧ ಭದ್ರಪಡಿಸಲು ಕೂಡ ಅಮೆರಿಕ ಸರ್ಕಾರಕ್ಕೆ ಸಲಹೆ ನೀಡುತ್ತಿದ್ದರು ಎನ್ನಲಾಗಿದೆ. ಇನ್ನು ಅಮೆರಿಕದ ಇತಿಹಾಸದಲ್ಲೇ ಏಕಕಾಲಕ್ಕೆ ಶ್ವೇತಭವನದ ರಾಷ್ಟ್ರೀಯ ಭದ್ರತಾ ಸಲಹೆಗಾರ ಮತ್ತು ವಿದೇಶಾಂಗ ಸಚಿವರಾಗಿ ಕಾರ್ಯನಿರ್ವಹಿಸಿದ ಏಕೈಕ ವ್ಯಕ್ತಿ ಕಿಸ್ಸಿಂಗರ್ ಆಗಿದ್ದು, ವಿದೇಶಾಂಗ ನೀತಿಯಲ್ಲೂ ಬಹುದೊಡ್ಡ ಮಟ್ಟದ ಹಿಡಿತವನ್ನು ಹೊಂದಿದ್ದರು.
ಭಾರತದ ಬಗ್ಗೆ ತಿರಸ್ಕಾರವಿತ್ತು
ಇತ್ತೀಚಿನ ವರ್ಷಗಳಲ್ಲಿ ಪ್ರಧಾನಿ ಮೋದಿ ಹಾಗೂ ಭಾರತದ ಬಗ್ಗೆ ಅಭಿಮಾನ ಹೊಂದಿದ್ದ ಕಿಸ್ಸಿಂಗರ್ 1970ರ ಸಂದರ್ಭದಲ್ಲಿ ಬಂಗಾಳ ವಿಭಜನೆಯ ವೇಳೆ ಭಾರತದ ನಾಯಕತ್ವವನ್ನು ವಿರೋಧಿಸಿದ್ದರು. ಅಲ್ಲದೇ, ಅಂದಿನ ಭಾರತದ ಪ್ರಧಾನಿ ಇಂದಿರಾ ಗಾಂಧಿ ಅವರ ವಿರುದ್ಧ ಮತ್ತು ಭಾರತೀಯರ ವಿರುದ್ಧ ಆಕ್ಷೇಪಾರ್ಹ ಪದಗಳನ್ನು ಬಳಕೆ ಮಾಡಿ, ಟೀಕೆಗೆ ಗುರಿಯಾಗಿದ್ದರು. ಕಿಸ್ಸಿಂಗರ್‌ಗೆ ನೊಬೆಲ್ ಪ್ರಶಸ್ತಿ ನೀಡುವಾಗ ನೊಬೆಲ್ ಸಮಿತಿಯ ಇಬ್ಬರು ಸದಸ್ಯರು ಅಸಮಾಧಾನ ವ್ಯಕ್ತಪಡಿಸಿ ರಾಜೀನಾಮೆ ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
Umar Khalid: ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್‌ಗೆ 7 ದಿನಗಳ ಮಧ್ಯಂತರ ಜಾಮೀನು
Loksabha:ಕಾಂಗ್ರೆಸ್ ಅಂಬೇಡ್ಕರ್ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು
MUST WATCH
ಹೊಸ ಸೇರ್ಪಡೆ
BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು
Kundapura: ಹೆಜ್ಜೇನು ದಾಳಿ; ವ್ಯಕ್ತಿ ಸಾವು
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.