ಇನ್ನೂ ಮುಗಿಯದ ಮುಸುಕಿನ ಗುದ್ದಾಟ
Team Udayavani, Nov 23, 2019, 3:08 AM IST
ಬೆಂಗಳೂರು: ರಾಜ್ಯದಲ್ಲಿ 15 ಕ್ಷೇತ್ರಗಳಲ್ಲಿ ಉಪ ಚುನಾವಣೆ ನಡೆಯುತ್ತಿದ್ದು ಕಾಂಗ್ರೆಸ್ ಹಿರಿಯ ನಾಯಕರು ಹಾಗೂ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ನಡುವಿನ ಮುಸುಕಿನ ಗುದ್ದಾಟಕ್ಕೆ ಇನ್ನೂ ತೆರೆ ಬಿದ್ದಿಲ್ಲ. ಹೀಗಾಗಿ ಎರಡೂ ಬಣ ಗಳ ನಾಯಕರ ನಡುವಿನ ಆಂತರಿಕ ಭಿನ್ನಾಭಿಪ್ರಾಯವನ್ನು ಶಮನಗೊಳಿಸಿ ಎಲ್ಲರೂ ಒಗ್ಗಟ್ಟಾಗಿ ಹೋಗುವಂತೆ ಸೂಚಿಸಲು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಹಿರಿಯ ನಾಯಕರೊಂದಿಗೆ ಸಭೆ ನಡೆಸುವ ಸಾಧ್ಯತೆ ಇದೆ.
ಉಪ ಚುನಾವಣೆಗೆ ಎಐಸಿಸಿಯಿಂದ ನೇಮಕಗೊಂಡಿರುವ ವೀಕ್ಷಕರೊಂ ದಿಗೆ ಅಧಿಕೃತ ಸಭೆ ನಡೆಸಲು ವೇಣುಗೋಪಾಲ್ ನಿರ್ಧರಿಸಿದ್ದು, ಅದರ ಹೊರತಾಗಿ ಪಕ್ಷದಲ್ಲಿ ಹಿರಿಯ ನಾಯಕರು ಹಾಗೂ ಸಿದ್ದರಾಮಯ್ಯ ನಡುವಿನ ತಿಕ್ಕಾಟ ಕಾಂಗ್ರೆಸ್ ಹೈಕಮಾಂಡ್‌ಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಉಪ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ಸಿದ್ದರಾಮಯ್ಯ ಏಕ ಪಕ್ಷೀಯ ನಿರ್ಧಾರ ತೆಗೆದುಕೊಂಡಿದ್ದು, ಅವರ ನಿರ್ಧಾರಕ್ಕೆ ಪರೋಕ್ಷವಾಗಿ ಹೈಕಮಾಂಡ್ ಕೂಡ ಬೆಂಬಲ ಸೂಚಿಸಿರುವುದು ಹಿರಿಯ ನಾಯಕರನ್ನು ಕೆರಳಿಸಿದೆ ಎನ್ನಲಾಗಿದೆ.
ರಾಜ್ಯದಲ್ಲಿನ ಬೆಳವಣಿ ಗೆಗಳ ಕುರಿತು ಪಕ್ಷದ ಉಸ್ತುವಾರಿ ಕೆ.ಸಿ. ವೇಣು ಗೋಪಾಲ್ ಕೂಡ ಸಿದ್ದರಾಮಯ್ಯ ಅವರೊಂದಿಗೆ ಹೊಂದಾಣಿಕೆ ಮಾಡಿಕೊಂಡಿ ದ್ದಾರೆಂಬ ಅನುಮಾನ ಪಕ್ಷದ ಹಿರಿಯ ನಾಯಕರಲ್ಲಿ ಮೂಡಿದೆ ಎನ್ನಲಾಗುತ್ತಿದೆ. ಅದೇ ಕಾರಣಕ್ಕೆ ಹದಿನೈದು ದಿನಗಳ ಹಿಂದೆ ವೇಣುಗೋಪಾಲ್ ಕರೆ ದಿದ್ದ ಸಭೆಯಿಂದ ಬಹುತೇಕ ಹಿರಿಯ ನಾಯಕರು ಅಂತರ ಕಾಯ್ದುಕೊಂಡಿದ್ದರು.
ಈ ಮೂಲಕ ಸಿದ್ದರಾಮಯ್ಯ ವಿಷಯ ದಲ್ಲಿ ಹೈಕಮಾಂಡ್ ನಡೆದುಕೊಳ್ಳು ತ್ತಿರುವ ರೀತಿಗೂ ಹಿರಿಯ ನಾಯಕರು ಪರೋಕ್ಷವಾಗಿ ಅಸಮಾಧಾನ ಹೊರಹಾಕಿದ್ದರು. ಈಗ ಶನಿವಾರ ವೇಣುಗೋಪಾಲ್ ಮತ್ತೆ ಪಕ್ಷದಲ್ಲಿನ ಭಿನ್ನಾಭಿಪ್ರಾಯ ಶಮನ ಮಾಡುವ ಪ್ರಯತ್ನ ನಡೆಸುವ ಸಾಧ್ಯತೆ ಇದ್ದು, ಅವರ ಕರೆಗೆ ಹಿರಿಯ ನಾಯಕರು ಸ್ಪಂದಿಸುತ್ತಾರೊ ಇಲ್ಲವೋ ಎನ್ನುವುದೂ ಕುತೂಹಲಕ್ಕೆ ಕಾರಣವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
Belagavi: ನಕಲಿ ಗಾಂಧಿಗಳನ್ನು ಮೆಚ್ಚಿಸಲು ಕನ್ನಡಿಗರ ತೆರಿಗೆ ಹಣ ಪೋಲು: ಜಗದೀಶ್ ಶೆಟ್ಟರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್
Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Ullala: ಗ್ಯಾಸ್ ಸಿಲಿಂಡರ್ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.