ತಾಂಜೇನಿಯಾ-ಭಾರತದ ಕುಟುಂಬದ ನಡುವೆ ಹೊಸ ಬಂಧ: ‌ಇಬ್ಬರ ಜೀವ ಉಳಿಸಿದ ಕಿಡ್ನಿ ಸ್ವ್ಯಾಪಿಂಗ್‌!

ಮುಂಬಯಿನಲ್ಲಿ ನಡೆಯಿತು ಅಪರೂಪದ ಶಸ್ತ್ರಚಿಕಿತ್ಸೆ

Team Udayavani, Dec 10, 2023, 12:12 AM IST

kidney

ಮುಂಬಯಿ: ಕಿಡ್ನಿ ವೈಫ‌ಲ್ಯಕ್ಕೊಳಗಾಗಿ ಜೀವನ್ಮರಣ ಹೋರಾಟ ನಡೆಸುತ್ತಿರುವ ಇಬ್ಬರು ತಾಯಂದಿರು. ಒಬ್ಬರು ಭಾರತದವರಾದರೆ, ಮತ್ತೂಬ್ಬರು ದೂರದ ತಾಂಜೇನಿಯಾದವರು. “ನನ್ನ ಕಿಡ್ನಿ ಕೊಟ್ಟಾದರೂ ಸರಿ, ಅಮ್ಮನನ್ನು ಉಳಿಸಿಕೊಳ್ಳುತ್ತೇನೆ” ಎಂದು ನಿರ್ಧರಿಸಿರುವ ಅವರ ಪುತ್ರರು. ಆದರೆ, ತಮ್ಮ ತಮ್ಮ ತಾಯಿಗೆ ಕಿಡ್ನಿ ಕೊಡಲು ಇಬ್ಬರು ಯುವಕರಿಗೂ ಬ್ಲಿಡ್‌ ಗ್ರೂಪ್‌ ಹೊಂದಿಕೆಯಾಗುತ್ತಿಲ್ಲ!

ಇಂಥ ಗೊಂದಲದಲ್ಲಿ ನಡೆದಿದ್ದೇ “ಅಪರೂಪದಲ್ಲಿ ಅಪರೂಪದ ಕಿಡ್ನಿ ಸ್ವ್ಯಾಪಿಂಗ್‌’.

ಹೌದು, ಮುಂಬಯಿನ ಆಸ್ಪತ್ರೆಯೊಂದರಲ್ಲಿ ಇದೇ ಮೊದಲ ಬಾರಿಗೆ ಇಂಥದ್ದೊಂದು ಕ್ರಾಸ್‌ಬಾರ್ಡರ್‌ ಕಿಡ್ನಿ ಸ್ವಾéಪಿಂಗ್‌ ನಡೆದಿದೆ. ಪೂರ್ವ ಆಫ್ರಿಕಾದ ದೇಶ ತಾಂಜೇನಿಯಾದ ಮಹಿಳೆಯ ಪುತ್ರನು ಭಾರತದ ಮಹಿಳೆಗೆ ತನ್ನ ಕಿಡ್ನಿಯನ್ನು ದಾನ ಮಾಡಿದರೆ, ಭಾರತದ ಮಹಿಳೆಯ ಪುತ್ರನು ತಾಂಜೇನಿಯಾದ ಮಹಿಳೆಗೆ ಕಿಡ್ನಿ ದಾನ ಮಾಡಿದ್ದಾರೆ.

ಮೂತ್ರಕೋಶ ಸಮಸ್ಯೆಯಿಂದ ಬಳಲುತ್ತಿದ್ದ ತಾಂಜೇನಿಯಾದ 58 ವರ್ಷದ ಫ್ರಾನ್ಸಿಸ್ಕಾ ಝಕಾರಿಯಾ ಅವರು ಮುಂಬಯಿನ ಆಸ್ಪತ್ರೆಗೆ ದಾಖಲಾಗಿದ್ದರು. ಕಿಡ್ನಿ ಜೋಡಣೆ ಶಸ್ತ್ರಚಿಕಿತ್ಸೆ ಮಾಡಲೇಬೇಕು ಎಂದು ವೈದ್ಯರು ಸೂಚಿಸಿದ್ದರು. ಅವರಿಗೆ ಕಿಡ್ನಿ ನೀಡಲು 32 ವರ್ಷದ ಪುತ್ರ ಮುಂದೆ ಬಂದನಾದರೂ, ತಾಯಿ-ಮಗನ ಬ್ಲಿಡ್‌ ಗ್ರೂಪ್‌ ಮ್ಯಾಚ್‌ ಆಗದ ಕಾರಣ, ಶಸ್ತ್ರಚಿಕಿತ್ಸೆ ಅಸಾಧ್ಯ ಎಂದು ವೈದ್ಯರು ಹೇಳಿದರು.

ಇದೇ ಸಂದರ್ಭದಲ್ಲಿ ಮುಂಬಯಿನವರೇ ಆದ 57 ವರ್ಷದ ಶೀಲಾ ಚೈನಾನಿ ಅವರೂ ಇದೇ ಸ್ಥಿತಿ ಎದುರಿಸುತ್ತಿದ್ದರು. ಅವರ ಮಗನ ರಕ್ತದ ಗ್ರೂಪ್‌ ಹೊಂದಿಕೆಯಾಗದ ಕಾರಣ, ಶೀಲಾ ಅವರ ಶಸ್ತ್ರಚಿಕಿತ್ಸೆಯೂ ನನೆಗುದಿಗೆ ಬಿದ್ದಿತ್ತು. ಆದರೆ, ಪವಾಡವೆಂಬಂತೆ, ಫ್ರಾನ್ಸಿಸ್ಕಾ ಅವರ ಪುತ್ರನ ರಕ್ತದ ಮಾದರಿಯೂ ಶೀಲಾರ ರಕ್ತದ ಗುಂಪಿಗೆ ಮ್ಯಾಚ್‌ ಆಗುತ್ತಿತ್ತು. ಅದೇ ರೀತಿ, ಶೀಲಾರ ಪುತ್ರನ ಬ್ಲಿಡ್‌ ಗ್ರೂಪ್‌  ಮತ್ತು ಫ್ರಾನ್ಸಿಸ್ಕಾರ ಬ್ಲಿಡ್‌ ಗ್ರೂಪ್‌ ಒಂದೇ ಆಗಿತ್ತು. ಹೀಗಾಗಿ, ಪರಸ್ಪರ ಕಿಡ್ನಿ ಸ್ವಾéಪಿಂಗ್‌ಗೆ ನಿರ್ಧರಿಸಿ, ಡಿ.4ರಂದು ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ನೆರವೇರಿತು. ಹೀಗಾಗಿ, ಪರಿಚಯವೇ ಇಲ್ಲದ ಈ ನಾಲ್ವರ ನಡುವೆ ಬಿಡಿಸಲಾಗದ ಬಂಧವೊಂದು ಏರ್ಪಟ್ಟಿತು.

ಟಾಪ್ ನ್ಯೂಸ್

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು

Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು

Shabarimala

Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್‌ ಬುಕ್ಕಿಂಗ್‌ ತಾತ್ಕಾಲಿಕ ರದ್ದು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

7

Malpe: ಮನೆ ಮನೆಗಳಲ್ಲಿ ಕ್ಯಾರೋಲ್‌ ಗಾಯನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

6

Mangaluru: ಕ್ರಿಸ್ಮಸ್‌ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು

5

Health: ಶೀಘ್ರ ಕ್ಯಾನ್ಸರ್‌ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.