ಕಮಲ ಪಡೆಗೆ ಹೊಸ ಸಾರಥಿ?- ಸಿ.ಟಿ.ರವಿಗೆ ರಾಜ್ಯ BJP ಅಧ್ಯಕ್ಷ ಸ್ಥಾನ ಸಾಧ್ಯತೆ

- ಲಿಂಗಾಯತ ಸಮುದಾಯಕ್ಕೆ ವಿಪಕ್ಷ ನಾಯಕ ಸ್ಥಾನ?

Team Udayavani, Jul 29, 2023, 10:32 PM IST

BJP FLAG 1

ಬೆಂಗಳೂರು: ಮಹತ್ವದ ಬೆಳವಣಿಗೆಯಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರಿಗೆ ಪಕ್ಷದ ರಾಷ್ಟ್ರೀಯ ಪದಾಧಿಕಾರಿಗಳ ಪಟ್ಟಿಯಿಂದ ಕೊಕ್‌ ನೀಡಲಾಗಿದ್ದು, ಅವರು ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕಗೊಳ್ಳುವ ಸಾಧ್ಯತೆ ಇದೆ ಎಂಬ ಚರ್ಚೆಗಳು ಪ್ರಾರಂಭವಾಗಿವೆ. ರಾಷ್ಟ್ರೀಯ ಪದಾಧಿಕಾರಿಗಳ ಪಟ್ಟಿಯಲ್ಲಿ ರಾಜ್ಯದ ಬಿ.ಎಲ್‌. ಸಂತೋಷ್‌ ಅವರನ್ನು ಮಾತ್ರ ಉಳಿಸಿಕೊಳ್ಳಲಾಗಿದ್ದು, ರಾಷ್ಟ್ರೀಯ ಸಂಘಟನ ಪ್ರಧಾನ ಕಾರ್ಯದರ್ಶಿಯಾಗಿ ಅವರ ಜವಾಬ್ದಾರಿ ಅಬಾಧಿತವಾಗಿದೆ.

ಶನಿವಾರ ಹೊಸ ಪದಾಧಿಕಾರಿಗಳ ಪಟ್ಟಿ ಪ್ರಕಟವಾಗಿದ್ದು, ಸಿ.ಟಿ. ರವಿ ಅವರಿಗೆ ಕೊಕ್‌ ನೀಡಿರುವುದು ತೀವ್ರ ಚರ್ಚೆಗೆ ಕಾರಣವಾಗಿದೆ. ಅದರ ಬೆನ್ನಲ್ಲೇ ಅವರಿಗೆ ರಾಜ್ಯಾಧ್ಯಕ್ಷ ಸ್ಥಾನ ಖಚಿತ ಎಂಬ ಮಾತುಗಳು ಬಿಜೆಪಿ ವಲಯದಲ್ಲೇ ಕೇಳಿಬಂದಿದೆ. ಆ. 2ರಂದು ಅವರು ದಿಲ್ಲಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂಬ ಮಾಹಿತಿ ಇನ್ನಷ್ಟು ಕುತೂಹಲಕ್ಕೆ ಕಾರಣವಾಗಿದೆ. ಹೀಗಾಗಿ ವಿಪಕ್ಷ ನಾಯಕ ಸ್ಥಾನ ಲಿಂಗಾಯತ ಸಮುದಾಯಕ್ಕೆ ಒಲಿಯಬಹುದೆಂದು ತರ್ಕಿಸಲಾಗುತ್ತಿದೆ.

ಇದರ ಬೆನ್ನಲ್ಲೇ ಟ್ವೀಟ್‌ ಮಾಡಿರುವ ಸಿ.ಟಿ. ರವಿ, ವಿಶ್ವದ ಅತಿದೊಡ್ಡ ರಾಜಕೀಯ ಪಕ್ಷವಾದ ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಲು ಅವಕಾಶ ಮಾಡಿಕೊಟ್ಟ ಜೆ.ಪಿ. ನಡ್ಡಾ ಅವರಿಗೆ ತುಂಬು ಹೃದಯದ ಧನ್ಯವಾದಗಳು. ಈ ಜವಾಬ್ದಾರಿ ನನಗೆ ಬಹಳಷ್ಟು ಅನುಭವ ಮತ್ತು ಹೊಸ ಆಯಾಮವನ್ನು ನೀಡಿದೆ. ಬೂತ್‌ ಮಟ್ಟದ ಕಾರ್ಯಕರ್ತನಿಂದ ಹಿಡಿದು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸ್ಥಾನದವರೆಗಿನ ನನ್ನ ಪಯಣದಲ್ಲಿ ನಿರಂತರವಾಗಿ ಕಾರ್ಯಕರ್ತನ ಭಾವದಲ್ಲಿ ಕೆಲಸ ಮಾಡಿದ್ದೇನೆ. ಇನ್ನು ಮುಂದೆಯೂ ಅದೇ ರೀತಿ ಕೆಲಸ ಮಾಡುತ್ತೇನೆ. ಪಕ್ಷ ನೀಡಿದ ಜವಾಬ್ದಾರಿಯನ್ನು ಕಾಯಾ ವಾಚಾ ಮನಸಾ ನಡೆಸುತ್ತೇನೆ ಎಂದು ಬರೆ ದು ಕೊಂಡಿದ್ದಾರೆ.

ಸಂತೋಷ್‌ ಮಾತ್ರ
ಈ ಬಾರಿ ಪರಿಷ್ಕರಣೆಗೊಂಡ ಪದಾಧಿಕಾರಿಗಳ ಪಟ್ಟಿಯಲ್ಲಿ ರಾಜ್ಯದಿಂದ ಬಿ.ಎಲ್‌. ಸಂತೋಷ್‌ ಹೆಸರು ಮಾತ್ರ ಉಳಿದುಕೊಂಡಿದೆ. ರಾಷ್ಟ್ರೀಯ ಸಂಘಟನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಯಾವುದೇ ಅವಧಿ ನಿಗದಿಯಾಗಿರುವುದಿಲ್ಲ. ಆರೆಸ್ಸೆಸ್‌ ವಾಪಸ್‌ ಕರೆಸಿಕೊಳ್ಳಲು ಬಯಸಿದಾಗ ಮಾತ್ರ ಆ ಹುದ್ದೆಗೆ ನೇಮಕಗೊಂಡ ವ್ಯಕ್ತಿಗಳು ಬದಲಾಗುತ್ತಾರೆ. ಹೀಗಾಗಿ ಸಂತೋಷ್‌ ಹೆಸರು ಪಟ್ಟಿಯಲ್ಲಿ ಉಳಿದುಕೊಂಡಿರುವುದಕ್ಕೆ ಪಕ್ಷದ ರಾಷ್ಟ್ರೀಯ ಲೆಕ್ಕಾಚಾರಗಳ ದೃಷ್ಟಿಯಿಂದ ಯಾವುದೇ ಮಹತ್ವವಿಲ್ಲ. ಆದರೆ ರಾಜ್ಯ ಬಿಜೆಪಿ ಬಣ ರಾಜಕಾರಣದ ಮಸೂರದಿಂದ ನೋಡಿದಾಗ ಈ ಬೆಳವಣಿಗೆ ಕುತೂಹಲಕ್ಕೆ ಕಾರಣವಾಗಿದೆ. ಟಿಕೆಟ್‌ ಹಂಚಿಕೆಯಲ್ಲಿ ಮಾಡಿದ ಪ್ರಯೋಗದಿಂದ ಪಕ್ಷಕ್ಕೆ ಸೋಲಾಯಿತು, ಇದಕ್ಕೆ ಸಂತೋಷ್‌ ನೇರ ಕಾರಣ ಎಂಬ ದೂರುಗಳು ವರಿಷ್ಠರ ನೆಲೆಯಲ್ಲಿ ಯಾವುದೇ ಪರಿಣಾಮ ಬೀರಿಲ್ಲ ಎಂದು ಇದರಿಂದ ಅರ್ಥೈಸಬಹುದಾಗಿದೆ.

ಬಿಎಸ್‌ವೈ ಸಹಕಾರ ಕೋರಿದ್ದ ರವಿ?
ಈ ಬೆಳವಣಿಗೆಗೂ ಕೆಲವು ದಿನಗಳ ಹಿಂದೆ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಸಿ.ಟಿ. ರವಿ ಆಶೀರ್ವಾದ ಪಡೆದ ಫೋಟೋಕ್ಕೂ ಹೊಂದಾಣಿಕೆಯಾಗುತ್ತಿದ್ದು, ವರಿಷ್ಠರ ಸೂಚನೆ ಮೇರೆಗೆ ರವಿ ಅವರು ಯಡಿಯೂರಪ್ಪನವರ ಸಹಕಾರ ಕೋರಿ ಬಂದಿದ್ದರೆಂದು ವ್ಯಾಖ್ಯಾನಿಸಲಾಗಿದೆ. ಅಲ್ಲದೆ ಬಿ.ವೈ.ವಿಜಯೇಂದ್ರ ಅವರಿಗೆ ರಾಜ್ಯ ಪ್ರಧಾನ ಕಾರ್ಯದರ್ಶಿ ಪಟ್ಟ ಕಟ್ಟುವುದು ಖಚಿತ ಎಂದು ವಿಶ್ಲೇಷಿಸಲಾಗುತ್ತಿದೆ.

ವಿಪಕ್ಷ ನಾಯಕ ಯಾರು?
ರಾಜ್ಯಾಧ್ಯಕ್ಷ ಸ್ಥಾನ ಒಕ್ಕಲಿಗ ಸಮುದಾಯಕ್ಕೆ ಸೇರಿದ ಸಿ.ಟಿ. ರವಿಯವರಿಗೆ ದೊರೆತರೆ ಲಿಂಗಾಯತ ಸಮುದಾಯಕ್ಕೆ ಸೇರಿದ ನಾಯಕರಿಗೆ ವಿಪಕ್ಷ ನಾಯಕ ಸ್ಥಾನ ನೀಡುವ ಸಾಧ್ಯತೆ ಹೆಚ್ಚಿದೆ. ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಕೇಂದ್ರದ ಮಾಜಿ ಸಚಿವ ಬಸನಗೌಡ ಪಾಟೀಲ್‌ ಯತ್ನಾಳ್‌ ಮಧ್ಯೆ ಪೈಪೋಟಿ ಹೆಚ್ಚಿದ್ದು, ಅಂತಿಮ ಹಂತದಲ್ಲಿ ಹೊಸ ಪ್ರಯೋಗ ದೃಷ್ಟಿಯಿಂದ ಅರವಿಂದ ಬೆಲ್ಲದ್‌ ನೇಮಕಗೊಂಡರೂ ಅಚ್ಚರಿ ಇಲ್ಲ ಎಂದು ಬಿಜೆಪಿ ಮೂಲಗಳು ತರ್ಕಿಸುತ್ತಿವೆ.

ಟಾಪ್ ನ್ಯೂಸ್

Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ

Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾವು, 20 ಮಂದಿ ರಕ್ಷಣೆ

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ

Basavaraj-horatti

Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್‌ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?

BGV-Gandhi-bharatha

Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ

1-horoscope

Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

Basavaraj-horatti

Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್‌ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?

BGV-Gandhi-bharatha

Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ

Munirathna

Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ

FIR–Court

FIR Register: ಜಡ್ಜ್ ಹೆಸರಲ್ಲಿ ಲಂಚಕ್ಕೆ ಬೇಡಿಕೆಯ ಆರೋಪ: ವಕೀಲೆ ವಿರುದ್ಧ ದೂರು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ

Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ

2-shirva

Shirva ಹ‌ಳೆವಿದ್ಯಾರ್ಥಿ ಸಂಘ; ಡಿ.29: ದಶಮಾನೋತ್ಸವ, ನೂತನ ಉಪಹಾರ ಗೃಹ ಸಮರ್ಪಣೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾವು, 20 ಮಂದಿ ರಕ್ಷಣೆ

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.