ಆರಂಭವಾಗದ ಮಳೆಗಾಲ ಪೂರ್ವಸಿದ್ಧತೆ

ಗಂಗೊಳ್ಳಿ: ಅಸಮರ್ಪಕ ಚರಂಡಿ ವ್ಯವಸ್ಥೆ, ಹೂಳು ಸಮಸ್ಯೆ

Team Udayavani, May 26, 2020, 5:45 AM IST

ಆರಂಭವಾಗದ ಮಳೆಗಾಲ ಪೂರ್ವಸಿದ್ಧತೆ

ಗಂಗೊಳ್ಳಿ: ಕುಂದಾಪುರ ತಾಲೂಕಿನಲ್ಲಿಯೇ ದೊಡ್ಡ ಗ್ರಾ.ಪಂ. ಆಗಿರುವ ಗಂಗೊಳ್ಳಿಯಲ್ಲಿ ಮಳೆಗಾಲ ಆರಂಭವಾದರೆ ಸಂಕಷ್ಟಗಳ ಸುರಿಮಳೆಯೇ ಆರಂಭವಾಗುತ್ತದೆ. ಇನ್ನೇನು ಕೆಲವೇ ದಿನಗಳಲ್ಲಿ ಮಳೆಗಾಲ ಶುರುವಾಗಲಿದ್ದು, ಚರಂಡಿ ಹೂಳೆತ್ತುವ, ಮುಂಗಾರು ಪೂರ್ವದಲ್ಲಿ ಕೈಗೊಳ್ಳಬೇಕಾದ ಕೆಲಸಗಳ ಬಗ್ಗೆ ಸ್ಥಳೀಯಾಡಳಿತ ಮೌನ ವಹಿಸಿದಂತಿದೆ.

ಗಂಗೊಳ್ಳಿಯಲ್ಲಿ ಮಳೆ ನೀರು ಹರಿದುಹೋಗಲು ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದೆ ಇರುವುದರಿಂದ ಮಳೆ ನೀರು ರಸ್ತೆಗೆ, ಮನೆಗಳಿಗೆ ನುಗ್ಗಿ ಸಮಸ್ಯೆ ಇನ್ನಷ್ಟು ಜಟಿಲವಾಗುವ ಸಾಧ್ಯತೆ ಹೆಚ್ಚಾಗಿದೆ. ಮಳೆ ನೀರು ಸರಾಗವಾಗಿ ಹರಿದು ಹೋಗಲು ಸಮರ್ಪಕ ಚರಂಡಿ ವ್ಯವಸ್ಥೆ ಇಲ್ಲದಿರುವುದು ಹಾಗೂ ಇರುವ ಚರಂಡಿಗಳನ್ನು ನಿರ್ವಹಣೆ ಮಾಡುವಲ್ಲಿ ಸ್ಥಳೀಯಾಡಳಿತ ವಿಫಲವಾಗಿರುವುದು ಮಳೆಗಾಲದಲ್ಲಿ ಅನಾಹುತಗಳಿಗೆ ಎಡೆ ಮಾಡಿಕೊಡುತ್ತಿದೆ.

ಪಂಚಾಯತ್‌ ವ್ಯಾಪ್ತಿಯ ಅರೆಕಲ್ಲು, ವಿಜಯ ವಿಠಲ ಮಂಟಪದ ಬಳಿ, ಮ್ಯಾಂಗನೀಸ್‌ ರೋಡ್‌ ವಠಾರ, ರಥಬೀದಿ ಸಮೀಪ ಮುಖ್ಯರಸ್ತೆಯಲ್ಲಿ ಮಳೆಗಾಲದ ಸಂದರ್ಭ ಮಳೆ ನೀರು ಶೇಖರಣೆಗೊಂಡು ಕೃತಕ ಕೆರೆ ನಿರ್ಮಾಣವಾಗುತ್ತದೆ.

ಕೂಡಲೇ ಪಂಚಾಯತ್‌ ವ್ಯಾಪ್ತಿಯ ಎಲ್ಲ ಚರಂಡಿಗಳನ್ನು ಸ್ವತ್ಛಗೊಳಿಸಬೇಕು. ಚರಂಡಿಗಳಲ್ಲಿರುವ ಹೂಳನ್ನು ತೆಗೆದು ಮಳೆನೀರು ಸರಾಗವಾಗಿ ಹರಿದು ಹೋಗಲು ವ್ಯವಸ್ಥೆ ಮಾಡಿಕೊಡಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

ದೊಡ್ಡ ಹಿತ್ಲು: ತ್ಯಾಜ್ಯ ರಾಶಿ
ಮ್ಯಾಂಗನೀಸ್‌ ರಸ್ತೆ ಬಳಿಯಿಂದ ಚರ್ಚ್‌ ರಸ್ತೆ ಮೂಲಕ ಮತ್ತು ಶ್ರೀ ವಿಜಯ ವಿಠಲ ಮಂಟಪದ ಬಳಿಯಿಂದ ಮುಖ್ಯರಸ್ತೆ ಮೂಲಕ ಚರ್ಚ್‌ ರಸ್ತೆಗೆ ಸಾಗಿ ದುರ್ಗಿಕೇರಿ ಚರಂಡಿ ಯಲ್ಲಿ ಮಳೆ ನೀರು ಹರಿದು ಹೋಗುವ ವ್ಯವಸ್ಥೆಯಿದ್ದು, ಈ ಚರಂಡಿ ಹಾಗೂ ಅರೆಕಲ್ಲು ಪ್ರದೇಶದ ಮೂಲಕ ಸಾಗುವ ಚರಂಡಿಯು ಅತಿಕ್ರಮಣಗೊಂಡು ಚರಂಡಿ ಚಿಕ್ಕದಾಗುತ್ತಿದೆ. ಚರಂಡಿಯಲ್ಲಿ ಮಣ್ಣು ರಾಶಿ ಹಾಕಲಾಗಿದ್ದು, ಮಳೆ ನೀರು ಹರಿದು ಹೋಗುವುದು ಕಷ್ಟ. ಅದಲ್ಲದೆ ಅಪಾರ ಪ್ರಮಾಣದ ತ್ಯಾಜ್ಯ ಹಾಗೂ ಹೂಳು ತುಂಬಿಕೊಂಡಿದ್ದು, ಗಿಡಗಂಟಿಗಳು ಬೆಳೆದು ನಿಂತಿವೆ. ದೊಡ್ಡಹಿತ್ಲು ಚರಂಡಿಯಲ್ಲಿ ಮಳೆ ನೀರು ಹರಿದು ಹೋಗಲು ಸಾಧ್ಯವಿಲ್ಲದಷ್ಟು ತ್ಯಾಜ್ಯ ತುಂಬಿದೆ.

ಇಂದು ಸಭೆ
ಗ್ರಾ.ಪಂ. ವ್ಯಾಪ್ತಿಯಲ್ಲಿ ಕೈಗೊಳ್ಳಬೇಕಾದ ಮುಂಗಾರು ಪೂರ್ವ ಸಿದ್ಧತೆಗಳ ಬಗ್ಗೆ ಚರ್ಚಿಸಲು ಮೇ 26 ರಂದು ಗ್ರಾ.ಪಂ. ಕಚೇರಿಯಲ್ಲಿ ಅಧ್ಯಕ್ಷರ ನೇತೃತ್ವದಲ್ಲಿ ಸಭೆ ಕರೆಯಲಾಗಿದೆ. ಸಭೆಯಲ್ಲಿ ಚರಂಡಿ ಹೂಳೆತ್ತುವ ಬಗ್ಗೆ,ಗಿಡ ಗಂಟಿಗಳ ತೆರವು ಬಗ್ಗೆ ಚರ್ಚಿಸಲಾಗುವುದು.
ವಾಸುದೇವ ಶೇರುಗಾರ್‌,
ಗಂಗೊಳ್ಳಿ ಗ್ರಾ.ಪಂ. ಕಾರ್ಯದರ್ಶಿ

ಟಾಪ್ ನ್ಯೂಸ್

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

dw

Malpe: ಕಲ್ಮಾಡಿ; ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು

Brahmavar: ಕೊಕ್ಕರ್ಣೆ; ಜುಗಾರಿ ನಿರತನ ಬಂಧನ

Brahmavar: ಕೊಕ್ಕರ್ಣೆ; ಜುಗಾರಿ ನಿರತನ ಬಂಧನ

8

Kundapura: ಬೋಟ್‌ ರೈಡರ್‌ ನಾಪತ್ತೆ; ಸಿಗದ ಸುಳಿವು

13

Kundapura: ಮನೆಗೆ ನುಗ್ಗಿ ಚಿನ್ನಾಭರಣ ಕಳವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

1-ronak

National Badminton: ರೋಣಕ್‌ ಚೌಹಾಣ್‌ ಸೆಮಿಗೆ

ICC

Champions Trophy: ದುಬಾೖಯಲ್ಲಿ ಭಾರತದ ಪಂದ್ಯಗಳು: ನಾಕೌಟ್‌ ಹಂತಕ್ಕೇರಿದರೆ?

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.