ಕಾಡಿನ ನಡುವೆ ತೇಜಸ್ವಿ ಕೃತಿಗಳ ಓದು- ರಾಣಿಝರಿ ಬಲ್ಲಾಳರಾಯನ ದುರ್ಗದಲ್ಲಿ ಕಾರ್ಯಕ್ರಮ
ತೇಜಸ್ವಿ ಪ್ರತಿಷ್ಠಾನದಿಂದ ಕಾಡಿನಲ್ಲಿ ಓದು ನಡಿಗೆ ಆಯೋಜನೆ
Team Udayavani, Jan 28, 2024, 6:17 PM IST
ಕೊಟ್ಟಿಗೆಹಾರ: ಸದಾ ಪ್ರವಾಸಿಗರಿಂದ ಗಿಜಿಗುಡುವ ರಾಣಿಝರಿ ಬಲ್ಲಾಳರಾಯನ ದುರ್ಗದಲ್ಲಿ ಶನಿವಾರ ಪರಿಸರ ಸಂರಕ್ಷಣೆಯ ಕುರಿತ ತೇಜಸ್ವಿ ಅವರ ಕೃತಿಗಳ ಓದಿನ ಸದ್ದು ಎಲ್ಲೆಡೆ ಮನೆ ಮಾಡಿತ್ತು.
ಕೊಟ್ಟಿಗೆಹಾರದ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದ ವತಿಯಿಂದ ರಾಣಿಝರಿ ಬಲ್ಲಾಳರಾಯನ ದುರ್ಗದಲ್ಲಿ ಆಯೋಜಿಸಿದ್ದ ಕಾಡಿನಲ್ಲಿ ಓದು ನಡಿಗೆ ಕಾರ್ಯಕ್ರಮದಲ್ಲಿ ರಾಜ್ಯದ ವಿವಿದೆಡೆಯಿಂದ ಆಗಮಿಸಿದ ಚಾರಣಿಗರು ಸುತ್ತ ಕಣ್ಣು ಆಯಿಸಿದಷ್ಟು ದೂರವೂ ಹಬ್ಬಿರುವ ಹಸಿರು ಅರಣ್ಯದ ನಡುವೆ ಒಂದೆಡೆ ಸೇರಿ ತೇಜಸ್ವಿ ಕೃತಿಗಳ ಕೆಲ ಸಾಲುಗಳನ್ನು ಓದಿದರು.
ಕೀಟತಜ್ಞರಾದ ಮೂಡಿಗೆರೆಯ ಅವಿನಾಶ್ ಮಾತನಾಡಿ, ಪರಿಸರದ ಬಗ್ಗೆ ಬೆರಗು ಮತ್ತು ಪರಿಸರದ ಉಳಿವಿನ ಮಹತ್ವವನ್ನು ತೇಜಸ್ವಿ ಅವರು ತಮ್ಮ ಬಹುತೇಕ ಕೃತಿಗಳಲ್ಲಿ ಪ್ರತಿಪಾದಿಸಿದ್ದಾರೆ. ತೇಜಸ್ವಿ ಕೃತಿಗಳಿಂದಾಗಿ ಹೊಸದೊಂದು ಓದುಗ ವರ್ಗ ಸೃಷ್ಠಿಯಾಗಿ ಓದಿನ ರುಚಿ ಎಲ್ಲರಲ್ಲೂ ಮೂಡುತ್ತಿದೆ. ಪರಿಸರ, ಜೀವಸಂಕುಲ, ಬಾಹ್ಯಾಕಾಶ, ಮುಂತಾದ ವಿಷಯಗಳ ಬಗ್ಗೆ ತೇಜಸ್ವಿ ಅವರು ತಮ್ಮ ಕೃತಿಗಳಲ್ಲಿ ಮನಮುಟ್ಟುವಂತೆ ಚಿತ್ರಿಸಿದ್ದಾರೆ ಎಂದರು.
ಮಂಡ್ಯದ ಅಂಶು ಅವರು ಪರಿಸರದ ಕಥೆ, ಚಿಕ್ಕಮಗಳೂರಿನ ಕಾರ್ತಿಕ್ ಎಂ.ಕೆ ಹುಲಿಯೂರಿನ ಸರಹದ್ದು, ದೀಪಗೌಡ ಅವರು ಪಾಕಕ್ರಾಂತಿ, ತುಮಕೂರಿನ ಪಲ್ಲವಿ ರಂಗನಾಥ್ ಮಾಯಾಲೋಕ, ಚಿತ್ರದುರ್ಗದ ದಿನೇಶ್ ಕೆ.ಎಸ್ ಅವರು ಮಿಸ್ಸಿಂಗ್ ಲಿಂಕ್, ಬೆಂಗಳೂರಿನ ಪ್ರೇಮ ಅವರು ಹೆಜ್ಜೆ ಮೂಡದ ಹಾದಿ, ಬೆಂಗಳೂರಿನ ಸುನಿತಾ ಮತ್ತು ವಿನೋದ್ ಅವರು ವಿಸ್ಮಯ ವಿಶ್ವ, ಶಿರಾದ ಶ್ರೀನಾಥ್ ಅವರು ಪಾಕಕ್ರಾಂತಿ, ಮೂಡಿಗೆರೆಯ ಅವಿನಾಶ್ ಅವರು ಪಾಕಕ್ರಾಂತಿ, ನಂದೀಶ್ ಬಂಕೇನಹಳ್ಳಿ ಅವರು ಕರ್ವಾಲೊ ಕೃತಿಯನ್ನು ಓದಿದರು. ಚಿಕ್ಕಮಗಳೂರಿನ ಸತ್ಯನಾರಾಯಣ, ಓಂಕಾರಪ್ಪ, ಹಾಸನದ ಬಾಲು ತೇಜಸ್ವಿ ಅವರ ಬದುಕು ಬರಹದ ಕುರಿತು ಚರ್ಚೆ ನಡೆಸಿದರು.
ಪರಿಸರದ ಸಂರಕ್ಷಣೆ, ತೇಜಸ್ವಿ ಅವರ ಬದುಕು, ಬರಹಗಳ ಬಗ್ಗೆ ವಿಚಾರ ವಿನಿಮಯ ನಡೆಯಿತು. ಕಾಡಿನಲ್ಲಿ ಓದು ಕಾರ್ಯಕ್ರಮಕ್ಕೂ ಮುನ್ನ ರಾಣಿಝರಿಯಿಂದ ಬಲ್ಲಾಳರಾಯನ ದುರ್ಗಕ್ಕೆ ಚಾರಣ ನಡೆಸಲಾಯಿತು. ಕೀಟತಜ್ಞರಾದ ಅವಿನಾಶ್ ಅವರು ಕೀಟಗಳ ಬಗ್ಗೆ ಮಾಹಿತಿ ನೀಡಿದರು. ಪ್ಲಾಸ್ಟಿಕ್ ನ್ನು ಎಲ್ಲಿಯೂ ಬಳಕೆ ಮಾಡದೇ ಪ್ಲಾಸ್ಟಿಕ್‌ಮುಕ್ತ ಚಾರಣ ಕಾರ್ಯಕ್ರಮ ಎಲ್ಲರ ಗಮನ ಸೆಳೆಯಿತು.
ಈ ಸಂದರ್ಭದಲ್ಲಿ ಕೀಟ ತಜ್ಞರಾದ ಅವಿನಾಶ್, ತೇಜಸ್ವಿ ಅವರ ಒಡನಾಡಿ ಹಾಗೂ ಕಲಾವಿದರಾದ ಬಾಪುದಿನೇಶ್, ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದ ಸಂಯೋಜಕ ನಂದೀಶ್ ಬಂಕೇನಹಳ್ಳಿ, ಸಿಬ್ಬಂದಿಗಳಾದ ಸತೀಶ್ ತರುವೆ, ಸಂಗೀತಾ, ಅರಣ್ಯ ಇಲಾಖೆಯ ಅಧಿಕಾರಿಗಳಾದ ಅಭಿಲಾಷ್, ಚಂದನ್, ಸಿಬ್ಬಂದಿ ಭವಿತ್ ಹಾಗೂ ರಾಜ್ಯದ ವಿವಿದೆಡೆಯಿಂದ ಆಗಮಿಸಿದ 40 ಕ್ಕೂ ಹೆಚ್ಚು ಚಾರಣಿಗರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: 5 ವರ್ಷದ ಮಗು ಮೇಲೆ ಬೀದಿ ನಾಯಿ ದಾಳಿ
Chikkamagaluru: ಪ್ರವಾಸಕ್ಕೆ ಬಂದಿದ್ದ ಶಾಲಾ ಮಕ್ಕಳ ವ್ಯಾನ್ ಪಲ್ಟಿ; ಗಾಯ
Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ
CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
ಕೊಡುವುದರಿಂದ ಕೊರತೆಯಾಗದು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.