ಕರಾವಳಿಯಾದ್ಯಂತ ವಿಶೇಷ ಬಲಿಪೂಜೆ, ಕ್ರಿಸ್ಮಸ್‌ ಸಂಭ್ರಮದ ಆಚರಣೆ

Team Udayavani, Dec 25, 2021, 6:35 AM IST

aಕರಾವಳಿಯಾದ್ಯಂತ ವಿಶೇಷ ಬಲಿಪೂಜೆ, ಕ್ರಿಸ್ಮಸ್‌ ಸಂಭ್ರಮದ ಆಚರಣೆ

ಮಂಗಳೂರು/ಉಡುಪಿ: ಕೊರೊನಾ ಭೀತಿಯ ನಡುವೆಯೂ ಏಸು ಕ್ರಿಸ್ತರ ಜನ್ಮದಿನವಾದ ಕ್ರಿಸ್ಮಸ್‌ ಹಬ್ಬವನ್ನು ಕ್ರೈಸ್ತ ಬಾಂಧವರು ಕರಾವಳಿಯಾದ್ಯಂತ ಶುಕ್ರವಾರ ರಾತ್ರಿ ಭಕ್ತಿ, ಶ್ರದ್ಧೆ, ಸಂಭ್ರಮ ಸಡಗರದಿಂದ ಆಚರಿಸಿದರು.

ದ.ಕ. ಜಿಲ್ಲೆಯ ಚರ್ಚ್‌ಗಳನ್ನು ವಿದ್ಯುತ್‌ ದೀಪಗಳಿಂದ ಅಲಂಕರಿಸಲಾಗಿತ್ತು. ಚರ್ಚ್‌ ಆವರಣದಲ್ಲಿ ಮತ್ತು ಕ್ರೈಸ್ತರ ಮನೆ ಆವರಣದಲ್ಲಿ ಆಕರ್ಷಕ ಕ್ರಿಬ್‌ಗಳನ್ನು (ಗೋದಲಿ) ನಿರ್ಮಿಸಲಾಗಿತ್ತು, ನಕ್ಷತ್ರಗಳನ್ನು ಜೋಡಿಸಲಾಗಿತ್ತು.
ಚರ್ಚ್‌ಗಳಲ್ಲಿ ರಾತ್ರಿ ವೇಳೆ ಜರಗಿದ ವಿಶೇಷ ಪ್ರಾರ್ಥನೆಗಳಲ್ಲಿ ಕ್ರೈಸ್ತರು ಅಧಿಕ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಕ್ರಿಸ್ಮಸ್‌ ಗೀತೆಗಳನ್ನು (ಕ್ಯಾರಲ್ಸ್‌) ಹಾಡಿ ಯೇಸು ಕ್ರಿಸ್ತರ ಜನನವನ್ನು ಸ್ಮರಿಸಿ ಯೇಸು ಕಂದನಿಗೆ ನಮಿಸಿದರು.

ಮಂಗಳೂರು ಧರ್ಮ ಪ್ರಾಂತದ ಬಿಷಪ್‌ ರೈ| ರೆ| ಡಾ| ಪೀಟರ್‌ ಪಾವ್ಲ್ ಸಲ್ಡಾನ್ಹಾ ಅವರು ಮೂಡುಬಿದಿರೆ ತಾಲೂಕಿನ ನೆಲ್ಲಿಕಾರು ಸೈಂಟ್‌ ವಿಕ್ಟರ್ ಚರ್ಚ್‌ನಲ್ಲಿ ಕ್ರಿಸ್ಮಸ್‌ ಹಬ್ಬದ ಬಲಿ ಪೂಜೆ ಅರ್ಪಿಸಿ ಸಂದೇಶ ನೀಡಿದರು. ಚರ್ಚ್‌ನ ಧರ್ಮಗುರು ವಂ| ಮೆಲ್ವಿನ್‌ ಜಾನ್‌ ಡಿ’ಸೋಜಾ, ಉಪಾಧ್ಯಕ್ಷರಾದ ಲಿಲ್ಲಿ ಫೆರ್ನಾಂಡಿಸ್‌, ಕಾರ್ಯದರ್ಶಿ ಹೆಲೆನ್‌ ಡಿ’ಸೋಜಾ ಉಪಸ್ಥಿತರಿದ್ದರು.

ಬಲಿ ಪೂಜೆಯ ಬಳಿಕ ಕ್ರೈಸ್ತರು ಹಬ್ಬದ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು. ಇದೇ ಸಂದರ್ಭ ಕೇಕ್‌ ವಿತರಿಸಲಾಯಿತು. ಮಂಗಳೂರು ಧರ್ಮ ಪ್ರಾಂತದ ಪ್ರಧಾನ ಗುರು ಮೊ| ಮ್ಯಾಕ್ಸಿಂ ಎಲ್‌. ನೊರೊನ್ಹಾ ಅವರು ಕಿನ್ನಿಗೋಳಿ ಚರ್ಚ್‌ನಲ್ಲಿ ನಡೆದ ಬಲಿಪೂಜೆಯಲ್ಲಿ ಭಾಗವಹಿಸಿದ್ದರು.

ಇದನ್ನೂ ಓದಿ:ಪ್ರೊ ಕಬಡ್ಡಿ: ಬೆಂಗಳೂರು ಬುಲ್ಸ್‌ಗೆ ತಲೆಬಾಗಿದ ತಮಿಳ್‌ ತಲೈವಾಸ್‌

ಕೊರೊನಾ ರೂಪಾಂತರಿತ ವೈರಸ್‌ ಒಮಿಕ್ರಾನ್‌ ಆತಂಕದ ಹಿನ್ನೆಲೆಯಲ್ಲಿ ಸರಕಾರದ ಮಾರ್ಗಸೂಚಿ ಪಾಲಿಸಿ ಕಾರ್ಯಕ್ರಮಗಳು ನಡೆದವು.

ಶನಿವಾರ ಕ್ರಿಸ್ಮಸ್‌ ಹಬ್ಬದ ಆಚರಣೆ ನಡೆಯಲಿದೆ. ಚರ್ಚ್‌ಗಳಲ್ಲಿ ಹಬ್ಬದ ಬಲಿ ಪೂಜೆ, ಶುಭಾಶಯಗಳ ವಿನಿಮಯ ನಡೆಯುವುದು. ಮನೆಗಳಲ್ಲಿ ಕ್ರಿಸ್ಮಸ್‌ ವಿಶೇಷ ತಿಂಡಿ ತಿನಿಸು “ಕುಸ್ವಾರ್‌’ ವಿನಿಮಯ ಮತ್ತು ಹಬ್ಬದ ಭೋಜನದೊಂದಿಗೆ ಹಬ್ಬದ ಸಂಭ್ರಮ ನೆರವೇರಲಿದೆ.

ಟಾಪ್ ನ್ಯೂಸ್

ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ ಪ್ರಕರಣ: ಪೊಲೀಸ್‌ ಕ್ರಮಕ್ಕೆ ಕೇರಳ ಸಿಎಂ ಸೂಚನೆ

ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ ಪ್ರಕರಣ: ಪೊಲೀಸ್‌ ಕ್ರಮಕ್ಕೆ ಕೇರಳ ಸಿಎಂ ಸೂಚನೆ

Mangaluru: ಡಿ.14ರಂದು ರಾಷ್ಟ್ರೀಯ ಲೋಕ ಅದಾಲತ್‌

Mangaluru: ಡಿ.14ರಂದು ರಾಷ್ಟ್ರೀಯ ಲೋಕ ಅದಾಲತ್‌

Sullia: ಸ್ಕೂಟಿಗೆ ಢಿಕ್ಕಿಯಾದ ಬಸ್‌: ವಿದ್ಯಾರ್ಥಿನಿ ಸಾವು

Sullia: ಸ್ಕೂಟಿಗೆ ಢಿಕ್ಕಿಯಾದ ಬಸ್‌: ವಿದ್ಯಾರ್ಥಿನಿ ಸಾವು

Uppinangady ದಾರಿ ವಿವಾದ: ಸಂಬಂಧಿಯನ್ನೇ ಕಡಿದು ಕೊ*ಲೆ

Uppinangady ದಾರಿ ವಿವಾದ: ಸಂಬಂಧಿಯನ್ನೇ ಕಡಿದು ಕೊ*ಲೆ

Mulki: ಚಿನ್ನಾಭರಣ ಕಳವು: ಆರೋಪಿ ಬಂಧನ

Mulki: ಚಿನ್ನಾಭರಣ ಕಳವು: ಆರೋಪಿ ಬಂಧನ

Ajekar Case: ನ್ಯಾಯಾಂಗ ಬಂಧನ ವಿಸ್ತರಣೆ

Ajekar Case: ನ್ಯಾಯಾಂಗ ಬಂಧನ ವಿಸ್ತರಣೆ

Uppinangady: ಮಹಿಳೆ ನೇಣು ಬಿಗಿದುಕೊಂಡು ಆತ್ಮಹ*ತ್ಯೆ

Uppinangady: ಮಹಿಳೆ ನೇಣು ಬಿಗಿದುಕೊಂಡು ಆತ್ಮಹ*ತ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ajekar Case: ನ್ಯಾಯಾಂಗ ಬಂಧನ ವಿಸ್ತರಣೆ

Ajekar Case: ನ್ಯಾಯಾಂಗ ಬಂಧನ ವಿಸ್ತರಣೆ

Karkala Parashurama statue Case: ಶಿಲ್ಪಿ ಕೃಷ್ಣ ನಾಯ್ಕ ಜಾಮೀನು ಅರ್ಜಿ ತಿರಸ್ಕೃತ

Karkala Parashurama statue Case: ಶಿಲ್ಪಿ ಕೃಷ್ಣ ನಾಯ್ಕ ಜಾಮೀನು ಅರ್ಜಿ ತಿರಸ್ಕೃತ

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ ಕಾಮಗಾರಿ ಮಗುಚಿ ಬಿದ್ದ ಕ್ರೇನ್‌; ತಪ್ಪಿದ ಅನಾಹುತ

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ ಕಾಮಗಾರಿ ಮಗುಚಿ ಬಿದ್ದ ಕ್ರೇನ್‌; ತಪ್ಪಿದ ಅನಾಹುತ

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ ಪ್ರಕರಣ: ಪೊಲೀಸ್‌ ಕ್ರಮಕ್ಕೆ ಕೇರಳ ಸಿಎಂ ಸೂಚನೆ

ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ ಪ್ರಕರಣ: ಪೊಲೀಸ್‌ ಕ್ರಮಕ್ಕೆ ಕೇರಳ ಸಿಎಂ ಸೂಚನೆ

Mangaluru: ಡಿ.14ರಂದು ರಾಷ್ಟ್ರೀಯ ಲೋಕ ಅದಾಲತ್‌

Mangaluru: ಡಿ.14ರಂದು ರಾಷ್ಟ್ರೀಯ ಲೋಕ ಅದಾಲತ್‌

Sullia: ಸ್ಕೂಟಿಗೆ ಢಿಕ್ಕಿಯಾದ ಬಸ್‌: ವಿದ್ಯಾರ್ಥಿನಿ ಸಾವು

Sullia: ಸ್ಕೂಟಿಗೆ ಢಿಕ್ಕಿಯಾದ ಬಸ್‌: ವಿದ್ಯಾರ್ಥಿನಿ ಸಾವು

Uppinangady ದಾರಿ ವಿವಾದ: ಸಂಬಂಧಿಯನ್ನೇ ಕಡಿದು ಕೊ*ಲೆ

Uppinangady ದಾರಿ ವಿವಾದ: ಸಂಬಂಧಿಯನ್ನೇ ಕಡಿದು ಕೊ*ಲೆ

Mulki: ಚಿನ್ನಾಭರಣ ಕಳವು: ಆರೋಪಿ ಬಂಧನ

Mulki: ಚಿನ್ನಾಭರಣ ಕಳವು: ಆರೋಪಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.