ಬೋಳಿಯಾರ್‌ನಲ್ಲಿ ಚೂರಿ ಇರಿತ ಪ್ರಕರಣ ಇನ್ನೂ ಏಳು ಆರೋಪಿಗಳ ಬಂಧನ
Team Udayavani, Jun 13, 2024, 12:01 AM IST
ಉಳ್ಳಾಲ: ಬಿಜೆಪಿ ವಿಜಯೋತ್ಸವದ ಸಂದರ್ಭದಲ್ಲಿ ಬೋಳಿಯಾರ್‌ನಲ್ಲಿ ನಡೆದ ಚೂರಿ ಇರಿತಕ್ಕೆ ಸಂಬಂಧಿಸಿದಂತೆ ಬುಧವಾರ ಏಳು ಆರೋಪಿಗಳನ್ನು ಕೊಣಾಜೆ ಪೊಲೀಸರು ಬಂಧಿಸಿದ್ದಾರೆ. ಇದರಿಂದಾಗಿ ಈ ಘಟನೆಗೆ ಸಂಬಂಧಿಸಿ ಬಂಧಿತರ ಸಂಖ್ಯೆ 13ಕ್ಕೆ ಏರಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಬೋಳಿಯಾರ್‌ನಲ್ಲಿ ಬಿಜೆಪಿ ವಿಜಯೋತ್ಸವದ ವಿಚಾರದಲ್ಲಿ ಮಸೀದಿ ಬಳಿ ಘೋಷಣೆ ಕೂಗಿದ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರಾದ ಹರೀಶ್ ಧರ್ಮನಗರ ಮತ್ತು ನಂದನ್‌ಗೆ ಚೂರಿ ಇರಿಯಲಾಗಿತ್ತು. ಘಟನೆಗೆ ಸಂಬಂಧಿಸಿದಂತೆ ಚೂರಿ ಇರಿತಕ್ಕೆ ಸಂಬಂಧಿಸಿದಂತೆ ಆರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿತ್ತು.
ಘಟನೆಗೆ ಸಂಬಂಧಿಸಿದಂತೆ ತಲೆ ಮರೆಸಿಕೊಂಡಿರುವ ಆರೋಪಿಗಳ ಪತ್ತೆ ಕಾರ್ಯ ಮುಂದುವರಿಸಿದ್ದು, ಬುಧವಾರ ಘಟನೆಗೆ ಸಂಬಂಧಿಸಿದಂತೆ ಬೋಳಿಯಾರು ನಿವಾಸಿಗಳಾದ ತಾಜುದ್ದೀನ್ ಯಾನೆ ಸಿದ್ಧಿಕ್, ಸರ್ವನ್, ಮುಬಾರಕ್, ಅಶ್ರಫ್, ತಲ್ಲತ್, ಇಮ್ರಾನ್, ಕೋಲಿ ಇರ್ಷಾದ್‌ನನ್ನು ಬಂಧಿಸಲಾಗಿದೆ. ಕೊಣಾಜೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dinesh Gundu Rao: ಅನರ್ಹರ ಕಾರ್ಡ್ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ
Mangaluru: ಆಟೋ ವರ್ಕಶಾಪ್ನಿಂದ 93,540 ರೂ. ಕಳವು
Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ
Mangaluru: ವಕ್ಫ್ ಭೂಮಿ ಅತಿಕ್ರಮಣ: ಸಲ್ಲಿಕೆಯಾದ ವರದಿ ಬಗ್ಗೆ ತನಿಖೆಯಾಗಲಿ: ಮಾಣಿಪ್ಪಾಡಿ
Ullala: ಯುವತಿಯ ಮಾನಭಂಗಕ್ಕೆ ಯತ್ನ: ಬಾಲಕ ವಶಕ್ಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.