KSRTC:ಬಸ್ ಬಾಗಿಲು ಬಳಿ ನಿಲ್ಲಬೇಡ ಎಂದಿದ್ದಕ್ಕೆ ಕಂಡಕ್ಟರ್ ಮೇಲೆ ವಿದ್ಯಾರ್ಥಿ ತಂದೆ ಹಲ್ಲೆ
Team Udayavani, Dec 29, 2023, 9:03 PM IST
ಬ್ಯಾಡಗಿ: ಚಲಿಸುತ್ತಿದ್ದ ಬಸ್‌ನಲ್ಲಿ ಬಾಗಿಲ ಬಳಿ ನಿಂತಿದ್ದ ವಿದ್ಯಾರ್ಥಿಗೆ ಎಚ್ಚರಿಕೆ ನೀಡಿದ ನಿರ್ವಾಹಕನ ಮೇಲೆ ವಿದ್ಯಾರ್ಥಿಯ ತಂದೆ ಹಲ್ಲೆ ನಡೆಸಿ, ಸರ್ಕಾರಿ ಸೇವೆಗೆ ಅಡ್ಡಿಪಡಿಸಿರುವ ಘಟನೆ ಪಟ್ಟಣದ ಬಸ್ ನಿಲ್ದಾಣದಲ್ಲಿ ಶುಕ್ರವಾರ ನಡೆದಿದೆ. ಡಿ.28ರಂದು ಬೆಳಗ್ಗೆ ಬ್ಯಾಡಗಿಯಿಂದ ಹಿರೇಕೆರೂರು ಮಾರ್ಗದಲ್ಲಿ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಬ್ಯಾಡಗಿ ಪಟ್ಟಣದ ಮೆಹಬೂಬಸಾಬ್ ದೊಡ್ಡಮನಿ ಅವರ ಪುತ್ರ 4ನೇ ತರಗತಿಯ ವಿದ್ಯಾರ್ಥಿ ಶಾಲೆಗೆ ತೆರಳಲು ಬಸ್ ಹತ್ತಿದ್ದ.
ಬಾಗಿಲು ಬಳಿ ನಿಂತಿದ್ದನ್ನು ಗಮನಿಸಿದ ಕಂಡಕ್ಟರ್ ಬಾಗಿಲಲ್ಲಿ ನಿಲ್ಲಬೇಡ ಎಂದು ಬುದ್ಧಿಮಾತು ಹೇಳಿದ್ದಾರೆ. ಇದರಿಂದ ಬೇಸರಗೊಂಡ ವಿದ್ಯಾರ್ಥಿ ಮನೆಗೆ ತೆರಳಿ ಪಾಲಕರಿಗೆ “ನಿರ್ವಾಹಕ ನನಗೆ ಹೊಡೆದಿದ್ದಾನೆ’ ಎಂದು ಹೇಳಿದ್ದಾನೆ. ಇದರಿಂದ ಶುಕ್ರವಾರ ಬೆಳಗ್ಗೆ ವಿದ್ಯಾರ್ಥಿಯ ತಂದೆ ನಿರ್ವಾಹಕ ರವಿ ಚಂದ್ರಪ್ಪ ಹಿಂದಲಮನಿ ಅವರ ಶರ್ಟ್ ಹಿಡಿದು ಹಲ್ಲೆ ನಡೆಸಿದ್ದಾರೆ. ಬ್ಯಾಡಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.