ಐಸಿಯುನಲ್ಲಿ ಒಟ್ಟು 175 ಸೋಂಕಿತರು


Team Udayavani, Jul 8, 2020, 6:34 AM IST

seveenty icu

ಬೆಂಗಳೂರು: ರಾಜಧಾನಿಯಲ್ಲಿ ಕಳೆದ ವಾರ ದೃಢಪಟ್ಟ ಪ್ರಕರಣಗಳಿಗೆ ಹೋಲಿಸಿದರೆ ಮಂಗಳವಾರ ಸೋಂಕಿತರ ಸಂಖ್ಯೆ ತುಸು ಕಡಿಮೆಯಾಗಿದ್ದು, 800 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ನಗರದಲ್ಲಿ ಈವರೆಗೆ ಒಟ್ಟು 11,361  ಕೋವಿಡ್‌ 19 ಸೋಂಕಿತರು ಪತ್ತೆಯಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 265 ಜನ ಚಿಕಿತ್ಸೆ ಪಡೆದು ಗುಣಮುಖರಾಗಿದ್ದು, ಇದರೊಂ ದಿಗೆ ಗುಣಮುಖರ ಸಂಖ್ಯೆ 1,810ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ 9,395 ಸೋಂಕಿತರು ಚಿಕಿತ್ಸೆ  ಪಡೆ ಯುತ್ತಿದ್ದಾರೆ. ಈ ಮಧ್ಯೆ ನಿಗಾ ಘಟಕ (ಐಸಿಯು)ದಲ್ಲಿ ಚಿಕಿತ್ಸೆ ಪಡೆಯುವವರು ಸಂಖ್ಯೆ ಹೆಚ್ಚಳವಾಗಿದೆ. ಜು. 5ರಂದು 132 ಹಾಗೂ ಜುಲೈ 6ರಂದು 166 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮಂಗಳವಾರ ಈ ಸಂಖ್ಯೆ 175ಕ್ಕೆ  ಏರಿಕೆಯಾಗಿದೆ.

36 ಗಂಟೆಯಾದ್ರೂ ಮನೆಯಲ್ಲೇ ಸೋಂಕಿತ: ಶಿವಾಜಿನಗರ ಬಳಿಯ ಭಾರತಿನಗರದ ನಿವಾಸಿಯೊಬ್ಬರಿಗೆ ಕೋವಿಡ್‌ 19 ದೃಢಪಟ್ಟು 36 ಗಂಟೆಗಳಾದರೂ, ಆಸ್ಪತ್ರೆಗೆ ದಾಖಲಿಸಲಾಗಿಲ್ಲ. ಮನೆಗೆ ಆ್ಯಂಬುಲೆನ್ಸ್‌ ಕಳುಹಿಸುವುದಾಗಿ ಪಾಲಿಕೆ  ಅಧಿಕಾರಿಗಳು ಹೇಳಿದ್ದರು. ಆದರೆ, ಆ್ಯಂಬುಲೆನ್ಸ್‌ ಕಳಿಸಿರಲಿಲ್ಲ ಎಂದು ಸೋಂಕಿತ ಕುಟುಂ ಬದ ಸದಸ್ಯರು ಆರೋಪಿಸಿದ್ದಾರೆ. ಸೋಂಕಿತ ವ್ಯಕ್ತಿಯ ಮನೆಯಲ್ಲಿ ಆರು ಜನ ಇದ್ದು, ಅವರಲ್ಲಿ ಇಬ್ಬರು ಹಿರಿಯ ನಾಗರಿಕರು, ಇಬ್ಬರು ಮಕ್ಕಳೂ ಇದ್ದಾರೆ. ನೋಡಲ್‌ ಅಧಿಕಾರಿ ಗಳು ಯಾರೂ ಕರೆ ಸ್ವೀಕರಿಸುತ್ತಿಲ್ಲ. 108ಗೆ ಕರೆ ಮಾಡಿದರೆ, “ಮೊದಲು ಆಸ್ಪತ್ರೆಯಲ್ಲಿ ಹಾಸಿಗೆ ಇರುವ ಬಗ್ಗೆ ಖಚಿತ ಪಡಿಸಿಕೊಳ್ಳಿ.

ನಂತರ ಬರುವುದಾಗಿ’ ಹೇಳು ತ್ತಾರೆ. ಒಂದೂವರೆ  ದಿನವಾದರೂ ಸೋಂಕಿತನನ್ನು ಆಸ್ಪತ್ರೆಗೆ ಕರೆದೊಯ್ಯಲು ಸಿಬ್ಬಂದಿ ಬಂದಿಲ್ಲ. ಚಾಮರಾಜಪೇಟೆ, ಕಲಾಸಿ ಪಾಳ್ಯದಲ್ಲಿ ಸೋಂತರ ಸಂಖ್ಯೆ ಹೆಚ್ಚಳ ಹಿನ್ನೆಲೆ ಸೀಲ್‌ಡೌನ್‌ ಮಾಡಲಾಗಿದ್ದು, ಜನ ಬ್ಯಾರಿಕೇಡ್‌, ಶೀಟ್‌ಗಳನ್ನು ಪಕ್ಕಕ್ಕೆ ತಳ್ಳಿ  ಜನರು ಮಾಸ್ಕ್‌ ಧರಿಸದೆ ಅಡ್ಡಾದಿಡ್ಡಿ ಓಡಾಡುತ್ತಿದ್ದಾರೆ. ಕಳ್ಳ ಮಾರ್ಗದಲ್ಲಿ ಅಂಗಡಿಗಳನ್ನು ತೆರದು ವ್ಯಾಪಾರ ಮಾಡುತ್ತಿದ್ದಾರೆ. ಈ ಪ್ರದೇಶಗಳಲ್ಲಿ ಪಾಲಿಕೆ ಅಧಿಕಾರಿಗಳು ಹಾಗೂ ಪೊಲೀಸರು ಅಗತ್ಯ ಕ್ರಮ ಕೈಗೊಳ್ಳುವಲ್ಲಿ  ವಿಫ‌ಲರಾಗಿದ್ದಾರೆ ಎಂದು ಸಾರ್ವಜನಿಕರು ದೂರಿದ್ದಾರೆ.

ವಾರಿಯರ್ಸ್‌ ಬಲಿ: ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿದ್ದ ಕೋವಿಡ್‌ 19 ವಾರಿಯರ್ಸ್‌ಗೂ ಸೋಂಕು ಕಾಣಿಸಿಕೊಳ್ಳುತ್ತಿದ್ದು, ಕೆ.ಸಿ. ಜನರಲ್‌ ಆಸ್ಪತ್ರೆಯ 55 ವರ್ಷದ ಸಿಬ್ಬಂದಿ ಮಂಗಳವಾರ ಮೃತಪಟ್ಟಿದ್ದಾರೆ. ಸೋಂಕಿತರಿಗೆ ಚಿಕಿತ್ಸೆ  ನೀಡುವ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಅವರು, ಕಳೆದ ವಾರವಷ್ಟೇ ಚಿತ್ರದುರ್ಗಕ್ಕೆ ಹೋಗಿದ್ದರು. ಅಲ್ಲಿಯೇ ಅವರಿಗೆ ಕೋವಿಡ್‌ 19 ಸೋಂಕು ತಗುಲಿತ್ತು. ಚಿಕಿತ್ಸೆ ಫ‌ಲಕಾರಿಯಾಗದೆ ಕೊನೆಯು ಸಿರೆಳೆ ದಿದ್ದಾರೆ ಎಂದು ಆಸ್ಪತ್ರೆ  ಮೂಲಗಳು ತಿಳಿಸಿವೆ.

ಸಲೂನ್‌ ಶಾಪ್‌ ಬಂದ್‌!: ಸೋಂಕು ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸವಿತಾ ಸಮಾಜ, ಮುಂದಿನ 15 ದಿನಗಳ ಕಾಲ ಸಲೂನ್‌ ಶಾಪ್‌ಗ್ಳನ್ನು ಸ್ವಯಂಪ್ರೇರಿತವಾಗಿ ಬಂದ್‌ ಮಾಡಲು ನಿರ್ಧರಿಸಿದೆ. ಸೋಂಕಿನಿಂದ ದೂರ ಉಳಿಯಲು, ಕೋವಿಡ್‌ 19 ವಿರುದ್ಧ ಹೋರಾಡಲು ದಿಟ್ಟ ನಿರ್ಧಾರ ಕೈಗೊಂಡಿದ್ದು, ಬೆಂಗಳೂರಿನ ಮಹಾಲಕ್ಷಿ ಲೇಔಟ್‌ ವ್ಯಾಪ್ತಿಯಲ್ಲಿರುವ ಮಾಲೀಕರು 15 ದಿನಗಳ ಕಾಲ ಸಲೂನ್‌ಗಳನ್ನು ಮುಚ್ಚಲು ನಿರ್ಧರಿಸಿದ್ದಾರೆ. ಇತ್ತೀಚಿಗೆ  ಶಿವನಗರದ ಸಲೂನ್‌ ಮಾಲೀಕ ಸೋಂಕಿನಿಂದ ಮೃತಪಟ್ಟಿದ್ದು, ಈ ಹಿನ್ನೆಲೆಯಲ್ಲಿ ಕ್ಷೌರಿಕರು ಆತಂಕಕ್ಕೆ ಒಳಗಾಗಿದ್ದಾರೆ.

ಸಮನ್ವಯದ ಕೊರತೆ ಗರ್ಭಿಣಿ ಅಲೆದಾಟ: ಪಾಲಿಕೆ ಅಧಿಕಾರಿಗಳ ಸಮ  ನ್ವಯ ಕೊರತೆಯಿಂದ ಗರ್ಭಿ ಣಿ ಮಂಗಳವಾರ ಮನೆಯಿಂ ದ ಆಸ್ಪತ್ರೆಗಳಿಗೆ ಅಲೆದಾಡಿದ ಘಟನೆ ನಡೆದಿದೆ. ಮೊದಲು ಸೋಂಕು ಹಿನ್ನೆಲೆಯಲ್ಲಿ ಗರ್ಭಿಣಿಯನ್ನು  ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ನಂತರ ಸೋಂಕು ಇಲ್ಲ ಎಂದು ವಾಪಸ್‌ ಕರೆತಂದು ಬಿಟ್ಟಿದ್ದಾರೆ. ಬೆನ್ನಲ್ಲೇ ಇನ್ನೊಂದು ಆಸ್ಪತ್ರೆಗೆ ಕರೆದೊಯ್ಯಲು ಮೊಗ  ದೊಂದು ಆ್ಯಂಬುಲನ್ಸ್‌ ಮನೆ ಮುಂದೆ ಬಂದು ನಿಂತಿದೆ. ಆಗ, ಕುಟುಂಬದ  ಸದಸ್ಯರು ಚಾಲಕನಿಗೆ ತರಾಟೆಗೆ ತೆಗೆದುಕೊಂಡು, ವಾಪಸ್‌ ಕಳುಹಿಸಿದ್ದಾರೆ.

ನಡೆದಿದ್ದಿಷ್ಟು: ಹೊಸಗುಡ್ಡದಹಳ್ಳಿಯ ಗರ್ಭಿಣಿಯೊಬರು ಸೋಂಕು ಪರೀಕ್ಷೆಗೆ ಒಳಗಾಗಿದ್ದು, ಸೋಮವಾರ ತಡರಾತ್ರಿ ಪಾಲಿಕೆ ಅಧಿಕಾರಿಗಳು ಕರೆ ಮಾಡಿ ಗರ್ಭಿಣಿಗೆ ಸೋಂಕು ದೃಢಪಟ್ಟಿದ್ದು, “ಬೆಳಗ್ಗೆ 10  ಗಂಟೆಗೆ ಆ್ಯಂಬುಲೆನ್ಸ್‌ ಮನೆ  ಬಳಿ ಬರಲಿದೆ’ ಎಂದು ತಿಳಿಸಿದ್ದಾರೆ. ಅದರಂತೆ ಬೆಳಗ್ಗೆ ಆ್ಯಂಬುಲೆನ್ಸ್‌ನಲ್ಲಿ ಹೊಸ ಕೋಟೆ ರಸ್ತೆಯಲ್ಲಿರುವ ಖಾಸಗಿ ಆಸ್ಪತ್ರೆಗೆ ಹೋಗಿದ್ದಾರೆ. ಆದರೆ ಅಲ್ಲಿ ವೈದ್ಯರು, “ನಿಮಗೆ (ಗರ್ಭಿಣಿಗೆ) ಸೋಂಕು ಇಲ್ಲ’ ಎಂದು ವಾಪಸ  ಕಳುಹಿಸಿದ್ದಾರೆ.

ಮನೆಗೆ ಬಂದ ನಂತರ ಮತ್ತೂಂದು ಆ್ಯಂಬುಲೆನ್ಸ್‌ ಬಂದಿದೆ. “ನಿಮಗೆ ಸೋಂಕು ದೃಢಪಟ್ಟಿದೆ’ ಎಂದು ಚಾಲಕ ತಿಳಿಸಿದ್ದಾರೆ. ಆಗ ಕುಟುಂಬಸ್ಥರು, “ಈಗಷ್ಟೇ ಆಸ್ಪತ್ರೆಗೆ ಹೋಗಿಬಂದಿರುವುದಾಗಿ’ ಹೇಳಿದ್ದಾರೆ. ಆದರೆ ಚಾಲಕ, “ರಾಜಾಜಿನಗರದ ಇಎಸ್‌ಐ ಆಸ್ಪ  ತ್ರೆಗೆ ಹೋಗಬೇಕಿತ್ತು. ಅದುಬಿಟ್ಟು ಖಾಸಗಿ ಆಸ್ಪತ್ರೆಗೆ ಹೇಗೆ ಹೋಗಿದ್ದೀರಿ’ ಎಂದು ಪ್ರಶ್ನಿಸಿದ್ದಾನೆ. ಅದಕ್ಕೆ ಕುಟುಂಬಸ್ಥರು, “ಮೊದಲು ಸೋಂಕು ದೃಡ ಪಟ್ಟಿದೆಯೇ ಅಥವಾ ಇಲ್ಲವೇ ಎಂದು ಬಹಿರಂಗಪಡಿಸಿ. ನಂತರ ಆಸ್ಪತ್ರೆಗೆ ಬರಲಾಗು ವುದು’ ಎಂದು ಹೇಳಿಕಳುಹಿಸಿದ್ದಾರೆ.

ಅಧಿಕಾರಿಗಳ ವಿರುದ್ಧ ಧರಣಿ: ಖಾಸಗಿ ಆಸ್ಪತ್ರೆಯನ್ನು ಕೋವಿಡ್‌ ಆಸ್ಪತ್ರೆಯಾಗಿ ಪರಿವರ್ತಿಸಲು ಹೊರಟ ಅಧಿಕಾರಿಗಳ ವಿರುದ್ಧ ಸ್ಥಳೀಯರು ಧರಣಿ ನಡೆಸಿರುವ ಘಟನೆ ನಗರದ ಕೋಣನಕುಂಟೆ ಬಳಿ ನಡೆದಿದೆ. ಬಡಾವಣೆಯಲ್ಲಿರುವ  ಆಸ್ಪತ್ರೆಯನ್ನು ಕೋವಿಡ್‌ ಆಸ್ಪತ್ರೆಯಾಗಿ ಮಾರ್ಪಾಡು ಮಾಡಲು ಅಧಿಕಾರಿಗಳು ಮುಂದಾಗಿದ್ದಾರೆ ಎಂಬ ಸುದ್ದಿ ತಿಳಿಯುತ್ತಿದ್ದಂತೆ ನೂರಾರು ಜನ ಸ್ಥಳೀಯರು ಆಸ್ಪತ್ರೆಯ ಮುಂದೆ ಜಮಾವಣೆಗೊಂಡು, “ಆಸ್ಪತ್ರೆ ಅಕ್ಕಪಕ್ಕದಲ್ಲಿ  ಮನೆಗಳಿವೆ. ಹೀಗಾಗಿ, ಸೋಂಕು ಹರಡುವ ಸಾಧ್ಯತೆ ಇದೆ’ ಎಂದು ಆರೋಪಿಸಿದರು.

ಟಾಪ್ ನ್ಯೂಸ್

doctor 2

Karnataka; 7 ವೈದ್ಯಕೀಯ ಕಾಲೇಜುಗಳಲ್ಲಿ ಕ್ರಿಟಿಕಲ್‌ ಕೇರ್‌ ವಿಭಾಗ ಆರಂಭ

Beer

Bandh; ನ. 20ರಂದು ರಾಜ್ಯವ್ಯಾಪಿ ಮದ್ಯ ಮಾರಾಟ ಬಂದ್‌

Exam 2

CBSE; ಮುಂದಿನ ವರ್ಷ ಪಠ್ಯ ಶೇ. 15 ಕಡಿತಕ್ಕೆ ಚಿಂತನೆ

bjp-congress

BJP ಆಮಿಷ ನಿಜ: ಸಿಎಂ, ಡಿಸಿಎಂ ಹೇಳಿಕೆಗೆ ದನಿಗೂಡಿಸಿದ ಸಚಿವರು, ಶಾಸಕರು

1-vandaru-kamabala

Kambala; ವಂಡಾರು ಕಂಬಳ: ಇದು ಹರಕೆಯ ಸೇವೆ, ಇಲ್ಲಿ ಸ್ಪರ್ಧೆಯಿಲ್ಲ

vidhana-soudha

2025ರ ಸಾರ್ವತ್ರಿಕ ರಜೆ ಪಟ್ಟಿಗೆ ಸಂಪುಟ ಅಸ್ತು;19 ಸಾರ್ವತ್ರಿಕ,20 ಪರಿಮಿತ ರಜೆಗೆ ಅನುಮೋದನೆ

Vijayendra (2)

50 crores ಆಮಿಷ ಸುಳ್ಳಿನ ಕಂತೆ; ಸೂಕ್ತ ಸಾಕ್ಷಿ ನೀಡಿ ಇಲ್ಲವೇ ED ತನಿಖೆಗೊಪ್ಪಿಸಿ: ಬಿಜೆಪಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮಾವನ ಮಗನ ಕಿರುಕುಳಕ್ಕೆ ಬೇಸತ್ತು ವಿದ್ಯಾರ್ಥಿನಿ ಆತ್ಮಹತ್ಯೆ

Bengaluru: ಮಾವನ ಮಗನ ಕಿರುಕುಳಕ್ಕೆ ಬೇಸತ್ತು ವಿದ್ಯಾರ್ಥಿನಿ ಆತ್ಮಹತ್ಯೆ

Road mishap: ಗೂಡ್ಸ್‌ ವಾಹನಕ್ಕೆ ದ್ವಿಚಕ್ರ ವಾಹನ ಡಿಕ್ಕಿ; ಸಿಎಆರ್‌ ಕಾನ್‌ಸ್ಟೇಬಲ್ ಸಾವು

Road mishap: ಗೂಡ್ಸ್‌ ವಾಹನಕ್ಕೆ ದ್ವಿಚಕ್ರ ವಾಹನ ಡಿಕ್ಕಿ; ಸಿಎಆರ್‌ ಕಾನ್‌ಸ್ಟೇಬಲ್ ಸಾವು

Bengaluru: ಸ್ನೇಹಿತನ ಅಪ್ರಾಪ್ತ ಪುತ್ರಿ ಮೇಲೆ ರೇಪ್‌ ಮಾಡಿ ಗರ್ಭಿಣಿ ಮಾಡಿದ್ದ ಅಪರಾಧಿ

Bengaluru: ಸ್ನೇಹಿತನ ಅಪ್ರಾಪ್ತ ಪುತ್ರಿ ಮೇಲೆ ರೇಪ್‌ ಮಾಡಿ ಗರ್ಭಿಣಿ ಮಾಡಿದ್ದ ಅಪರಾಧಿ

Bengaluru: ಅಕ್ಕನ ಬುದ್ಧಿಮಾಂದ್ಯ ಮಗಳ ಮೇಲೆಯೇ ಸತತ ಲೈಂಗಿಕ ದೌರ್ಜನ್ಯ ಎಸಗಿದ ಕಾಮುಕ

Bengaluru: ಅಕ್ಕನ ಬುದ್ಧಿಮಾಂದ್ಯ ಮಗಳ ಮೇಲೆಯೇ ಸತತ ಲೈಂಗಿಕ ದೌರ್ಜನ್ಯ ಎಸಗಿದ ಕಾಮುಕ

Bengaluru: ಬಸ್‌ ಚಾಲಕನ ಮೇಲೆ ಹಲ್ಲೆಗೆ ಯತ್ನ; ಮೆಕ್ಯಾನಿಕ್‌ ಬಂಧನ

Bengaluru: ಬಸ್‌ ಚಾಲಕನ ಮೇಲೆ ಹಲ್ಲೆಗೆ ಯತ್ನ; ಮೆಕ್ಯಾನಿಕ್‌ ಬಂಧನ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

doctor 2

Karnataka; 7 ವೈದ್ಯಕೀಯ ಕಾಲೇಜುಗಳಲ್ಲಿ ಕ್ರಿಟಿಕಲ್‌ ಕೇರ್‌ ವಿಭಾಗ ಆರಂಭ

Beer

Bandh; ನ. 20ರಂದು ರಾಜ್ಯವ್ಯಾಪಿ ಮದ್ಯ ಮಾರಾಟ ಬಂದ್‌

Exam 2

CBSE; ಮುಂದಿನ ವರ್ಷ ಪಠ್ಯ ಶೇ. 15 ಕಡಿತಕ್ಕೆ ಚಿಂತನೆ

bjp-congress

BJP ಆಮಿಷ ನಿಜ: ಸಿಎಂ, ಡಿಸಿಎಂ ಹೇಳಿಕೆಗೆ ದನಿಗೂಡಿಸಿದ ಸಚಿವರು, ಶಾಸಕರು

1-vandaru-kamabala

Kambala; ವಂಡಾರು ಕಂಬಳ: ಇದು ಹರಕೆಯ ಸೇವೆ, ಇಲ್ಲಿ ಸ್ಪರ್ಧೆಯಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.