USA: ಅ. 8ರಂದು ಬೃಹತ್‌ ದೇಗುಲ ದರ್ಶನ: ಅಮೆರಿಕದ ನ್ಯೂಜೆರ್ಸಿಯಲ್ಲಿ ನಿರ್ಮಾಣ

ಬಿಎಪಿಎಸ್‌ನಿಂದ ಅಕ್ಷರಧಾಮ ದೇವಸ್ಥಾನ

Team Udayavani, Sep 24, 2023, 10:32 PM IST

aksharadhama nj

ದೇಶದ ಹೊರಗೆ ನಿರ್ಮಾಣವಾಗುತ್ತಿರುವ ಅತಿದೊಡ್ಡ ದೇಗಲು ಅ. 8ರಂದು ಲೋಕಾರ್ಪಣೆಗೊಳ್ಳಲಿದೆ. ಅಮೆರಿಕದ ನ್ಯೂಜೆರ್ಸಿಯಲ್ಲಿ ಇದು ನಿರ್ಮಾಣಗೊಂಡಿದೆ. ಸ್ವಯಂಸೇವಕರೇ ಇದನ್ನು ಅದ್ದೂರಿಯಾಗಿ ನಿರ್ಮಿಸಿರುವುದು ವಿಶೇಷ.

ಹೊಸ ದೇಗುಲದ ವಿಶೇಷ ಏನು?
ಅಮೆರಿಕದ ನ್ಯೂಜೆರ್ಸಿಯ ರಾಬಿನ್ಸ್‌ವಿಲ್ಲೆ ಟೌನ್‌ಶಿಪ್‌ನಲ್ಲಿ ಅಕ್ಷರಧಾಮ ದೇಗುಲ ನಿರ್ಮಾಣವಾಗಿದೆ. ಬಿಎಪಿಎಸ್‌ ಸ್ವಾಮಿ ನಾರಾಯಣ ಅಕ್ಷರಧಾಮ ದೇಗುಲ ಅದರ ನೇತೃತ್ವ ವಹಿಸಿದೆ. 255 ಅಡಿ x 345 ಅಡಿ x 191 ಸುತ್ತಳತೆ ಹೊಂದಿದೆ. ಭಾರತ ಹೊಂದಿರುವ ಸಾಂಸ್ಕೃತಿಕ ಪರಂಪರೆಗಳನ್ನು ಆಧರಿಸಿ ಸುಂದರ ಕೆತ್ತನೆಯ ಶಿಲ್ಪಗಳು ಇದರಲ್ಲಿವೆ. 10 ಸಾವಿರ ವಿವಿಧ ನೃತ್ಯ ಭಂಗಿಗಳು ಇರುವ ವಿಗ್ರಹಗಳನ್ನು ಕೆತ್ತಲಾಗಿದೆ.

12,500 – ನಿರ್ಮಾಣದಲ್ಲಿ ಭಾಗಿಯಾಗಿದ್ದ ಸ್ವಯಂಸೇವಕರು
12 ವರ್ಷಗಳು- ಕಾಮಗಾರಿ ಪೂರ್ತಿಗೊಳ್ಳಲು ಬೇಕಾದ ಅವಧಿ – 2011ರಿಂದ 2023
183 ಎಕರೆ- ದೇಗುಲ ಹೊಂದಿರುವ ಜಮೀನು
ಗರ್ಭ ಗುಡಿ, 12 ದೇವರ ಗುಡಿಗಳು, 9 ಗೋಪುರಗಳು, 9 ಪಿರಮಿಡ್‌ ಆಕಾರದ ಗೋಪುರಗಳು ಇದರಲ್ಲಿವೆ.
1,000 ವರ್ಷ- ಇಷ್ಟು ವರ್ಷ ಬಾಳಿಕೆ ಬರುವಂತೆ ನಿರ್ಮಾಣ

ದೂರವೆಷ್ಟು?
90 ಕಿ.ಮೀ.- ನ್ಯೂಯಾರ್ಕ್‌ನ ಟೈಮ್ಸ್‌ ಚೌಕದಿಂದ
289 ಕಿ.ಮೀ.- ವಾಷಿಗ್ಟನ್‌ ಡಿ.ಸಿ.ಯ ಉತ್ತರಕ್ಕೆ

ಎರಡನೇ ಅತ್ಯಂತ ದೊಡ್ಡ ದೇಗುಲ?
ಕಾಂಬೋಡಿಯಾದ ಆ್ಯಂಗ್‌ಕೋರ್‌ ವಾಟ್‌ ಜಗತ್ತಿನ ಅತ್ಯಂತ ದೊಡ್ಡ ದೇಗುಲ ಎಂಬ ಹೆಗ್ಗಳಿಕೆಗೆ ಪಡೆದಿದೆ. 500 ಎಕರೆ ಪ್ರದೇಶದಲ್ಲಿ ಅದು ವ್ಯಾಪಿಸಿದೆ. ಜತೆಗೆ ಯುನೆಸ್ಕೋದ ವಿಶ್ವ ಸಾಂಸ್ಕೃತಿಕ ಪರಂಪರೆಗಳ ಪಟ್ಟಿಯಲ್ಲಿ ದಾಖಲಾಗಿದೆ. 2005ರ ನವೆಂಬರ್‌ನಲ್ಲಿ ಹೊಸದಿಲ್ಲಿಯಲ್ಲಿ ಲೋಕಾರ್ಪಣೆಗೊಂಡಿರುವ ಅಕ್ಷರಧಾಮ ದೇಗುಲ 100 ಎಕರೆ ಪ್ರದೇಶದಲ್ಲಿ ನಿರ್ಮಾಣಗೊಂಡಿದೆ.

ಯಾವಾಗ ಉದ್ಘಾಟನೆ?
ಅ. 8

ಭಾರತದಿಂದಲೂ ಕಲ್ಲುಗಳ ಪೂರೈಕೆ
ಅಕ್ಷರಧಾಮ ದೇಗುಲ ನಿರ್ಮಾಣಕ್ಕೆ ನಾಲ್ಕು ಬಗೆಯ ಕಲ್ಲುಗಳನ್ನು ಬಳಕೆ ಮಾಡಲಾಗಿದೆ. ಸುಣ್ಣದ ಕಲ್ಲು (ಬಲ್ಗೇರಿಯಾ ಮತ್ತು ಟರ್ಕಿ), ಗುಲಾಬಿ ಬಣ್ಣದ ಕಲ್ಲು, ಮಾರ್ಬಲ್‌ (ಗ್ರೀಸ್‌), ಗ್ರಾನೈಟ್‌ (ಭಾರತ ಮತ್ತು ಚೀನ), ಸ್ಯಾಂಡ್‌ಸ್ಟೋನ್‌ (ಭಾರತ) ಗಳನ್ನು ತರಿಸಿಕೊಂಡು ನಿರ್ಮಾಣ.
2 ಮಿಲಿಯ ಕ್ಯೂಬಿಕ್‌ ಫೀಟ್‌- ಬಳಕೆ ಮಾಡಲಾದ ಕಲ್ಲುಗಳು

ದೇಶದಿಂದಲೂ ಪವಿತ್ರ ಜಲ
ಭಾರತದ ಪವಿತ್ರ ನದಿಗಳ ಸಹಿತ ಜಗತ್ತಿನ 300 ನದಿ ಮೂಲಗಳಿಂದ ನೀರು ಸಂಗ್ರಹಿಸಿ ಅಲ್ಲಿಗೆ ಕೊಂಡೊಯ್ಯಲಾಗಿದೆ

ಸ್ವಯಂಸೇವಕರು ಯಾರೆಲ್ಲ?
ವಿದ್ಯಾರ್ಥಿಗಳು, ವಿವಿಧ ಕಂಪೆನಿಗಳ ಸಿಇಒಗಳು, ವೈದ್ಯರು, ಎಂಜಿನಿಯರ್‌ಗಳು, ಕಟ್ಟಡ ವಿನ್ಯಾಸಕಾರರು ದೇಗುಲ ನಿರ್ಮಾಣದಲ್ಲಿ ಭಾಗಿಯಾಗಿದ್ದರು. ಕೆಲವರು ತಮ್ಮ ಉದ್ಯೋಗಕ್ಕೆ ರಜೆ ಹಾಕಿ ದುಡಿದಿದ್ದಾರೆ ಎಂದು ಬಿಎಪಿಎಸ್‌ ಅಧಿಕಾರಿಗಳು ಹೇಳಿದ್ದಾರೆ. ಹಲವರು ದೇಗುಲ ನಿರ್ಮಾಣಕ್ಕಾಗಿ ಸ್ಥಳದಲ್ಲಿಯೇ ಬಾಡಿಗೆಗೆ ಮನೆಗಳನ್ನು ಪಡೆದು ವಾಸ್ತವ್ಯ ಹೂಡಿದ್ದರು.

ಟಾಪ್ ನ್ಯೂಸ್

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು

Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

7

Malpe: ಮನೆ ಮನೆಗಳಲ್ಲಿ ಕ್ಯಾರೋಲ್‌ ಗಾಯನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.