Sagara ಮರಕ್ಕೆ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ
Team Udayavani, Jul 30, 2024, 8:04 PM IST
ಸಾಗರ: ಪಟ್ಟಣದ ಹೊರವಲಯದ ಸೊರಬ ರಸ್ತೆಯಲ್ಲಿರುವ ಗಡದಯ್ಯ ಲೇಔಟ್‌ನಲ್ಲಿ ಯುವಕನೊಬ್ಬ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ.
ನಗರದ ಜೆಪಿ ನಗರ ನಿವಾಸಿಯಾಗಿದ್ದ ಅರುಣ(24) ಎನ್ನುವವರು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಮೃತರು ತಂದೆ, ತಾಯಿ, ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಸೋಮವಾರ ಸಂಜೆಯ ವೇಳೆಗೆ ಬೈಕ್‌ನಲ್ಲಿ ಮನೆಯಿಂದ ಹೊರಟಿದ್ದ ಅವರು ಸೊರಬ ರಸ್ತೆಯ ಗಡದಯ್ಯ ಲೇಔಟ್‌ಗೆ ಬಂದಿದ್ದಾರೆ. ಲೇಔಟ್‌ನ ಮೂಲೆಯ ಮರದ ಬುಡದಲ್ಲಿ ಬೈಕ್ ನಿಲ್ಲಿಸಿ, ಅದನ್ನು ಏರಿ ಮರಕ್ಕೆ ಹಗ್ಗ ಬಿಗಿದು, ಬೈಕ್ ತಳ್ಳಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮಂಗಳವಾರ ಬೆಳಿಗ್ಗೆ ತಡವಾಗಿ ಪ್ರಕರಣ ಬೆಳಕಿಗೆ ಬಂದಿದೆ. ಸೋಮವಾರ ಸಂಜೆ ಅರುಣ್ ನಾಪತ್ತೆಯಾಗಿರುವುದಾಗಿ ಕುಟುಂಬಸ್ಥರು ಪೇಟೆ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಪೊಲೀಸರು ವಿಚಾರಣೆ ಮುಂದುವರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ
Shimoga: ಮೊಬೈಲ್ ಕೊಡದಿದ್ದಕ್ಕೆ ಆತ್ಮಹತ್ಯೆಗೆ ಶರಣಾದ ಕಾಲೇಜು ವಿದ್ಯಾರ್ಥಿನಿ
Holehonnur: ಎರಡು ಪ್ರತ್ಯೇಕ ರಸ್ತೆ ಅಪಘಾತ
Shivamogga: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಓ ಈಶ್ವರಪ್ಪ
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
B.C.Road: ಗರ್ಭಿಣಿ-ಬಾಲಕಿಗೆ ಹಲ್ಲೆ ಪ್ರಕರಣ: ರಾಜ್ಯ ಮಹಿಳಾ ಆಯೋಗಕ್ಕೆ ನಿಯೋಗ ದೂರು
ದೇಶದ ಆರ್ಥಿಕತೆಗೆ ಹೊಸ ಭಾಷ್ಯ ಬರೆದ ಡಾ. ಮನಮೋಹನ್ ಸಿಂಗ್
Belagavi: ಅಧಿವೇಶನ ಶತಮಾನೋತ್ಸವದಲ್ಲಿ ನಕಲಿ ಗಾಂಧಿಗಳೇ ಹೆಚ್ಚು: ಎಚ್‌ಡಿಕೆ ವ್ಯಂಗ್ಯ
Belagavi Congress Session: ಗಾಂಧೀಜಿ ಪರಂಪರೆ ಮುಂದುವರಿಸಲು ಬದ್ಧರಾಗಬೇಕು: ಸೋನಿಯಾ
Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.