ಟ್ರಕ್ ಢಿಕ್ಕಿ ಹೊಡೆದು ಯುವಕ ಸಾವು- ಅಂಗಾಂಗ ದಾನ
Team Udayavani, Aug 4, 2023, 1:17 AM IST
ಕಾಪು: ಟ್ರಕ್ ಢಿಕ್ಕಿ ಹೊಡೆದು ಮಿದುಳು ನಿಷ್ಕ್ರಿಯಗೊಂಡು ಮಣಿ ಪಾಲ ಆಸ್ಪತ್ರೆಗೆ ದಾಖಲಾ ಗಿದ್ದ ಉದ್ಯಾವರ ಬೋಳಾರ ಗುಡ್ಡೆ ಅಂಕುದ್ರು ನಿವಾಸಿ ಪ್ರಶಾಂತ್ (37) ಅವರ ಅಂಗಾಂಗಳನ್ನು ದಾನ ಮಾಡುವ ಮೂಲಕ ಅವರ ಮನೆಯವರು ಮಾನವೀಯತೆ ಮೆರೆದಿದ್ದಾರೆ.
ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಕನ್ನಿ ಪಾರ್ಟಿ ಕೆಲಸ ನಿರ್ವಹಿಸುತ್ತಿದ್ದ ಪ್ರಶಾಂತ್ ಬುಧವಾರ ಮಧ್ಯಾಹ್ನ ಕೆಲಸ ಮುಗಿಸಿ ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರ ಹಲೀಮಾ
ಸಾಬು ಸಭಾಭವನದ ಬಳಿ ರಸ್ತೆ ದಾಟುತ್ತಿದ್ದ ವೇಳೆ ಟ್ರಕ್ ಢಿಕ್ಕಿ ಹೊಡೆದು ರಸ್ತೆ ಬದಿ ಬಿದ್ದಿದ್ದರು.
ತಲೆಗೆ ತೀವ್ರ ಗಾಯಗೊಂಡಿದ್ದ ಅವರನ್ನು ಮಿತ್ರರಾದ ಪ್ರವೀಣ್ ಮತ್ತು ಅಭಿಷೇಕ್ ಅವರು ಸ್ಥಳೀಯರ ಸಹಾಯದಿಂದ ಉಡುಪಿ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಅಲ್ಲಿನ ವೈದ್ಯರ ಸೂಚನೆಯಂತೆ ಮಣಿಪಾಲ ಕೆ.ಎಂ.ಸಿ. ಆಸ್ಪತ್ರೆಗೆ ದಾಖಲಿಸಿದ್ದರು. ತಲೆಗೆ ತೀವ್ರ ಪೆಟ್ಟಾಗಿದ್ದ ಅವರ ಮೆದುಳು ನಿಷ್ಟ್ರಿಯಗೊಂಡಿದ್ದ ಅವರು ಚಿಕಿತ್ಸೆಗೆ ಸ್ಪಂದಿಸದೆ ಗುರುವಾರ ಬೆಳಗ್ಗೆ ಆಸ್ಪತ್ರೆಯಲ್ಲಿ ಮೃತಪಟ್ಟರು.
ವೈದ್ಯರಿಂದ ಮಾಹಿತಿ
ಆಸ್ಪತ್ರೆಯ ವೈದ್ಯರು ಮೃತರ ಸಂಬಂಧಿಕರಿಗೆ ಅಂಗಾಂಗ ದಾನದ ಬಗ್ಗೆ ಮಾಹಿತಿ ನೀಡಿದ್ದರು. ಮೃತರ ಸಹೋದರಿ ಪ್ರಮೀಳಾ ಅವರು ಸಹೋದರನ ಅಂಗಾಂಗ ದಾನ ಮಾಡಲು ಒಪ್ಪಿಗೆ ನೀಡುವ ಮೂಲಕ ಇತರ ರೋಗಿಗಳ ಜೀವ ಉಳಿಸುವ ವೈದ್ಯರ ಸಲಹೆಗೆ ಪೂರಕವಾಗಿ ಸ್ಪಂದಿಸಿದ್ದಾರೆ.
ಅವಿವಾಹಿತರಾಗಿದ್ದ ಪ್ರಶಾಂತ್ ಅವರು ತಾಯಿ ಮತ್ತು ಸಹೋದರಿ ಯನ್ನು ಅಗಲಿದ್ದಾರೆ. ಅಂಕುದ್ರುವಿನಲ್ಲಿ ಬಾಡಿಗೆ ಮನೆಯಲ್ಲಿ ವಾಸವಿರುವ ಅವರ ಕುಟುಂಬಕ್ಕೆ ಪ್ರಶಾಂತ್ ಅವರ ಸಂಪಾದನೆಯೇ ಆದಾಯದ ಮೂಲವಾಗಿತ್ತು. ಅಪಘಾತಕ್ಕೆ ಕಾರಣನಾದ ಟ್ರಕ್ ಚಾಲಕ ಬಿ. ಜಗನ್ನಾಥ ಗೌಡ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಕಾಪು ಪೊಲೀ ಸರು ವಶಕ್ಕೆ ತೆಗೆದುಕೊಂಡು ತನಿಖೆ ಮುಂದುವರಿಸಿದ್ದಾರೆ.
ಮೃತ ಯುವಕನ ಕಿಡ್ನಿ ಮತ್ತು ಲಿವರ್ ಅನ್ನು ಮಣಿಪಾಲ ಕೆಎಂಸಿ ಆಸ್ಪತ್ರೆಯ ವೈದ್ಯರ ಮೂಲಕ ಸುರಕ್ಷಿತವಾಗಿ ತೆಗೆದು ಮಂಗಳೂರು ಮತ್ತು ಬೆಂಗಳೂರಿಗೆ ಸಾಗಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್ಗೆ ನೋಟಿಸ್
Madikeri: ಬೈಕ್ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.