Thirthahalli: ವಾಟ್ಸಾಪ್ ಸ್ಟೇಟಸ್ ಹಾಕಿ ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆ!
Team Udayavani, Sep 2, 2024, 1:15 PM IST
ತೀರ್ಥಹಳ್ಳಿ: ಡಿಗ್ರಿಯಲ್ಲಿ ಚೆನ್ನಾಗಿ ಓದುತ್ತಿದ್ದ ರ‍್ಯಾಂಕ್ ತೆಗೆದುಕೊಳ್ಳುವಂತ ಯುವಕ ಜೀವನದಲ್ಲಿ ಜಿಗುಪ್ಸೆಗೊಂಡು ತನ್ನ ವಾಟ್ಸಪ್ ಸ್ಟೇಟಸ್ ನಲ್ಲಿ ಕೆಲವೊಂದು ಮಾಹಿತಿ ಹಂಚಿಕೊಂಡು ತುಂಗಾ ನದಿಗೆ ಹಾರಿರಬಹುದು ಎಂಬ ಅನುಮಾನ ವ್ಯಕ್ತವಾಗಿತ್ತು. ಇಂದು ಸೋಮವಾರ ಆತನ ಮೃತದೇಹ ಪತ್ತೆಯಾಗಿದೆ.
ಇಂದಾವರ ಗ್ರಾಮದ ಯುವಕ ಜಯದೀಪ್ ( 24 ವರ್ಷ ) ತುಂಗಾ ನದಿಗೆ ಹಾರಿ ತನ್ನ ಜೀವವನ್ನು ಕಳೆದುಕೊಂಡಿದ್ದಾನೆ. ಶನಿವಾರ ಬೆಳಗ್ಗೆ ವಾಟ್ಸಪ್ ಸ್ಟೇಟಸ್ ಹಾಕಿ ತುಂಗಾ ನದಿಯ ಸಮೀಪ ಬೈಕ್ ನಿಲ್ಲಿಸಿ ಆತ ಕಣ್ಮರೆಯಾಗಿದ್ದ. ನಂತರ ತುಂಗಾ ನದಿಗೆ ಹಾರಿರಬಹುದು ಎಂಬ ಅನುಮಾನದಿಂದ ಪೋಲೀಸ್, ಅಗ್ನಿಶಾಮಾಕದಳದ ಸಿಬ್ಬಂದಿಗಳು ಹುಡುಕಾಟ ನಡೆಸಿದ್ದರು. ಆದರೆ ಸ್ವಲ್ಪ ದೂರದಲ್ಲಿರುವ ತುಂಗಾ ನದಿ ಸ್ಮಶಾನಕಟ್ಟೆ ಸಮೀಪ ಆತನ ಶವ ಸಿಕ್ಕಿದೆ.
ಹುಡುಗಿ ಸಿಕ್ಕಿಲ್ಲ ಎಂಬುದರ ಜೊತೆಗೆ ಆತ ಆನ್ಲೈನ್ ಟ್ರೇಡಿಂಗ್ ನಲ್ಲಿ ಸಿಲುಕಿಹಾಕಿಕೊಂಡಿದ್ದ ಎಂಬುದಾಗಿ ಮಾತು ಕೇಳಿ ಬಂದಿತ್ತು. ಒಟ್ಟಿನಲ್ಲಿ ಬದುಕಿ ಬಾಳ ಬೇಕಿದ್ದ ಯುವಕ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆ.
ಸದ್ಯ ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ
Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ
Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರಕಲಾದ ಬಸ್
ಭದ್ರಾವತಿಯ ರೈಸ್ಮಿಲ್ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.