BJP: ವಿಪಕ್ಷ ನಾಯಕರ ನೇಮಕ ಮಾಡದಿದ್ದರೆ ಅಧಿವೇಶನಕ್ಕೆ ಗೈರು?
ಕೇಂದ್ರ ವರಿಷ್ಠರ ಬಗ್ಗೆ ಬಿಜೆಪಿ ಶಾಸಕರ ಅಸಮಾಧಾನ- ಸದನದಲ್ಲಿ ಆಡಳಿತ ಪಕ್ಷದಿಂದ ಮುಜುಗರ
Team Udayavani, Nov 1, 2023, 10:37 PM IST
ಬೆಂಗಳೂರು: ಬೆಳಗಾವಿಯ ಚಳಿಗಾಲದ ವಿಧಾನಮಂಡಲ ಅಧಿವೇಶನದ ವೇಳೆಗೆ ಪ್ರತಿಪಕ್ಷ ನಾಯಕರ ಆಯ್ಕೆಯಾಗದಿದ್ದರೆ ನಾವು ಅಧಿವೇಶನಕ್ಕೆ ಗೈರಾಗಬೇಕಾಗುತ್ತದೆ ಎಂದು ಅತೃಪ್ತಿ ವ್ಯಕ್ತಪಡಿಸಿರುವ ಬಿಜೆಪಿ ಶಾಸಕರು, ಕೇಂದ್ರ ವರಿಷ್ಠರ ನಡೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಮಂಗಳವಾರ ನಡೆದ ಬೆಂಗಳೂರು ಶಾಸಕರ ಸಭೆಯಲ್ಲಿ ಈ ಅಭಿಪ್ರಾಯ ವ್ಯಕ್ತವಾಗಿದೆ. ಆದಷ್ಟು ಬೇಗ ಈ ಸಂವಿಧಾನಾತ್ಮಕ ಹುದ್ದೆಗೆ ಅರ್ಹರನ್ನು ನೇಮಕ ಮಾಡಬೇಕು. ವಿಪಕ್ಷ ನಾಯಕನೇ ಇಲ್ಲದೇ ಸದನಕ್ಕೆ ಹಾಜರಾಗುವುದು ಅಥವಾ ಕಲಾಪದಲ್ಲಿ ಹೋರಾಟ ನಡೆಸುವುದು ಮುಜುಗರದ ವಾತಾವರಣ ಸೃಷ್ಟಿಸುತ್ತದೆ. ಈ ಬಾರಿಯೂ ಆಗದಿದ್ದರೆ ಬೆಳಗಾವಿ ಅಧಿವೇಶನಕ್ಕೆ ನಾವು ಗೈರಾಗಬೇಕಾಗುತ್ತದೆ. ಈ ಮಾಹಿತಿಯನ್ನು ನೀವು ವರಿಷ್ಠರಿಗೆ ರವಾನೆ ಮಾಡಿ ಎಂದು ಶಾಸಕರು ಖಡಕ್ ಎಚ್ಚರಿಕೆ ನೀಡಿದ್ದಾರೆ.
ನಾವು ವರಿಷ್ಠರಿಗೆ ವಿರುದ್ಧವಲ್ಲ. ಆದರೆ ವಿಧಾನಸಭೆ ಚುನಾವಣೆ ಮುಗಿದು ಆರು ತಿಂಗಳಾಗುತ್ತಾ ಬಂದಿದೆ. ಆಡಳಿತ ಪಕ್ಷದವರು ಸದನದ ಒಳಗೆ ಮತ್ತು ಹೊರಗೆ ಪ್ರತಿಪಕ್ಷದ ನಾಯಕನನ್ನು ಆಯ್ಕೆ ಮಾಡುವ ಯೋಗ್ಯತೆ ಇಲ್ಲದವರು ಎಂದು ನಮ್ಮನ್ನು ಟೀಕಿಸುತ್ತಿದ್ದಾರೆ. ಸರ್ಕಾರದ ಯಾವ ವೈಫಲ್ಯವನ್ನು ಬಹಿರಂಗಪಡಿಸಲು ಹೋದರೂ ಈ ಪ್ರಶ್ನೆ ಮುಂದಿಟ್ಟು ನಮ್ಮ ಬಾಯಿ ಮುಚ್ಚಿಸುತ್ತಾರೆ. ಎಷ್ಟು ದಿನಗಳ ಕಾಲ ಈ ಅಪಮಾನ ಸೈರಿಸಿಕೊಳ್ಳಲು ಸಾಧ್ಯ? ಎಂದು ಶಾಸಕರು ಪ್ರಶ್ನಿಸಿದ್ದಾರೆ ಎಂದು ತಿಳಿದು ಬಂದಿದೆ.
ಇದಕ್ಕೆ ಪ್ರತಿಕ್ರಿಯಿಸಿರುವ ಯಡಿಯೂರಪ್ಪ, ಹಿಂದೆ ನಾನು ದೆಹಲಿಗೆ ಭೇಟಿ ನೀಡಿದ ವೇಳೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ಈ ಸಂಬಂಧ ಮನವಿ ಮಾಡಿ¨ªೆ. ಎಷ್ಟು ಸಾಧ್ಯವೋ ಅಷ್ಟು ಬೇಗ ಆಯ್ಕೆ ಮಾಡುವ ಆಶ್ವಾಸನೆ ಕೊಟ್ಟಿದ್ದರು. ಆದರೂ ಈಗಲೂ ಮಾಡದಿರುವುದು ವೈಯಕ್ತಿಕವಾಗಿ ನನಗೂ ಬೇಸರ ತಂದಿದೆ ಎಂದು ಅಸಹಾಯಕತೆ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.
ಈ ಮಾಸಾಂತ್ಯಕ್ಕೆ ಪ್ರಕ್ರಿಯೆ ಮುಗಿಯಲಿ
ಶಾಸಕರು ನವೆಂಬರ್ ಅಂತ್ಯದೊಳಗೆ ಈ ಪ್ರಕ್ರಿಯೆ ಮುಗಿಯದಿದ್ದರೆ ಬೆಳಗಾವಿ ಅವೇಶನಕ್ಕೆ ನಾವು ಹೋಗುವುದೇ ಇಲ್ಲ. ನಮ್ಮನ್ನು ಮುಜುಗರ ಮಾಡಬೇಕೆಂಬ ಉದ್ದೇಶ ರಾಷ್ಟ್ರೀಯ ನಾಯಕರಿಗಿದ್ದರೆ ನಾವು ಏನೂ ಮಾಡಲು ಆಗುವುದಿಲ್ಲ ಎಂದು ಮರಳಿ ಪಟ್ಟು ಹಿಡಿದಿದ್ದಾರೆ. ಆದರೆ ಶಾಸಕರು ಈ ಬಗ್ಗೆ ಬಹಿರಂಗ ಹೇಳಿಕೆ ನೀಡಬಾರದು. ವರಿಷ್ಠರು ಪಂಚರಾಜ್ಯಗಳ ಚುನಾವಣೆಯಲ್ಲಿ ಮಗ್ನರಾಗಿದ್ದಾರೆ. ಎಲ್ಲವೂ ಸುಖಾಂತ್ಯವಾಗುತ್ತದೆ. ಸದ್ಯದಲ್ಲೇ ನಾನು ದೆಹಲಿಗೆ ತೆರಳಿ ವರಿಷ್ಠರಿಗೆ ಪರಿಸ್ಥಿತಿಯನ್ನು ಮನವರಿಕೆ ಮಾಡಿಕೊಡುತ್ತೇನೆಂದು ಯಡಿಯೂರಪ್ಪ ಭರವಸೆ ನೀಡಿದ್ದಾರೆಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RSS ಕಚೇರಿ ಟೆಕ್ಕಿಗಳ ಬಳಸಿ ಇವಿಎಂ ಹ್ಯಾಕ್: ವಸಂತ
Honnavar;ಸಮುದ್ರದಲ್ಲಿ ಮುಳುಗುತ್ತಿದ್ದ ಮೂವರು ಯುವತಿಯರ ರಕ್ಷಣೆ
Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.