ನಟಿ ರಮ್ಯಾಗೆ ಅಶ್ಲೀಲ ಕಮೆಂಟ್ಸ್: ಪ್ರಕರಣ ದಾಖಲು, ಆರೋಪಿಗಾಗಿ ಶೋಧ
ಇತ್ತೀಚೆಗೆ ಚಾರ್ಲಿ 777 ಕನ್ನಡ ಚಲನ ಚಿತ್ರ ಚೆನ್ನಾಗಿದೆ ಎಂದು ಜೂ.6ರಂದು ರಮ್ಯಾ ಪ್ರಕಟಿಸಿದ್ದರು.
Team Udayavani, Jun 10, 2022, 12:29 PM IST
ಬೆಂಗಳೂರು: ಅಶ್ಲೀಲ ಕಮೆಂಟ್ ಹಾಕಿ ಟ್ಯಾಗ್ ಮಾಡಿದ ವ್ಯಕ್ತಿಯ ವಿರುದ್ಧ ನಟಿ ರಮ್ಯಾ ಪ್ರಕರಣ ದಾಖಲಿಸಿದ್ದಾರೆ. ಗುರುವಾರ ಸೆನ್ ಠಾಣೆಗೆ ನಟಿ ರಮ್ಯಾ ಖುದ್ದು ಹಾಜರಾಗಿ ದೂರು ನೀಡಿದ್ದಾರೆ.
ಇದನ್ನೂ ಓದಿ: ತಮಿಳುನಾಡಿಗೂ”ನಮ್ಮ ಮೆಟ್ರೋ’ ವಿಸ್ತರಿಸಲು ಚಿಂತನೆ; ಸಿಎಂ ಬೊಮ್ಮಾಯಿ
ಇನ್ ಸ್ಟ್ರಾಗ್ರಾಮ್ ಖಾತೆಯಲ್ಲಿ ರಮ್ಯಾ ದಿವ್ಯ ಸ್ಪಂದನಾ ಎಂಬ ಹೆಸರಿನ ಖಾತೆ ಹೊಂದಿದ್ದಾರೆ. ಇತ್ತೀಚೆಗೆ ಚಾರ್ಲಿ 777 ಕನ್ನಡ ಚಲನ ಚಿತ್ರ ಚೆನ್ನಾಗಿದೆ ಎಂದು ಜೂ.6ರಂದು ರಮ್ಯಾ ಪ್ರಕಟಿಸಿದ್ದರು.
ಜೂ.8ರಂದು ಪ್ರೀತಮ್ ಡಾಟ್ ಪ್ರಿನ್ಸ್ ಡಾಟ್ ಕೆ ಹೆಸರಿನ ಇನ್ ಸ್ಟ್ರಾಗ್ರಾಂ ಖಾತೆ ಹೊಂದಿರುವ ವ್ಯಕ್ತಿ ರಮ್ಯಾ ಬಗ್ಗೆ ಅಶ್ಲೀಲ ಪದಗಳಿಂದ ಕಮೆಂಟ್ ಮಾಡಿ, ಪೋಸ್ಟ್ ಮಾಡಿ, ರಮ್ಯಾಗೆ ಟ್ಯಾಗ್ ಮಾಡಿದ್ದ. ಈ ಹಿನ್ನೆಲೆಯಲ್ಲಿ “ನನ್ನ ಮಾನಕ್ಕೆ ಧಕ್ಕೆಯುಂಟು ಮಾಡಿದ ಆರೋಪಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ’ ರಮ್ಯಾ ದೂರಿನಲ್ಲಿ ಉಲ್ಲೇಖಿಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಸದ್ಯ ರಮ್ಯಾ ದೂರಿನ ಅನ್ವಯ ಎಫ್ ಐಆರ್ ದಾಖಲಿಸಿಕೊಂಡಿರುವ ಕೇಂದ್ರ ವಿಭಾಗದ ಸೆನ್ ಠಾಣೆ ಪೊಲೀಸರು ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಪ್ರಕರಣ ದಾಖಲಿಸುವ ಮೊದಲು ನಟಿ ರಮ್ಯಾ ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿಯನ್ನು ಭೇಟಿಯಾಗಿ ಕೆಲ ಹೊತ್ತು ಚರ್ಚಿಸಿದ್ದರು. ಆರೋಪಿಯನ್ನು ಬಂಧಿಸುವಂತೆ ಕಮಿಷನರ್‌ಗೂ ಮನವಿ ಮಾಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್ ಗೆ ಆಹ್ವಾನವಿಲ್ಲ! ದಿಗ್ಗಜನ ಬೇಸರ
Gundlupete: ಅಕ್ರಮವಾಗಿ 3 ಕೆ.ಜಿ. 100 ಗ್ರಾಂ ಗಾಂಜಾ ಸಾಗಣೆ: ಬಂಧನ
Odisha: ಕಾರಿಗೆ ಟ್ರಕ್ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು
Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ
Snuff: ನಶ್ಯ ತಂದಿಟ್ಟ ಸಮಸ್ಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್ ಗೆ ಆಹ್ವಾನವಿಲ್ಲ! ದಿಗ್ಗಜನ ಬೇಸರ
Gundlupete: ಅಕ್ರಮವಾಗಿ 3 ಕೆ.ಜಿ. 100 ಗ್ರಾಂ ಗಾಂಜಾ ಸಾಗಣೆ: ಬಂಧನ
Odisha: ಕಾರಿಗೆ ಟ್ರಕ್ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು
Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ
Snuff: ನಶ್ಯ ತಂದಿಟ್ಟ ಸಮಸ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.