ಎಚ್‌ಡಿಕೆಗೆ ನಿಂದನೆ: ದರ್ಶನ್ ಮಹಿಳಾ ಅಭಿಮಾನಿ ವಿರುದ್ಧ ದೂರು
Team Udayavani, Jun 22, 2024, 12:43 AM IST
ಮಂಡ್ಯ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಾಚ್ಯ ಶಬ್ಧಗಳಿಂದ ನಿಂದಿಸಿ ಅವಮಾನಿಸಿರುವ ಮಹಿಳೆ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಜೆಡಿಎಸ್ ಮುಖಂಡರು ಪೊಲೀಸರಿಗೆ ದೂರು ಸಲ್ಲಿಸಿ ಆಗ್ರಹಿಸಿದ್ದಾರೆ.
ನಗರದ ಸೈಬರ್ ಕ್ರೈಂ ಠಾಣೆಯಲ್ಲಿ ಪಕ್ಷದ ಜಿಲ್ಲಾ ವಕ್ತಾರ ಎಂ.ಎಸ್. ರಘುನಂದನ್ ಸೇರಿ ಜೆಡಿಎಸ್ ಮುಖಂಡರು ಶುಕ್ರವಾರ ದೂರು ದಾಖಲಿಸಿದರು. ಸಾಮಾಜಿಕ ಜಾಲತಾಣದಲ್ಲಿ ಮಂಗಳಾ, ಕೇಂದ್ರ ಸಚಿವ ಕುಮಾರಸ್ವಾಮಿ ಕುರಿತು ಕೀಳು ಭಾಷೆಯಲ್ಲಿ ನಿಂದಿಸಿದ್ದಾರೆ.
ಕುಮಾರಸ್ವಾಮಿ ಮತ್ತು ನಟ ದರ್ಶನ್ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ. ಆದರೂ ಅನವಶ್ಯಕವಾಗಿ ಕುಮಾರಸ್ವಾಮಿ ಹೆಸರನ್ನು ಎಳೆದು ತಂದಿದ್ದಾರೆ. ಮಂಗಳಾ ಮತ್ತವರಿಗೆ ಸಂಬಂಧಿ ಸಿದ ಸಾಮಾಜಿಕ ಜಾಲತಾಣದ ಖಾತೆಗಳ ಮೇಲೆ ಕ್ರಮ ತೆಗೆದುಕೊಳ್ಳಬೇಕೆಂದು ದೂರಿನಲ್ಲಿ ಮನವಿ ಮಾಡಿದ್ದಾರೆ.
ಪತ್ರಕರ್ತರ ವಿರುದ್ಧ ನಟ ದರ್ಶನ್ ಅಭಿಮಾನಿಯಿಂದ ಬೆದರಿಕೆ: ಎಸ್ಪಿಗೆ ದೂರು
ಮಂಡ್ಯ: ಪತ್ರಕರ್ತರಿಗೆ ಬೇರೆ ಕೆಲಸವಿಲ್ಲ, ದಿನವಿಡೀ ನಟ ದರ್ಶನ್ ಸುದ್ದಿ ತೋರಿಸುವುದೇ ಕೆಲಸವಾಗಿದೆ ಎಂದು ನಟ ದರ್ಶನ್ ಅಭಿಮಾನಿಯೊಬ್ಬ ಪತ್ರಕರ್ತರಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿ ಬೆದರಿಕೆ ಹಾಕಿರುವ ಘಟನೆ ಶುಕ್ರವಾರ ನಗರದ ಪತ್ರಕರ್ತರ ಭವನದ ಬಳಿ ನಡೆದಿದೆ.
ಪತ್ರಕರ್ತರು ಭವನದ ಮುಂದೆ ಮಾತನಾಡುತ್ತಾ ನಿಂತಿದ್ದಾಗ ಅಲ್ಲಿಗೆ ಬೈಕ್‌ನಲ್ಲಿ ಬಂದ ಅಪರಿಚಿತ ದರ್ಶನ್ ಅಭಿಮಾನಿ ಬೆದರಿಕೆ ಹಾಕಿದ್ದಾನೆ. ಇನ್ನೋರ್ವ ಕೂಡ ಪತ್ರಕರ್ತರನ್ನು ನಿಂದಿಸಿದ್ದಾನೆ.
ಇಬ್ಬರ ವಿರುದ್ಧ ಕಾನೂನು ಕ್ರಮ ಕೈಗೊಂಡು ಪತ್ರಕರ್ತರಿಗೆ ಸೂಕ್ತ ರಕ್ಷಣೆ ನೀಡಬೇಕು ಎಂದು ಎಸ್ಪಿ ಎನ್. ಯತೀಶ್ ಅವರಿಗೆ ಸಂಘದಿಂದ ದೂರು ಸಲ್ಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya; ಭೀಕರ ಅಪಘಾ*ತದಲ್ಲಿ ಮೂವರು ವಿದ್ಯಾರ್ಥಿಗಳು ಮೃ*ತ್ಯು
Mandya :ಗಂಡ ಗದ್ಯ, ಹೆಂಡತಿ ಪದ್ಯ, ಮಕ್ಕಳು ರಗಳೆ!: ಹಾಸ್ಯ ಸಾಹಿತಿ ವೈ.ವಿ.ಗುಂಡೂರಾವ್
Mandya Sahitya Sammelana: ಅಕ್ಷರ ಜಾತ್ರೆಯಲ್ಲಿ “ಹವಾ’ ಎಬ್ಬಿಸಿದ ತೊಟ್ಟಿ ಮನೆ..!
Mandya: ನುಡಿ ಹಬ್ಬದ ಔತಣ ಸವಿಯಲು ಜನವೋ ಜನ- ವೃದ್ಧರಿಗೆ ವಿಶೇಷ ಕೌಂಟರ್
Mandya:87ನೇ ಕನ್ನಡ ಸಾಹಿತ್ಯ ಸಮ್ಮೇಳನ:ಹಿಂದಿ ಹೇರಿಕೆಯ ವಿರುದ್ಧ ಕಹಳೆ-ಗೊ.ರು.ಚನ್ನ ಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.