ಲಂಚ ಸ್ವೀಕಾರ : ಎಸಿಬಿ ಬಲೆಗೆ ಬಿದ್ದ ಲೋಕೋಪಯೋಗಿ ಅಧಿಕಾರಿ
Team Udayavani, Oct 31, 2019, 7:49 PM IST
ಶಿವಮೊಗ್ಗ: ಕಾಂಟ್ರಾಕ್ಟರ್ ಲೈಸೆನ್ಸ್ ನೀಡಲು ಲಂಚ ಸ್ವೀಕರಿಸುತ್ತಿದ್ದ ಅಧಿಕಾರಿ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದುರ್ಗಿಗುಡಿಯಲ್ಲಿ ಇಂದು ಸಂಜೆ ದಾಳಿ ನಡೆಸಿ, ಅಧಿಕಾರಿಯನ್ನು ಬಂಧಿಸಲಾಗಿದೆ.
ಲೋಕೋಪಯೋಗಿ ಇಲಾಖೆ ಕಚೇರಿ ವ್ಯವಸ್ಥಾಪಕ ಶೇಖ್ ಮೊಹಮ್ಮದ್ ರಫಿ, ಎಸಿಬಿ ಬಲೆಗೆ ಬಿದ್ದ ಅಧಿಕಾರಿ. ದಾವಣಗೆರೆಯ ಜಗಳೂರಿನ ವೈ.ಪಿ.ಸಿದ್ದನಗೌಡ ಅವರಿಗೆ ಕ್ಲಾಸ್ 3 ಕಾಂಟ್ರಾಕ್ಟರ್ ಲೈಸೆನ್ಸ್ ಮಾಡಿಕೊಡಲು ಶೇಖ್ ಮೊಹಮ್ಮದ್ ರಫಿ 10 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಮೊದಲು ಐದು ಸಾವಿರ ರೂ. ಹಣವನ್ನು ಪಡೆದಿದ್ದರು. ಇವತ್ತು ಎರಡನೆ ಕಂತು 5 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಎಸಿಬಿ ಡಿವೈಎಸ್’ಪಿ ವೇಣುಗೋಪಾಲ್, ಇನ್ಸ್’ಪೆಕ್ಟರ್ ಜೆ.ಎಸ್.ತಿಪ್ಪೇಸ್ವಾಮಿ, ಎನ್.ವೀರೇಂದ್ರ, ವಸಂತ, ನಾಗರಾಜ, ರಘುನಾಯ್ಕ, ಸುರೇಂದ್ರ, ಯೋಗೇಶಪ್ಪ, ಹರೀಶ್, ಶ್ರೀನಿವಾಸ್ ಅವರು ದಾಳಿಯಲ್ಲಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.