Lok Sabha Elections; ವೀಣಕ್ಕನನ್ನು ಜತೆಗೆ ಕರೆದೊಯ್ಯುವೆ: ಸಂಯುಕ್ತಾ ಪಾಟೀಲ್
Team Udayavani, Mar 24, 2024, 12:16 AM IST
ಬಾದಾಮಿ: ಪ್ರಸ್ತುತ ಲೋಕಸಭೆ ಚುನಾವಣೆಗೆ ಕ್ಷೇತ್ರದಲ್ಲಿ ಅತ್ಯುತ್ತಮ ಪ್ರತಿಕ್ರಿಯೆ ಇದೆ. ಟಿಕೆಟ್ ಆಕಾಂಕ್ಷಿಯಾಗಿದ್ದ ನಮ್ಮ ವೀಣಕ್ಕನಿಗೆ ಸದ್ಯ ಬೇಸರವಿದೆ. ಅವರ ಮನವೊಲಿಸಿ ಒಟ್ಟಿಗೆ ಕರೆದುಕೊಂಡೇ ಚುನಾವಣೆ ಎದುರಿಸುತ್ತೇವೆ ಎಂದು ಕಾಂಗ್ರೆಸ್‌ನ ಬಾಗಲಕೋಟೆ ಲೋಕಸಭೆ ಕ್ಷೇತ್ರದ ಅಭ್ಯರ್ಥಿ ಸಂಯುಕ್ತಾ ಪಾಟೀಲ್ ಹೇಳಿದರು.
ನಗರದಲ್ಲಿ ಕಾಂಗ್ರೆಸ್ ಬೂತ್ ಮಟ್ಟದ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವೀಣಾ ಕಾಶಪ್ಪನವರ್ ಕ್ಷೇತ್ರದಲ್ಲಿ ಸಾಕಷ್ಟು ಕೆಲಸ ಮಾಡಿದ್ದಾರೆ. ಪಕ್ಷದ ಹಿರಿಯರು ನನಗೆ ಅವಕಾಶ ಕೊಟ್ಟಿದ್ದಾರೆ. ಶೀಘ್ರವೇ ಅವರನ್ನು ನಾನು ಭೇಟಿ ಮಾಡುತ್ತೇನೆ. ಅವರನ್ನು ಬಿಟ್ಟು ಲೋಕಸಭೆ ಚುನಾವಣೆ ಮಾಡುವುದು ಹೇಗೆ ಎಂದು ಪ್ರಶ್ನಿಸಿದರು.
ಧಮ್ಕಿ ಹಾಕಿಲ್ಲ
ಅಭಿಮಾನಿಗಳು-ಹಿತೈಷಿಗಳ ಸಭೆಗೆ ಹೋಗದಂತೆ ಕೆಲವರಿಗೆ ಧಮ್ಕಿ ಹಾಕಲಾಗಿದೆ ಎಂಬ ಶಾಸಕ ವಿಜಯಾನಂದ ಕಾಶಪ್ಪನರ್ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ನಾವು ಯಾರಿಗೂ ಧಮ್ಕಿ ಹಾಕುತ್ತಿಲ್ಲ ಎಂದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.