Fake ID ತೋರಿಸಿ ವಿಧಾನಸೌಧ ಸುತ್ತಾಟ: ಆರೋಪಿ ಸೆರೆ
Team Udayavani, Aug 9, 2024, 8:04 PM IST
ಬೆಂಗಳೂರು: ಸಚಿವಾಲಯದಲ್ಲಿ ಆಪ್ತ ಸಹಾಯಕನಾಗಿ ಕೆಲಸ ಮಾಡುತ್ತಿರುವುದಾಗಿ ಹೇಳಿಕೊಂಡು ನಕಲಿ ಗುರುತಿನ ಚೀಟಿ ತೋರಿಸಿ ವಿಧಾನಸೌಧದಲ್ಲಿ ಓಡಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ವಿಧಾನಸೌಧ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕು ಮೂಲದ ಬೆಂಗಳೂರಿನ ಜಯನಗರ ನಿವಾಸಿ ಶ್ರೀಶೈಲ ಜಕ್ಕಣ್ಣನವರ್ ಬಂಧಿತ. ಎಂ.ಎ.ಪಧವೀದರನಾಗಿರುವ ಶ್ರೀಶೈಲ ಜಕ್ಕಣ್ಣನವರ್ ವೃತ್ತಿಯಲ್ಲಿ ಗುತ್ತಿಗೆದಾರನಾಗಿ ಕೆಲಸ ಮಾಡುತ್ತಿದ್ದ. ಆರೋಪಿಯು ಗುತ್ತಿಗೆ ಸಂಬಂಧಿತ ಕೆಲಸದ ಬಗ್ಗೆ ಆಗಾಗ ವಿಧಾನಸೌಧಕ್ಕೆ ತೆರಳುತ್ತಿದ್ದ. ಪಾಸ್ ಇಲ್ಲದೆ ವಿಧಾನಸೌಧದೊಳಗೆ ಪ್ರವೇಶ ಪಡೆಯಲು ಪರದಾಡುತ್ತಿದ್ದ. ಹೀಗಾಗಿ ಸಚಿವಾಲಯದಲ್ಲಿ ಆಪ್ತ ಸಹಾಯಕನಾಗಿ ಕೆಲಸ ಮಾಡುತ್ತಿರುವ ಬಗ್ಗೆ ನಕಲಿ ಐಡಿಕಾರ್ಡ್ ತೋರಿಸಿ ಪ್ರವೇಶ ಪಡೆಯುತ್ತಿದ್ದ.
ಆ.5ರಂದು ಎಂದಿನಂತೆ ನಕಲಿ ಗುರುತಿನ ಚೀಟಿ ತೋರಿಸಿ ತೆರಳುತ್ತಿದ್ದಾಗ ಭದ್ರತಾ ಸಿಬ್ಬಂದಿ ಅನುಮಾನದ ಮೇರೆಗೆ ಪರಿಶೀಲಿಸಿದ್ದು ನಕಲಿ ಎಂಬುದು ಗೊತ್ತಾಗಿದ್ದು, ಪೊಲೀಸರು ವ್ಯಕ್ತಿಯನ್ನು ಬಂಧಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.