Health: ವೈದ್ಯರ ಸಲಹೆ ಇಲ್ಲದೆ ಔಷಧ ಮಾರಾಟ ವಿರುದ್ಧ ಕ್ರಮ: ದಿನೇಶ್
Team Udayavani, Nov 10, 2023, 11:49 PM IST
ಹಾಸನ: ಮೆಡಿಕಲ್ ಸ್ಟೋರ್‌ಗಳಿಂದ ಮಹಿಳೆಯರು ನೇರವಾಗಿ ಔಷಧ ಪಡೆದು ಗರ್ಭಪಾತಕ್ಕೆ ಯತ್ನಿಸುವುದರಿಂದ ಸಾವುಗಳು ಸಂಭವಿಸುತ್ತಿವೆ. ಆದರೂ ಔಷಧ ವ್ಯಾಪಾರಿಗಳನ್ನು ನಿಯಂತ್ರಿಸಲು ಸಾಧ್ಯವಾಗುತ್ತಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅಸಹಾಯಕತೆ ವ್ಯಕ್ತಪಡಿಸಿದರು.
ಹಾಸನ ವೈದ್ಯಕೀಯ ಕಾಲೇಜು ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಲಾಗಿದ್ದ ಅಂತಾರಾಷ್ಟ್ರೀಯ ಸುರಕ್ಷಾ ಗರ್ಭಪಾತ ದಿನ ಆಚರಣೆ ಹಾಗೂ ಸುರಕ್ಷಿತ ಗರ್ಭಪಾತ ಸೇವೆಗಳ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ಉದ್ಘಾಟಿಸಿ, ಭಿತ್ತಿ ಪತ್ರ ಬಿಡುಗಡೆ ಮಾಡಿ ಮಾತನಾಡಿದರು.
ವೈದ್ಯರ ಸಲಹೆ ಇಲ್ಲದೆ ಔಷಧ ಅಂಗಡಿಗಳಲ್ಲಿ ನೇರವಾಗಿ ಔಷಧ ಮಾರಾಟ ನಿಯಂತ್ರಿಸುವ ಸಂಬಂಧ ಡ್ರಗ್ಸ್ ಕಂಟ್ರೋಲ್ ಇಲಾಖಾಧಿಕಾರಿಗಳೊಂದಿಗೆ ಚರ್ಚಿಸಲಾಗುವುದು ಎಂದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.