Karnataka: ಅನಧಿಕೃತ ಕಟ್ಟಡಗಳ ಸಕ್ರಮಕ್ಕೆ ಕ್ರಮ
ಕರಡು ಸಿದ್ಧಪಡಿಸಲು ಸೂಚನೆ ಬಿ ಖಾತೆ ಮಾದರಿ ದಂಡ ವಸೂಲಿಗೆ ಶಿಫಾರಸು ಸಾಧ್ಯತೆ
Team Udayavani, Oct 19, 2023, 11:15 PM IST
ಬೆಂಗಳೂರು: ರಾಜ್ಯದ ಅನಧಿಕೃತ ಕಟ್ಟಡಗಳಿಗೆ ಕಡಿವಾಣ ಹಾಕಲು ಕಠಿನ ಕ್ರಮಕ್ಕೆ ಮುಂದಾಗಿರುವ ಸಚಿವ ಸಂಪುಟ ಉಪಸಮಿತಿ, ವಾರದೊಳಗೆ ಈ ಸಂಬಂಧದ ಕರಡು ಸಿದ್ಧಪಡಿಸಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದೆ.
ವಿಧಾನಸೌಧದಲ್ಲಿ ಗುರುವಾರ ಬಿಬಿಎಂಪಿ ಕಾಯ್ದೆ- 2020ರ ಕಲಂ 144 (6) ಮತ್ತು (21)ರ ಅಂಶಗಳನ್ನು ಇತರ ಮಹಾನಗರ ಪಾಲಿಕೆಗಳಿಗೆ/ ನಗರ ಸ್ಥಳೀಯ ಸಂಸ್ಥೆಗಳಿಗೆ ವಿಸ್ತರಿಸುವ ಸಂಬಂಧ ಕರ್ನಾಟಕ ಮಹಾನಗರ ಪಾಲಿಕೆಗಳ ಕಾಯ್ದೆ 1976 ಹಾಗೂ ಕರ್ನಾಟಕ ಪುರಸಭೆ ಕಾಯ್ದೆ 1964ರಲ್ಲಿ ಅಳವಡಿಸಿಕೊಳ್ಳುವ ಕುರಿತ ಸಾಧಕ ಬಾಧಕ ಪರಿಶೀಲಿಸಲು ಸೂಕ್ತ ತೀರ್ಮಾನ ಕೈಗೊಳ್ಳಲು ರಚಿಸಲಾಗಿರುವ ಉಪಸಮಿತಿಯ ಮೊದಲ ಸಭೆ ನಡೆಯಿತು.
ಸಚಿವ ಈಶ್ವರ ಖಂಡ್ರೆ ಅಧ್ಯಕ್ಷತೆ ವಹಿಸಿದ್ದ ಸಭೆಯಲ್ಲಿ, ಅನಧಿಕೃತ ಕಟ್ಟಡಗಳಿಗೆ ನಿರ್ವಹಣೆ ಶುಲ್ಕ ರೂಪದಲ್ಲಿ ತೆರಿಗೆ ವಿಧಿಸುವ, ಬಡಾವಣೆಯ ಮಂಜೂರಾತಿ, ನಕ್ಷೆ ಮಂಜೂರಾತಿ ಪ್ರಕ್ರಿಯೆ ಸರಳಗೊಳಿಸುವ ಮತ್ತು ನಕ್ಷೆ ಉಲ್ಲಂ ಸಿ ಅಥವಾ ಮಂಜೂರಾತಿ ಇಲ್ಲದ ಕಟ್ಟಡ ನಿರ್ಮಾಣಕ್ಕೆ ಕಡಿವಾಣ ಹಾಕುವ ಕುರಿತಂತೆ ಕರಡು ಸಿದ್ಧಪಡಿಸಿ ವಾರದೊಳಗೆ ಸಲ್ಲಿಸುವಂತೆ ನಿರ್ದೇಶನ ನೀಡಲಾಯಿತು.
ಕಡಿವಾಣಕ್ಕೆ ಅರಣ್ಯ ಕಾಯ್ದೆ ಮಾದರಿ?
ಸಭೆಯಲ್ಲಿ ಮಾತನಾಡಿದ ಸಚಿವ ಈಶ್ವರ ಖಂಡ್ರೆ, ಅರಣ್ಯ ಕಾಯ್ದೆಯಲ್ಲಿ ಅರಣ್ಯ ಭೂಮಿ ಒತ್ತುವರಿ ಮಾಡಿದವರ ವಿರುದ್ಧ ಪ್ರಕರಣ ದಾಖಲಿಸುವುದರ ಜತೆಗೆ, ಒತ್ತುವರಿದಾರರನ್ನು ಬಂಧಿಸಿ ಶಿಕ್ಷೆಗೊಳಪಡಿಸಲೂ ಅವಕಾಶವಿದೆ. ಅದೇ ರೀತಿ ಕಂದಾಯ ಭೂಮಿ ಒತ್ತುವರಿ ಮಾಡಿದವರ ವಿರುದ್ಧ ಕಠಿನ ಕ್ರಮ ಕೈಗೊಳ್ಳಲು ಲಭ್ಯವಿರುವ ಕಾಯ್ದೆಗೆ ತಿದ್ದುಪಡಿ ತರಬೇಕಿದೆ. ಅರಣ್ಯ ಕಾಯ್ದೆಯ ಅಂಶಗಳನ್ನೂ ಅದಕ್ಕೆ ಸೇರಿಸಬೇಕಿದೆ ಎಂದು ಸಲಹೆ ನೀಡಿದರು.
ಪ್ರಸ್ತುತ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ 54.91 ಲಕ್ಷಕ್ಕೂ ಹೆಚ್ಚು ಆಸ್ತಿಗಳಿದ್ದು, ಈ ಪೈಕಿ ಸುಮಾರು 20.55 ಲಕ್ಷ ಅಧಿಕೃತ ಆಸ್ತಿಗಳಾಗಿವೆ. ತೆರಿಗೆ ಪಾವತಿಸುತ್ತಿದ್ದರೆ, ಅನಧಿಕೃತವಾದ 34.35 ಲಕ್ಷಕ್ಕೂ ಅಧಿಕ ಆಸ್ತಿಗಳಿಗೆ ಯಾವುದೇ ತೆರಿಗೆ ವಿಧಿಸಲಾಗುತ್ತಿಲ್ಲ. ಆದರೆ ಆ ಎಲ್ಲ ಸೊತ್ತಿಗೂ ನೀರು, ರಸ್ತೆ, ವಿದ್ಯುತ್, ಬೀದಿದೀಪ, ಕಸ ವಿಲೇವಾರಿ ಸಹಿತ ಅಗತ್ಯ ಮೂಲಸೌಕರ್ಯ ಕಲ್ಪಿಸಲಾಗುತ್ತಿದೆ. ಸ್ಥಳೀಯ ಸಂಸ್ಥೆಗಳು ಸಮರ್ಪಕವಾಗಿ ಕಾರ್ಯನಿರ್ವಹಿಸಲು ಆಸ್ತಿ ತೆರಿಗೆ ಸಂಗ್ರಹಣೆಯೇ ಮಾರ್ಗವಾಗಿದೆ. ಇಂತಹ ಅನಧಿಕೃತ ಕಟ್ಟಡಗಳಿಗೆ ಬಿಬಿಎಂಪಿ ವ್ಯಾಪ್ತಿಯಲ್ಲಿ “ಬಿ’ ಖಾತೆ ನೀಡಿ ಆಸ್ತಿ ತೆರಿಗೆ ಸಂಗ್ರಹಿಸುವಂತೆ ದಂಡ ಸಹಿತ ಕಟ್ಟಡ ಕಂದಾಯ ಸಂಗ್ರಹಿಸಲು ಶಿಫಾರಸು ಮಾಡುವುದು ಉಪಸಮಿತಿ ಜವಾಬ್ದಾರಿ ಎಂದರು.
ಅಕ್ರಮ-ಸಕ್ರಮ ಯೋಜನೆ ಜಾರಿ ಮಾಡಲು ಪ್ರಸ್ತುತ ಸನ್ನಿವೇಶದಲ್ಲಿ ಸಾಧ್ಯವಿಲ್ಲ. ಈ ಸಂಬಂಧದ ಪ್ರಕರಣ ಸುಪ್ರೀಂಕೋರ್ಟ್‌ನಲ್ಲಿದೆ. ಇನ್ನು ಮುಂದೆ ಅಕ್ರಮ ಕಟ್ಟಡ ನಿರ್ಮಾಣಕ್ಕೆ ಆಸ್ಪದ ನೀಡುವುದಿಲ್ಲ. ಈಗಾಗಲೇ ಹತ್ತಾರು ವರ್ಷಗಳಿಂದ ಮನೆ ನಿರ್ಮಿಸಿಕೊಂಡು ವಾಸ ಮಾಡುತ್ತಿರುವ ಮನೆಗಳಿಗೆ ದಂಡ ವಿಧಿಸಿ ಸಕ್ರಮಗೊಳಿಸುವ ಕುರಿತಂತೆ ಸುಪ್ರೀಂಕೋರ್ಟ್‌ಗೆ ಮನವರಿಕೆ ಮಾಡಿಸುವ ಪ್ರಯತ್ನ ಮಾಡಬೇಕು ಎಂದೂ ಹೇಳಿದರು.
ತಂತ್ರಾಂಶದಿಂದ ಅಕ್ರಮಕ್ಕೆ ಕಡಿವಾಣ
ಸಚಿವ ಕೃಷ್ಣ ಬೈರೇಗೌಡ ಮಾತನಾಡಿ, ಕಾನೂನುಬದ್ಧ ಮಾರ್ಗದಲ್ಲಿ ನಿವೇಶನ ಲಭಿಸಿದರೆ, ನಕ್ಷೆ ಮಂಜೂರಾತಿ ಪ್ರಕ್ರಿಯೆ ಸರಳವಾದರೆ ಅಕ್ರಮ ಬಡಾವಣೆ ಮತ್ತು ಕಟ್ಟಡ ನಿರ್ಮಾಣ ತಡೆಯಲು ಸಾಧ್ಯ. ಈ ನಿಟ್ಟಿನಲ್ಲಿ ಇನ್ನು ಮುಂದೆ ಅನಧಿಕೃತ ಬಡಾವಣೆ ತಲೆಎತ್ತದಂತೆ ತಡೆಯಲು ಆರ್‌ಟಿಸಿಯ ಕಾಲಂ 11ರಲ್ಲಿ ಅಕ್ರಮ ಬಡಾವಣೆ ಎಂದು ನಮೂದಿಸಿ, ಅದು ಉಪ ನೋಂದಣಾಧಿಕಾರಿಗಳಿಗೆ ಕಾವೇರಿ ತಂತ್ರಾಂಶದಲ್ಲಿ ನೇರ ಸಂಪರ್ಕಿತವಾಗುವಂತೆ ಮಾಡಿದರೆ, ಇಂತಹ ಅಕ್ರಮ ಬಡಾವಣೆ ನಿವೇಶನಗಳ ಮಾರಾಟ ತಡೆಯಬಹುದು ಎಂದು ಸಲಹೆ ಮಾಡಿದರು.
ಸಚಿವ ಎಚ್.ಕೆ. ಪಾಟೀಲ್ ಮಾತನಾಡಿ, ಇ-ಖಾತಾ ಆಧಾರದ ಮೇಲೆ ಮಾತ್ರ ನೋಂದಣಿ ಆಗಬೇಕು. ತಮ್ಮ ನಿವೇಶನಕ್ಕಿಂತ ಹೆಚ್ಚಿನ ಅಳತೆಯಲ್ಲಿ ಸರಕಾರಿ ಭೂಮಿ ಒತ್ತುವರಿ ಮಾಡಿ ಯಾರೇ ಕಟ್ಟಡ ನಿರ್ಮಿಸಿದ್ದರೆ, ಖಾತೆಯಲ್ಲಿ ಮಾಲಕರ ಹೆಸರು ಮತ್ತು ಸರಕಾರ ಎಂದು ನಮೂದಾಗುವಂತೆ ಮಾಡಬೇಕು ಮತ್ತು ಬಡವರು, ದಲಿತರು, ದುರ್ಬಲರು ಕಟ್ಟಿರುವ ಮನೆಗಳ ವಿಚಾರದಲ್ಲಿ ತೆರಿಗೆ ವಿಧಿಸುವಾಗ ಮಾನವೀಯತೆ ತೋರಿಸಬೇಕು ಎಂಬ ಸಲಹೆ ನೀಡಿದರು. ಸಚಿವ ರಹೀಂಖಾನ್, ಹಿರಿಯ ಅಧಿಕಾರಿಗಳಾದ ಮನೀಶ್ ಮೌದ್ಗಿಲ್, ನಿತೇಶ್ ಮತ್ತಿತರರು ಭಾಗವಹಿಸಿದ್ದರು.
5 ಸಾವಿರ ಕೋಟಿ ರೂ. ಆದಾಯ ನಿರೀಕ್ಷೆ
ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ 34.35 ಲಕ್ಷ ಅನಧಿಕೃತ ಆಸ್ತಿಗಳಿಂದ 4ರಿಂದ 5 ಸಾವಿರ ರೂ. ನಿರ್ವಹಣೆ ಶುಲ್ಕ ಅಥವಾ ಆಸ್ತಿ ತೆರಿಗೆ ಸಂಗ್ರಹವಾಗಲಿದೆ ಎಂದು ಅಂದಾಜಿಸಲಾಗಿದೆ. ಈ ಬಗ್ಗೆಯೂ ಸಚಿವ ಸಂಪುಟ ಉಪಸಮಿತಿಯು ಸರಕಾರಕ್ಕೆ ಸಲ್ಲಿಸುವ ವರದಿಯಲ್ಲಿ ಉಲ್ಲೇಖೀಸಲು ಸಭೆಯಲ್ಲಿ ಚರ್ಚಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್
Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್ ಜಾಮೀನ ಮಂಜೂರು
Vijay Hazare; ವಾಸುಕಿ,ಗೋಪಾಲ್ ಬೊಂಬಾಟ್ ಬೌಲಿಂಗ್; ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ
ಗದಗ: ಮಾವು ಬಂಪರ್ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.