ಸರ್ಕಾರ ರಕ್ಷಿಸಲು ಸಕ್ರಿಯರಾದ ಡಿಕೆಶಿ
ಮೈತ್ರಿಗೆ ಬೆಂಬಲಿಸುವಂತೆ ಸೂಚನೆ: ಮಂತ್ರಿ ಸ್ಥಾನಕ್ಕೆ ಬೇಡಿಕೆ ಇಟ್ಟ ಶಾಸಕ ನಾಗೇಶ್
Team Udayavani, May 29, 2019, 6:00 AM IST
ಬೆಂಗಳೂರು: ಕುಟುಂಬದೊಂದಿಗೆ ವಿದೇಶ ಪ್ರವಾಸಕ್ಕೆ ತೆರಳಿದ್ದ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಮಂಗಳವಾರ ಬೆಂಗಳೂರಿಗೆ ಆಗಮಿಸಿ, ಆಪರೇಷನ್ ಕಮಲದ ಆತಂಕದಲ್ಲಿರುವ ಮೈತ್ರಿ ಸರ್ಕಾರದ ರಕ್ಷಣೆಗೆ ಮುಂದಾಗಿದ್ದಾರೆ.
ಬೆಂಗಳೂರಿಗೆ ಆಗಮಿಸುತ್ತಿದ್ದಂತೆ ಮುಳಬಾಗಿಲು ಕ್ಷೇತ್ರದ ಪಕ್ಷೇತರ ಶಾಸಕ ನಾಗೇಶ್ ಅವರನ್ನು ತಮ್ಮ ನಿವಾಸಕ್ಕೆ ಕರೆಯಿಸಿ ಮೈತ್ರಿ ಸರ್ಕಾರದ ಜತೆಗೆ ಮುಂದುವರಿಯುವಂತೆ ಸೂಚನೆ ನೀಡಿದ್ದಾರೆ. ಸರ್ಕಾರದ ಆರಂಭದಲ್ಲಿ ನಾಗೇಶ್ ಬಹಿರಂಗವಾಗಿ ಮೈತ್ರಿ ಸರ್ಕಾರಕ್ಕೆ ಬೆಂಬಲ ವ್ಯಕ್ತಪಡಿಸಿ, ನಂತರ ಕಾಂಗ್ರೆಸ್ ಬಂಡಾಯ ಶಾಸಕ ರಮೇಶ್ ಜಾರಕಿಹೊಳಿ ಗುಂಪಿನೊಂದಿಗೆ ಸೇರಿಕೊಂಡು ರಾಜ್ಯ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ವಾಪಸ್ ಪಡೆದುಕೊಂಡಿದ್ದರು.
ಪ್ರಸ್ತುತ ವಿಧಾನಸಭೆಯಲ್ಲಿ ಇಬ್ಬರು ಪಕ್ಷೇತರ ಶಾಸಕರಿದ್ದು, ಈಗಾಗಲೇ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ರಾಣೆಬೆನ್ನೂರು ಶಾಸಕ ಆರ್. ಶಂಕರ್ ಅವರೊಂದಿಗೆ ಮಾತುಕತೆ ನಡೆಸಿ, ಸಚಿವ ಸ್ಥಾನ ನೀಡುವ ಭರವಸೆ ನೀಡಿ, ಮೈತ್ರಿ ಪಕ್ಷಕ್ಕೆ ಬೆಂಬಲ ನೀಡುವಂತೆ ಸೂಚಿಸಿದ್ದಾರೆಂದು ತಿಳಿದು ಬಂದಿದೆ. ಈಗ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ತಮ್ಮ ಆಪ್ತರಾಗಿರುವ ನಾಗೇಶ್ ಅವರನ್ನು ಸರ್ಕಾರಕ್ಕೆ ಬೆಂಬಲಿಸುವಂತೆ ಹೇಳಿದ್ದಾರೆ. ಸರ್ಕಾರಕ್ಕೆ ಬೆಂಬಲ ನೀಡಲು ಸಚಿವ ಸ್ಥಾನ ನೀಡುವಂತೆ ನಾಗೇಶ್ ಬೇಡಿಕೆ ಇಟ್ಟಿದ್ದಾರೆ.
ಸದ್ಯ ಸಂಪುಟದಲ್ಲಿ ಖಾಲಿ ಇರುವ ಮೂರು ಸ್ಥಾನಗಳಲ್ಲಿ ತಮ್ಮ ಪಾಲಿನ ಒಂದು ಸ್ಥಾನ ಹಾಗೂ ಜೆಡಿಎಸ್ ಬಳಿ ಇರುವ ಎರಡು ಸ್ಥಾನ ಭರ್ತಿ ಮಾಡಲು ಮೈತ್ರಿ ಪಕ್ಷಗಳ ನಾಯಕರು ನಿರ್ಧರಿಸಿರುವುದರಿಂದ, ಸಿ.ಎಸ್.ಶಿವಳ್ಳಿ ಅವರ ನಿಧನದಿಂದ ಖಾಲಿಯಾಗಿರುವ ಸ್ಥಾನವನ್ನು ರಾಣೆಬೆನ್ನೂರು ಪಕ್ಷೇತರ ಶಾಸಕ ಆರ್.ಶಂಕರ್ ಅವರಿಗೆ ನೀಡಲು ಈಗಾಗಲೇ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ ಎನ್ನಲಾಗಿದ್ದು, ನಾಗೇಶ್‌ಗೆ ಸಚಿವ ಸ್ಥಾನ ನೀಡುವ ಬಗ್ಗೆ ಕಾಂಗ್ರೆಸ್‌ನಲ್ಲಿ ಯಾವುದೇ ತೀರ್ಮಾನವಾಗಿಲ್ಲ ಎಂದು ತಿಳಿದು ಬಂದಿದೆ.
ಸಿಎಂ ಭೇಟಿ: ಸರ್ಕಾರಕ್ಕೆ ಬೆಂಬಲ ಸೂಚಿಸಲು ಸಚಿವ ಸ್ಥಾನಕ್ಕೆ ನಾಗೇಶ್ ಬೇಡಿಕೆ ಇಟ್ಟಿದ್ದರಿಂದ ಅವರನ್ನು ಮುಖ್ಯಮಂತ್ರಿ ಕುಮಾರಸ್ವಾಮಿ ಜತೆ ಡಿ.ಕೆ.ಶಿವಕುಮಾರ್ ಭೇಟಿ ಮಾಡಿಸಿ ದ್ದಾರೆ. ಸದ್ಯ ಜೆಡಿಎಸ್ ಕೋಟಾದಲ್ಲಿ ಖಾಲಿ ಇರುವ ಎರಡು ಸ್ಥಾನಗಳಲ್ಲಿ ಒಂದು ಸ್ಥಾನವನ್ನು ನಾಗೇಶ್‌ಗೆ ನೀಡುವ ಬಗ್ಗೆ ಮುಖ್ಯಮಂತ್ರಿ ಒಲವು ತೋರಿದ್ದಾರೆ ಎಂದು ತಿಳಿದು ಬಂದಿದೆ.
ಇದೇ ಸಂದರ್ಭದಲ್ಲಿ ಬಿಜೆಪಿಯ ಆಪರೇಷನ್ ಕಮಲಕ್ಕೆ ಪ್ರತಿತಂತ್ರ ರೂಪಿಸುವ ಕುರಿತು ಡಿ.ಕೆ. ಶಿವಕುಮಾರ್ ಹಾಗೂ ಎಚ್.ಡಿ.ಕುಮಾರಸ್ವಾಮಿ ಚರ್ಚೆ ನಡೆಸಿದ್ದಾರೆ ಎಂದು ತಿಳಿದು ಬಂದಿದ್ದು, ಯಾವುದೇ ಕಾರಣಕ್ಕೆ ಕಾಂಗ್ರೆಸ್ ಶಾಸಕರು ಪಕ್ಷ ತೊರೆಯದಂತೆ ನೋಡಿಕೊಂಡು ಮೈತ್ರಿ ಸರ್ಕಾರಕ್ಕೆ ಯಾವುದೇ ಧಕ್ಕೆಯಾಗದಂತೆ ನೋಡಿಕೊಳ್ಳುವ ಭರವಸೆಯನ್ನು ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಕುಮಾರಸ್ವಾಮಿಗೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಪುಟ್ಟರಂಗಶೆಟ್ಟರಿಗೆ ಸಿದ್ದರಾಮಯ್ಯ ತರಾಟೆ
ಮೈಸೂರು: ನಗರದಲ್ಲಿ ವಾಸ್ತವ್ಯ ಹೂಡಿರುವ ಸಿದ್ದರಾಮಯ್ಯ ಅವರು ಪುಟ್ಟರಂಗಶೆಟ್ಟಿಯನ್ನು ತೀವ್ರ ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ. ನಗರದ ಟಿ.ಕೆ.ಲೇ ಔಟ್ ಬಡಾವಣೆಯ ತಮ್ಮ ನಿವಾಸಕ್ಕೆ ಮಂಗಳವಾರ ಆಗಮಿಸಿದ ಸಚಿವ ಪುಟ್ಟರಂಗಶೆಟ್ಟಿಯನ್ನು ತರಾಟೆಗೆ ತೆಗೆದುಕೊಂಡ ಸಿದ್ದು, ‘ಏನಯ್ನಾ ಪುಟ್ಟರಂಗಶೆಟ್ಟಿ, ನಿನ್ನ ಕ್ಷೇತ್ರದಲ್ಲಿ ಧ್ರುವಂಗೆ ಕಡಿಮೆ ಲೀಡ್ ಬಂದಿದೆಯಂತೆ? ನೀನು ಲೀಡ್ರಾ? ನಿನ್ನ ಕ್ಷೇತ್ರದಲ್ಲೇ ಲೀಡ್ ಕೊಡಿಸಲಿಕ್ಕಾಗಲಿಲ್ಲ ಅಂದ್ರೆ ಹೆಂಗಯ್ನಾ?’ ಎಂದರು. ಚಾಮರಾಜನಗರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆರ್. ಧ್ರುವ ನಾರಾಯಣ ಸೋಲಿನ ಕುರಿತು ತರಾಟೆಗೆ ತೆಗೆದುಕೊಳ್ಳುತ್ತಿದ್ದಂತೆ ಮರು ಮಾತಿಲ್ಲದೆ ಸಚಿವ ಪುಟ್ಟರಂಗಶೆಟ್ಟಿ ಅಲ್ಲಿಂದ ಕಾಲ್ಕಿತ್ತರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್
Belagavi: ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಈಡೇರಿಕೆಗೆ ಕ್ರಮ: ಸಚಿವೆ ಲಕ್ಷ್ಮೀ
Shimoga: ಕಾಲೇಜಿನಲ್ಲಿ ಕುಸಿದು ಬಿದ್ದು 17 ವರ್ಷದ ವಿದ್ಯಾರ್ಥಿನಿ ಮೃ*ತ್ಯು
MUST WATCH
ಹೊಸ ಸೇರ್ಪಡೆ
Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್
Ujire: ಕಥನ ಸೃಜನಶೀಲತೆಯಿಂದ ಪ್ರಾದೇಶಿಕ ಸಂವೇದನೆಯ ಅಭಿವ್ಯಕ್ತಿ; ಅನುಪಮಾ ಪ್ರಸಾದ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.