Actor Darshan Bail Case: ಹತ್ಯೆ ಸ್ಥಳದಲ್ಲಿ ದರ್ಶನ್ ಇದ್ರು: ಫೋಟೋ ಸಾಕ್ಷ್ಯ ಲಭ್ಯ!
ಅರ್ಜಿ ವಿಚಾರಣೆ ಇನ್ನಷ್ಟು ತಿಂಗಳು ಮುಂದೂಡುವ ಸಾಧ್ಯತೆಯಿದೆ
Team Udayavani, Nov 22, 2024, 11:37 AM IST
ಉದಯವಾಣಿ ಸಮಾಚಾರ
ಬೆಂಗಳೂರು: ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣ ಸಂಬಂಧ ತನಿಖೆ ಪೂರ್ಣಗೊಳಿಸಿರುವ ಕಾಮಾಕ್ಷಿಪಾಳ್ಯ ಠಾಣೆ
ಪೊಲೀಸರು, ನಟ ದರ್ಶನ್ ಗ್ಯಾಂಗ್ ವಿರುದ್ಧ ಶುಕ್ರವಾರ ಅಥವಾ ಶನಿವಾರ ಹೆಚ್ಚುವರಿ ಆರೋಪಪಟ್ಟಿ ಸಲ್ಲಿಸಲಿದ್ದಾರೆ. ಈ
ಮೂಲಕ ನಟ ದರ್ಶನ್‌ಗೆ ಮತ್ತೂಂದು ಸಂಕಷ್ಟ ಎದುರಾಗಿದೆ.
ಪ್ರಕರಣ ಸಂಬಂಧ ಈಗಾಗಲೇ 4 ಸಾವಿರ ಪುಟಗಳ ಆರೋಪಪಟ್ಟಿ ಸಲ್ಲಿಸಿರುವ ಪೊಲೀಸರು, ಇದೀಗ 1,300 ಪುಟಗಳ
ಹೆಚ್ಚುವರಿ ಆರೋಪಪಟ್ಟಿಯನ್ನು ಸಲ್ಲಿಸಲಿದ್ದಾರೆ. ಈ ವೇಳೆ 30ಕ್ಕೂ ಹೆಚ್ಚು ಮಂದಿಯ ಸಾಕ್ಷಿಗಳು ಹಾಗೂ ಎಫ್ಎಸ್
ಎಲ್ ಹಾಗೂ ಇತರೆ ತಾಂತ್ರಿಕ ತನಿಖೆಯ ದಾಖಲೆಗಳು ಸೇರಿ 40ಕ್ಕೂ ಹೆಚ್ಚು ಸಾಕ್ಷಗಳನ್ನು ಆರೋಪಪಟ್ಟಿಯಲ್ಲಿ ಉಲ್ಲೇಖೀಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಹೆಚ್ಚುವರಿ ಆರೋಪಪಟ್ಟಿಯಲ್ಲಿ ಕೊಲೆ ನಡೆದ ಶೆಡ್‌ನಲ್ಲಿ ದರ್ಶನ್, ಆತನ ಪ್ರೇಯಸಿ ಪವಿತ್ರಾಗೌಡ ಹಾಗೂ ಇತರರು ಇದ್ದರು
ಎಂಬುದಕ್ಕೆ ಸಾಕ್ಷ್ಯ ಉಲ್ಲೇಖಿಸಿದ್ದಾರೆ. ಪ್ರತ್ಯಕ್ಷದರ್ಶಿ ಪುನೀತ್ ಮೊಬೈಲ್‌ನಲ್ಲಿ ಕೆಲ ಫೋಟೋಗಳನ್ನು ರಿಕವರಿ ಮಾಡಲಾಗಿದೆ.
ಈ ಫೋಟೋಗಳು ಘಟನಾ ಸ್ಥಳದಲ್ಲಿ ದರ್ಶನ್ ಸ್ಥಳದಲ್ಲಿ ಇದ್ದರು ಎಂಬುದು ಸಾಬೀತುಪಡಿಸಿದೆ.
ಇನ್ನು ಘಟನೆ ಬಳಿಕ ಪುನೀತ್ ಮೊಬೈಲ್‌ನಲ್ಲಿದ್ದ ಫೋಟೋಗಳನ್ನು ಡಿಲೀಟ್ ಮಾಡಿದ್ದ. ಆದರೆ, ಆತನ ಮೊಬೈಲ್ ವಶಕ್ಕೆ ಪಡೆದು ರಿಟ್ರೈವ್ ಮಾಡಿದಾಗ ಫೋಟೋಗಳು ಪತ್ತೆಯಾಗಿವೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಮತ್ತೊಂದೆಡೆ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಹೈಕೋರ್ಟ್ ನ.26ರಂದು ಮುಂದೂಡಿದೆ. ಈ ಮಧ್ಯೆ ಹೆಚ್ಚುವರಿ ಆರೋಪಪಟ್ಟಿ ಸಲ್ಲಿಸುವುದರಿಂದ, ಜಾಮೀನು ಅರ್ಜಿ ವಿಚಾರಣೆ ಇನ್ನಷ್ಟು ತಿಂಗಳು ಮುಂದೂಡುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ. ಹೀಗಾಗಿ ಇದು ದರ್ಶನ್‌ಗೆ ಮತ್ತೊಂದು ಸಂಕಷ್ಟ ತಂದೊಡ್ಡಿದೆ.
ದರ್ಶನ್‌ಗೆ ಜಾಮೀನು ನೀಡದಂತೆ ಸುಪ್ರೀಂಕೋರ್ಟ್ ಗರ ಮನವಿ ಮಾಡುವ ಪ್ರಕ್ರಿಯೆ ನಡೆಯುತ್ತಿದೆ. ದರ್ಶನ್ ಚಿಕಿತ್ಸೆ ಪಡೆಯುವ ಸಲುವಾಗಿ ಜಾಮೀನಿನ ಮೇಲಿದ್ದಾರೆ. ಮತ್ತೆ ಮುಂದುವರಿದು ಬೇಲ್ ಕೇಳುವ ವಿಚಾರ ನಮಗೆ ಗೊತ್ತಿಲ್ಲ. ಆದರೆ, ಮತ್ತೆ ಬೇಲ್ ನೀಡಬಾರದು ಎಂದು ಮನವಿ ಮಾಡುವ ಪ್ರಕ್ರಿಯೆ ನಡೆಯುತ್ತಿದೆ. ಹೆಚ್ಚುವರಿ ಚಾರ್ಜ್ ಶೀಟ್ ಸಲ್ಲಿಸಲು ಸಾಕ್ಷ್ಯಸಂಗ್ರಹಿಸಲಾಗುತ್ತಿದೆ.
●ಡಾ.ಜಿ.ಪರಮೇಶ್ವರ್, ಗೃಹ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
ಬೆಳಗಾವಿ-ಐಫೋನ್‌ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ
IPL: ಇನ್ನು ಮೂರು ಸೀಸನ್ ಐಪಿಎಲ್ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
MUST WATCH
ಹೊಸ ಸೇರ್ಪಡೆ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
ಬೆಳಗಾವಿ-ಐಫೋನ್‌ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ
IPL: ಇನ್ನು ಮೂರು ಸೀಸನ್ ಐಪಿಎಲ್ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.