ಜೈಪುರ: ಪೊಲೀಸ್ ಬಸ್ ನಿಂದ ಹಾರಿದ ಆರೋಪಿ ಸಾವು
Team Udayavani, Aug 27, 2022, 10:22 PM IST
ಜೈಪುರ: ಬಸ್ ನಲ್ಲಿ ನ್ಯಾಯಾಲಯಕ್ಕೆ ಕರೆದೊಯ್ಯುತ್ತಿದ್ದ ವೇಳೆ ಆರೋಪಿಯೊಬ್ಬ ತಪ್ಪಿಸಿಕೊಳ್ಳುವ ಉದ್ದೇಶದಿಂದ ವಾಹನದಿಂದ ಹಾರಿ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
ಪ್ರಮೋದ್ ಕುಮಾರ್ (38)ನನ್ನು ಪೊಲೀಸರು ಶುಕ್ರವಾರ ಬಂಧಿಸಿದ್ದರು. ಭಲೇರಿ ಪೊಲೀಸ್ ಠಾಣೆಯಿಂದ ಚುರುವಿನ ತಾರಾ ನಗರದ ನ್ಯಾಯಾಲಯಕ್ಕೆ ಬಸ್ನಲ್ಲಿ ಕರೆದೊಯ್ಯುತ್ತಿದ್ದರು. ಅವರು ಬುಚಾವಾಸ್ ಬಳಿ ಬಸ್ನ ಹಿಂದಿನ ಬಾಗಿಲಿನಿಂದ ನಿಂದ ಜಿಗಿದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ತಾರಾ ನಗರದ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ಆತ ಮೃತಪಟ್ಟಿದ್ದಾರೆ ಎಂದು ಘೋಷಿಸಲಾಯಿತು.
ಭಲೇರಿ ಪೊಲೀಸ್ ಠಾಣೆಯ ಎಸ್ಎಚ್ಒ ಕೇದಾರಮಲ್ ಮತ್ತು ಒಬ್ಬ ಕಾನ್ಸ್ಟೆಬಲ್ ಜೊತೆಗಿದ್ದರು. ವರದಕ್ಷಿಣೆ ಕಿರುಕುಳ, ಕ್ರಿಮಿನಲ್ ನಂಬಿಕೆ ದ್ರೋಹ, ಸ್ವಯಂ ಪ್ರೇರಿತವಾಗಿ ನೋವುಂಟು ಮಾಡಿದ ಮತ್ತು ವಂಚನೆಗಾಗಿ ಐಪಿಸಿ ಸೆಕ್ಷನ್ಗಳ ಅಡಿಯಲ್ಲಿ ಜುಲೈನಲ್ಲಿ ಭಲೇರಿ ಪೊಲೀಸ್ ಕುಮಾರ್ ನನ್ನು ಬಂಧಿಸಲಾಗಿತ್ತು.
ಸಂಜೆ, ಅವರ ಕುಟುಂಬ ಸದಸ್ಯರು ಮತ್ತು ಸಂಬಂಧಿಕರು ಆಸ್ಪತ್ರೆಯ ಹೊರಗೆ ಜಮಾಯಿಸಿ ಅವರ ಸಾವಿಗೆ ಪೊಲೀಸರೇ ಕಾರಣ ಎಂದು ಆರೋಪಿಸಿದರು.
ಸ್ಥಳೀಯ ಪೊಲೀಸ್ ಠಾಣೆಯ ಸಿಬ್ಬಂದಿಯನ್ನು ಅಮಾನತು ಮಾಡುವಂತೆ ಆಗ್ರಹಿಸಿ ಶವ ಸ್ವೀಕರಿಸಲು ನಿರಾಕರಿಸಿದ್ದಾರೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಶವಾಗಾರದಲ್ಲಿ ಇರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪರಿಸ್ಥಿತಿ ಅವಲೋಕಿಸಿ ಸ್ಥಳದಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳು ಕುಟುಂಬ ಸದಸ್ಯರೊಂದಿಗೆ ಮಾತುಕತೆ ನಡೆಸಿ ಸಮಾಧಾನಪಡಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
Mumbai; ಚುನಾವಣೆಗೆ ಏಕಾಂಗಿ ಸ್ಪರ್ಧೆ: ಉದ್ಧವ್ ಶಿವಸೇನೆ ಇಂಗಿತ!
Kota; ಮತ್ತೊಬ್ಬ ವಿದ್ಯಾರ್ಥಿ ಆತ್ಮಹ*ತ್ಯೆ: ವರ್ಷದ 17ನೇ ಕೇಸು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್ಗೆ ಬಿಬಿಎಂಪಿ ನೋಟಿಸ್
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.