![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Oct 27, 2023, 11:07 PM IST
ಶಿವಮೊಗ್ಗ: ರಾಜ್ಯದ ಎಲ್ಲ ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳಿಗೆ ಬಿಸಿಯೂಟ, ಹಾಲು, ಮೊಟ್ಟೆ ಜತೆಗೆ ನ.23ರಿಂದಲೇ ಅನ್ವಯಗೊಳ್ಳುವಂತೆ ಮತ್ತಷ್ಟು ಪೌಷ್ಟಿಕಾಂಶಯುಕ್ತ ಆಹಾರವನ್ನು ಒದಗಿಸಲು ಉದ್ದೇಶಿಸಲಾಗಿದೆ ಎಂದು ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಸ್ತುತ ಮಕ್ಕಳ ಪುಸ್ತಕ ಹೊರೆ ಯನ್ನು ಇಳಿಸಲು ಉದ್ದೇಶಿಸ ಲಾಗಿದ್ದು, ಈ ಸಂಬಂಧ ಶಿಕ್ಷಣ ತಜ್ಞರೊಂದಿಗೆ ಸಮಾಲೋಚನೆ ನಡೆಸ ಲಾಗಿದೆ. ಮುಂದಿನ ವರ್ಷದಿಂದಲೇ ಅನ್ವಯಗೊಳ್ಳುವಂತೆ ಈ ಕಾರ್ಯ ವನ್ನು ಅನುಷ್ಠಾನಗೊಳಿಸಲಾಗು ವುದು. ರಾಜ್ಯದ ಶಾಲೆಗಳ ನಿರ್ವಹಣೆಗೆ ಪ್ರತಿ ವರ್ಷ ನೀಡಲಾಗುತ್ತಿದ್ದ 10 ಸಾವಿರ ರೂ. ಅನುದಾನವನ್ನು 20 ಸಾವಿರಕ್ಕೆ ಹೆಚ್ಚಿಸಲಾಗಿದೆ. ಅದನ್ನು ಇನ್ನಷ್ಟು ಹೆಚ್ಚಿಸಲು ಉದ್ದೇಶಿಸಲಾಗಿದೆ. ಈ ಅನುದಾನವನ್ನು ಬಳಸಿ, ಶಾಲಾ ಸ್ವತ್ಛತೆ ಹಾಗೂ ಶೌಚಾಲಯಗಳ ನಿರ್ವಹಣೆಗೆ ಶಾಲಾ ಮುಖ್ಯ ಶಿಕ್ಷಕರು ಗಮನಹರಿಸಬೇಕು ಎಂದರು.
ಈಗಾಗಲೇ 13,000 ಶಿಕ್ಷಕರ ನೇಮಕಕ್ಕೆ ಕ್ರಮ ಕೈಗೊಳ್ಳಲಾಗಿದೆ. ಉಳಿದ 4,000 ಶಿಕ್ಷಕರ ನೇಮಕಾತಿ ಪ್ರಕ್ರಿಯೆಗೆ ಸಂಬಂಧಿ ಸಿ ಅ.30ರಂದು ನ್ಯಾಯಾಲಯದ ಆದೇಶದ ಬಳಿಕ ಕ್ರಮ ಕೈಗೊಳ್ಳಲಾಗುವುದು. ಶಿಕ್ಷಕರ ನೇಮಕಾತಿಯಲ್ಲಿ ಮೀಸಲಾತಿ ಅನುಸರಿಸುವ ನಿಟ್ಟಿನಲ್ಲಿ ಮುಂದಿನ ಸಾಲಿನಲ್ಲಿ 15,000 ಕಲಾ ಮತ್ತು ಸಂಗೀತ ಮತ್ತಿತರ ಶಿಕ್ಷಕರನ್ನು ನೇಮಿಸಿಕೊಳ್ಳಲು ಉದ್ದೇಶಿಸಲಾಗಿದೆ ಎಂದು ಹೇಳಿದರು.
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್.ಡಿ.ದೇವೇಗೌಡ
Congress Siddu Team: ಸಿದ್ದರಾಮಯ್ಯ ಆಪ್ತರಿಂದ ಈಗ ʼಮಾಸ್ ಲೀಡರ್ʼ ಅಸ್ತ್ರ
You seem to have an Ad Blocker on.
To continue reading, please turn it off or whitelist Udayavani.