ಸರ್ಕಾರಿ ಶಾಲೆ ದಾಖಲಾತಿಗೆ ಹರಸಾಹಸ!
ಬಿಡ್ನಾಳದಲ್ಲಿರುವ ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರವೇಶಕ್ಕೆ ಬಹುಬೇಡಿಕೆ
Team Udayavani, May 23, 2022, 10:59 AM IST
ಹುಬ್ಬಳ್ಳಿ: ಶಾಲೆ ಮುಂದೆ ದಾಖಲಾಗಿ ಪೂರ್ಣಗೊಂಡಿವೆ ಎನ್ನುವ ಫಲಕ, ಆದರೂ ಇದೇ ಶಾಲೆಗೆ ನಮ್ಮ ಮಕ್ಕಳು ಸೇರಬೇಕು ಎನ್ನುವುದು ಪಾಲಕರ ಒತ್ತಾಸೆ. ಕಳೆದ ಮೂರು ವರ್ಷಗಳಿಂದ ಈ ಶಾಲೆಯಲ್ಲಿ ದಾಖಲಾತಿ ಪಡೆಯಲು ಹರಸಾಹಸ ಪಡುವಂತಾಗಿದ್ದು, ಗುಣಮಟ್ಟದ ಶಿಕ್ಷಣ ಇನ್ನಿತರೆ ಸೌಲಭ್ಯಗಳು ಇರುವ ಕಾರಣ ನಿರೀಕ್ಷೆ ಮೀರಿ ದಾಖಲಾತಿ ಆಗುತ್ತಿದ್ದು, ಈಗಾಗಲೇ ದಾಖಲಾಗಿ ಪೂರ್ಣಗೊಂಡಿದೆ ಎನ್ನುವ ಫಲಕ ಹಾಕಲಾಗಿದೆ.
ಈ ಪರಿಯಾಗಿ ಬೇಡಿಕೆ ಸೃಷ್ಟಿಯಾಗಿರುವುದು ನಗರದ ಯಾವುದಾದರೂ ಪ್ರತಿಷ್ಠಿತ ಖಾಸಗಿ ಶಾಲೆಯಲ್ಲ. ಬದಲಿಗೆ ಸರಕಾರಿ ಶಾಲೆಗೆ. ಇಲ್ಲಿನ ಬಿಡ್ನಾಳದಲ್ಲಿರುವ ಕರ್ನಾಟಕ ಪಬ್ಲಿಕ್ ಸ್ಕೂಲ್ ಕಳೆದ ಮೂರು ವರ್ಷಗಳಿಂದ ಮಕ್ಕಳಿಗೆ ಕೊರತೆಯಿಲ್ಲದಂತೆ ದಾಖಲಾತಿಯಾಗುತ್ತಿದೆ. ಸಾಲದ್ದಕ್ಕೆ ಈಗಾಗಲೇ ಮಕ್ಕಳು ಹೆಚ್ಚಾಗಿದ್ದಾರೆ. ಇನ್ನಷ್ಟು ಹೆಚ್ಚಾದರೆ ಬೋಧನೆ, ಮಕ್ಕಳ ಬಗ್ಗೆ ಕಾಳಜಿ ವಹಿಸುವುದು ಕಷ್ಟವಾಗಲಿದೆ ಪ್ರಮುಖವಾಗಿ ಮಕ್ಕಳಿಗೆ ಕುಳಿತುಕೊಳ್ಳಲು ಕಷ್ಟವಾಗುತ್ತಿದೆ ಎನ್ನುವುದು ಇಲ್ಲಿನ ಶಿಕ್ಷಕರ ವಾದ. ಆದರೆ ಪಾಲಕರು ಮಾತ್ರ ತಮ್ಮ ಮಕ್ಕಳು ಇದೇ ಶಾಲೆಗೆ ಸೇರಿಸಬೇಕು ಎನ್ನುವ ಒತ್ತಡ ಹೇರುತ್ತಿದ್ದಾರೆ. ಈಗಾಗಲೇ ಶಾಲೆ ಮುಂದೆ ದಾಖಲಾಗಿ ಪೂರ್ಣಗೊಂಡಿದ ಎನ್ನುವ ಫಲಕ ಹಾಕಲಾಗಿದೆ.
ಎಲ್‌ಕೆಜಿ, ಯುಕೆಜಿ ಹಾಗೂ 1ನೇ ತರಗತಿ ಆಂಗ್ಲ ಮಾಧ್ಯಮಕ್ಕೆ ಹೆಚ್ಚಿನ ಪಾಲಕರು ಅರ್ಜಿ ಸಲ್ಲಿಸಿದ್ದಾರೆ. ಒಂದು ತರಗತಿಯಲ್ಲಿ 30 ವಿದ್ಯಾರ್ಥಿಗಳಿಗೆ ಅವಕಾಶವಿದೆ. ಎಲ್‌ಕೆಜಿಗೆ 30 ವಿದ್ಯಾರ್ಥಿಗಳಿಗೆ ಅವಕಾಶವಿದ್ದರೆ 65 ಅರ್ಜಿ ಬಂದಿವೆ, ಯುಕೆಜಿಗೆ 37 ವಿದ್ಯಾರ್ಥಿಗಳಿದ್ದು, ಇದೀಗ ಜೊತೆಯಲ್ಲಿ 62 ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ. 1ನೇ ತರಗತಿ ಆಂಗ್ಲ ಮಾಧ್ಯಮ ತರಗತಿಗೆ ಹೆಚ್ಚಿನ ಸಂಖ್ಯೆಯಲ್ಲಿ ಅರ್ಜಿಗಳು ಸಲ್ಲಿಕೆಯಾಗಿವೆ. ಇನ್ನೂ ಕನ್ನಡ ಮಾಧ್ಯಮ 1ನೇ ತರಗತಿಗೆ ಕಳೆದ ನಾಲ್ಕೈದು ದಿನಗಳಲ್ಲಿ 60 ವಿದ್ಯಾರ್ಥಿಗಳ ಪ್ರವೇಶಾತಿಯಾಗಿದೆ. ಇನ್ನು ಕೂಡಾ ಅರ್ಜಿಗಳು ಬರುತ್ತಿವೆ. ಆದರೆ ಅವಕಾಶ ಇಲ್ಲದಂತಾಗಿದೆ.
ಕಳೆದ ವರ್ಷಕ್ಕೆ ಹೋಲಿಸಿದರೆ ಪ್ರವೇಶಕ್ಕೆ ಬೇಡಿಕೆ ಹೆಚ್ಚಿದೆ. ಖಾಸಗಿ ಆಂಗ್ಲ-ಮಾಧ್ಯಮ ಶಾಲೆಗಳ ಅನೇಕ ವಿದ್ಯಾರ್ಥಿಗಳು ಈ ಶಾಲೆಗೆ ದಾಖಲಾತಿ ಬಯಸಿ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಜೊತೆಗೆ ಸುತ್ತಮುತ್ತಲಿನ ಪ್ರದೇಶದಲ್ಲಿ ಬಡವರೇ ಹೆಚ್ಚಾಗಿರುವುದರಿಂದ ಈ ಶಾಲೆಗೆ ಹೆಚ್ಚಿನ ಬೇಡಿಕೆ ಬಂದಿದೆ. ಈಗಾಗಲೇ ಪ್ರವೇಶಕ್ಕಾಗಿ ಲಾಟರಿ ಎತ್ತುವ ಮೂಲಕ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿದ್ದರೂ ಪಾಲಕರು ಮಾತ್ರ ಒಪ್ಪುತ್ತಿಲ್ಲ. ಎಸ್‌ಡಿಎಂಸಿ ಪದಾಧಿಕಾರಿಗಳು ಸೇರಿದಂತೆ ಶಾಲೆಯಿಂದ ಇಲಾಖೆಗೆ ಮಾಹಿತಿ ನೀಡಿ ಹೆಚ್ಚುವರಿ ತರಗತಿ ನೀಡುವಂತೆ ಮನವಿ ಸಲ್ಲಿಸಲಾಗಿದೆ. –ಮಂಜುನಾಥ ಜಂಗಲಿ, ಮುಖ್ಯಶಿಕ್ಷಕರು, ಕೆಪಿಎಸ್
ಶಾಲೆಯನ್ನು ಅತ್ಯಾಧುನಿಕವಾಗಿ ಅಭಿವೃದ್ಧಿಪಡಿಸಲಾಗಿದೆ. ನುರಿತ ಶಿಕ್ಷಕರ ತಂಡ ಹಾಗೂ ಉತ್ತಮ ಶಿಕ್ಷಣದಿಂದ ಖಾಸಗಿ ಶಾಲೆಗೆ ಪೈಪೋಟಿ ನೀಡುವಂತೆ ಸರಕಾರಿ ಶಾಲೆ ನನ್ನ ಕ್ಷೇತ್ರದಲ್ಲಿ ಬೆಳೆದು ನಿಂತಿರುವುದು ಹೆಮ್ಮೆ ಮೂಡಿಸಿದೆ. ಸ್ಥಳೀಯ ಹಿರಿಯರು ಹಾಗೂ ಯುವಕರ ಉತ್ತಮ ಸಹಕಾರದಿಂದ ಶಾಲೆ ಅಭಿವೃದ್ಧಿಗೆ ಒತ್ತು ನೀಡಲಾಗಿದೆ. ಹೆಚ್ಚುವರಿ ತರಗತಿ ನೀಡುವ ಕುರಿತು, ಮಕ್ಕಳ ದಾಖಲಾತಿಗೆ ಸರ್ಕಾರದ ಮಟ್ಟದಲ್ಲಿ ಸೂಕ್ತ ಕ್ರಮಕ್ಕೆ ಮುಂದಾಗುತ್ತೇನೆ. –ಪ್ರಸಾದ ಅಬ್ಬಯ್ಯ, ಶಾಸಕ
ಶಾಲೆ ಅಭಿವೃದ್ಧಿಗೆ ಶಾಸಕ ಪ್ರಸಾದ ಅಬ್ಬಯ್ಯ ಅವರ ನೆರವು ಬಹಳಷ್ಟಿದೆ. ಸುತ್ತಮುತ್ತಲಿನ ಎಲ್ಲ ಶಾಲೆಗಳಿಗಿಂತ ಬಿಡನಾಳ ಕರ್ನಾಟಕ ಪಬ್ಲಿಕ್ ಶಾಲೆಗೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ಶಾಲೆಯ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿದ್ದಾರೆ. ಶಾಲೆಗೆ ಸ್ಮಾರ್ಟ್ ಕ್ಲಾಸ್, ಹೆಚ್ಚುವರಿ ಕೊಠಡಿ ಸೇರಿದಂತೆ ಎಲ್ಲ ಸೌಲಭ್ಯ ಕಲ್ಪಿಸಿಕೊಟ್ಟಿದ್ದರ ಹಿನ್ನೆಲೆಯಲ್ಲಿ ಸರಕಾರಿ ಶಾಲೆ ಈ ಮಟ್ಟಕ್ಕೆ ಬೆಳೆದು ನಿಲ್ಲಲು ಕಾರಣವಾಗಿದೆ. –ಮೋಹನ ಅಸುಂಡಿ, ಪಾಲಿಕೆ ಮಾಜಿ ಸದಸ್ಯ
ಶಿಕ್ಷಣದ ಗುಣಮಟ್ಟವೇ ಕಾರಣ: ಯಾವುದೇ ಖಾಸಗಿ ಶಾಲೆಗೆ ಕಡಿಮೆ ಇಲ್ಲ ಎನ್ನುವಂತೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಬಿಡನಾಳದಲ್ಲಿ ತಲೆ ಎತ್ತಿ ನಿಂತಿದೆ. ಇಲ್ಲಿನ ಎಲ್‌ಕೆಜಿ, ಯುಕೆಜಿ ಹಾಗೂ ಹಿರಿಯ ಪ್ರಾಥಮಿಕ ಶಿಕ್ಷಣ ದೊರೆಯುತ್ತಿದೆ. ಉತ್ತಮ ಶಿಕ್ಷಕರ ಬೋಧನಾ ಗುಣಮಟ್ಟ, ಎಲ್ಲಾ ವಿಷಯಗಳಿಗೆ ಶಿಕ್ಷಕರು, 5 ಸ್ಮಾರ್ಟ್ ಕ್ಲಾಸ್‌ಗಳು, ಕ್ರೀಡಾ ಮೈದಾನ, ಶಿಸ್ತಿಗೆ ಮೊದಲ ಆದ್ಯತೆ, ಶಿಸ್ತು ಉಲ್ಲಂಘಿಸಿದರೆ ಪಾಲಕರಿಗೆ ಮಾಹಿತಿ ನೀಡಿ ಕ್ರಮ ಸೇರಿದಂತೆ ಹಲವು ವಿಶೇಷತೆಗಳನ್ನು ಹೊಂದಿದೆ. ಇವೆಲ್ಲವನ್ನೂ ಸಮರ್ಪಕವಾಗಿ ನಿರ್ವಹಿಸುವ ಎಸ್‌ಡಿಎಂಸಿ ತಂಡವಿದೆ.
ಲಾಟರಿಗೆ ಒಪ್ಪದ ಪಾಲಕರು: ಎಲ್‌ಕೆಜಿ, ಯುಕೆಜಿ ಹಾಗೂ 1ನೇ ತರಗತಿ ಆಂಗ್ಲ ಮಾಧ್ಯಮಕ್ಕೆ 30 ವಿದ್ಯಾರ್ಥಿಗಳನ್ನು ತೆಗೆದುಕೊಳ್ಳಬೇಕು. ಆದರೆ ಹೆಚ್ಚಿನ ಅರ್ಜಿಗಳು ಬಂದ ಹಿನ್ನೆಲೆಯಲ್ಲಿ ಲಾಟರಿ ಎತ್ತುವ ಮೂಲಕ 30 ವಿದ್ಯಾರ್ಥಿಗಳಿಗೆ ಅವಕಾಶವನ್ನು ಶನಿವಾರ ನೀಡಲಾಗಿದೆ. ಆದರೆ ಇದಕ್ಕೆ ಒಪ್ಪದ ಪಾಲಕರು ನಮಗೂ ಇದೇ ಶಾಲೆಯಲ್ಲಿಯೇ ದಾಖಲಾತಿ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಇದಕ್ಕೆ ಎಸ್‌ಡಿಎಂಸಿಯವರು ಸಕಾರಾತ್ಮಕವಾಗಿ ಸ್ಪಂದನೆ ನೀಡಿದ್ದಾರೆ. ಶಿಕ್ಷಣ ಇಲಾಖೆಯೊಂದಿಗೆ ಚರ್ಚಿಸಿ ಹೆಚ್ಚುವರಿ ಕೊಠಡಿ, ಶಿಕ್ಷಕರ ನೀಡುವಂತೆ ಮನವಿ ಮಾಡಿದ್ದಾರೆ.
ಸಾವಿರ ದಾಟಿದ ಸಂಖ್ಯೆ: ಕಳೆದ ಶೈಕ್ಷಣಿಕ ವರ್ಷದಲ್ಲಿ ಪೂರ್ವ ಪ್ರಾಥಮಿಕದಿಂದ ಹಿಡಿದು 7ನೇ ತರಗತಿವರೆಗೆ 847 ವಿದ್ಯಾರ್ಥಿಗಳು ಅಭ್ಯಾಸ ಮಾಡುತ್ತಿದ್ದರು. ಈ ವರ್ಷ ಶಾಲೆಯಲ್ಲಿ ವಿದ್ಯಾರ್ಥಿಗಳ ಸಂಖ್ಯೆ 1 ಸಾವಿರ ದಾಟಿದೆ. ಸರಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗುತ್ತಿದೆ ಎನ್ನುವುದಕ್ಕೆ ಈ ಶಾಲೆ ಅಪವಾದದಂತಿದ್ದು, ಉತ್ತಮ ಶಿಕ್ಷಣ, ಶಿಕ್ಷಕರ ಕಾಳಜಿಯಿದ್ದರೆ ಸರಕಾರಿ ಶಾಲೆ ಕೂಡ ಖಾಸಗಿ ಶಾಲೆಗೆ ಕಡಿಮೆಯಿಲ್ಲದಂತೆ ಮಕ್ಕಳ ಸಂಖ್ಯೆ ವೃದ್ಧಿಸುವುದರಲ್ಲಿ ಎರಡು ಮಾತಿಲ್ಲ.
–ಬಸವರಾಜ ಹೂಗಾರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
Hubli: ದಿವಾಳಿಯಾದ ಸರ್ಕಾರ ಬಿಪಿಎಲ್ ಕಾರ್ಡ್ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ
MUST WATCH
ಹೊಸ ಸೇರ್ಪಡೆ
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.