ಫಲಿತಾಂಶ ಬಳಿಕ ಕಾಂಗ್ರೆಸ್3 ಭಾಗ: ಕಾರಜೋಳ
Team Udayavani, May 3, 2019, 6:02 AM IST
ವಿಜಯಪುರ: ಸಮರ್ಥ ನಾಯಕತ್ವದ ಕೊರತೆ ಎದುರಿಸುತ್ತಿರುವ ಕಾಂಗ್ರೆಸ್ ಪಕ್ಷ ಲೋಕಸಭೆ ಫಲಿತಾಂಶದ ನಂತರ ಮೂರು ಭಾಗವಾಗಲಿದೆ. ಕೆಲವರು ಬಿಜೆಪಿ ಸೇರಿದರೆ ಮತ್ತೆ ಕೆಲವರು ಬೇರೆಡೆ ಹೋಗುತ್ತಾರೆ. ಕೆಲವರು ಮಾತ್ರ ಕಾಂಗ್ರೆಸ್ ಪಕ್ಷದಲ್ಲಿ ಉಳಿಯುತ್ತಾರೆ. ಇನ್ನು ಫಲಿತಾಂಶಕ್ಕೆ ಮುನ್ನವೇ ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಪತನವಾಗಲಿದೆ ಎಂದು ವಿಧಾನಸಭೆ ವಿಪಕ್ಷದ ಉಪ ನಾಯಕ ಗೋವಿಂದ ಕಾರಜೋಳ ಭವಿಷ್ಯ ನುಡಿದಿದ್ದಾರೆ.
ಗುರುವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ರಾಹುಲ್ ಗಾಂಧಿಗೆ ದೇಶದ ಸಾಮಾನ್ಯ ಜನರ ಸಮಸ್ಯೆಗಳ ಅರಿವಿಲ್ಲ. ಬಡತನ ಏನು ಎಂಬುದು ಗೊತ್ತಿಲ್ಲ. ನಾಯಕತ್ವದ ಕೊರತೆಯಿಂದಾಗಿ ರಾಹುಲ್ ಗಾಂಧಿ ಭ್ರಮೆಯಲ್ಲಿದ್ದಾರೆ. ರಾಜ್ಯದ ಸಮ್ಮಿಶ್ರ ಸರ್ಕಾರ ಲೋಕಸಭೆ ಚುನಾವಣೆ ಫಲಿತಾಂಶಕ್ಕೆ ಮೊದಲೇ ಪತನಗೊಳ್ಳುವ ಸ್ಥಿತಿ ಇರುವಾಗ ‘ಆಪರೇಶನ್’ ಮಾಡುವ ಅಗತ್ಯವಿಲ್ಲ. ಮೈತ್ರಿ ಸರ್ಕಾರದಲ್ಲಿ ಭ್ರಷ್ಟಾಚಾರ ತಾರಕಕ್ಕೇರಿದ್ದು, ಸರ್ಕಾರ ರಾಜ್ಯದ ಬೊಕ್ಕಸ ಲೂಟಿ ಹೊಡೆಯುತ್ತಿದೆ. ಸಿಎಂ ಅಧಿಕಾರ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಮಿತ್ರ ಪಕ್ಷಗಳಲ್ಲಿ ಪರಸ್ಪರ ಅಪನಂಬಿಕೆಗಳು ಹೆಚ್ಚಿದ್ದು, ಒಬ್ಬರಿಗೊಬ್ಬರು ಬೆನ್ನಿಗೆ ಚೂರಿ ಹಾಕುವ ಕೆಲಸದಲ್ಲಿ ಮಗ್ನರಾಗಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ
Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ
Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ
Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.