ರಾಯಚೂರಿನಲ್ಲಿ ಮತ್ತೆ ತ್ರಿಕೋನ ಸ್ಪರ್ಧೆ

ವಿಧಾನ ಕದನ ಮೊದಲ ಸುತ್ತು: ರಾಯಚೂರು

Team Udayavani, May 6, 2022, 10:57 AM IST

8

ರಾಯಚೂರು: ವಿಧಾನಸಭೆ ಚುನಾವಣೆಗೆ ಇನ್ನೂ 10 ತಿಂಗಳು ಬಾಕಿ ಇರುವಾಗಲೇ ರಾಜಕೀಯ ಲೆಕ್ಕಾಚಾರ ಶುರುವಾಗಿದೆ. ಈ ಬಾರಿ ಹೊಸ ಮುಖಗಳ ಪ್ರವೇಶಕ್ಕೆ ವೇದಿಕೆ ಸಿದ್ಧಗೊಳ್ಳುತ್ತಿದ್ದು, ಬಹುತೇಕ ಕ್ಷೇತ್ರಗಳಲ್ಲಿ ತ್ರಿಕೋನ ಸ್ಪರ್ಧೆ ಏರ್ಪಡುವುದು ನಿಚ್ಚಳವಾಗಿದೆ.

ಏಳು ವಿಧಾನಸಭೆ ಕ್ಷೇತ್ರಗಳನ್ನು ಒಳಗೊಂಡ ರಾಯಚೂರು ಜಿಲ್ಲೆಯಲ್ಲಿ ಈಗ ಕಾಂಗ್ರೆಸ್‌ ಮೂರು, ಜೆಡಿಎಸ್‌, ಬಿಜೆಪಿ ತಲಾ ಎರಡು ಕ್ಷೇತ್ರಗಳಲ್ಲಿ ಅಧಿಕಾರದಲ್ಲಿವೆ. ಎಲ್ಲ ಕ್ಷೇತ್ರ ಗಳಲ್ಲಿ ಹಾಲಿ ಶಾಸಕರು ಮತ್ತೂಮ್ಮೆ ಗೆಲ್ಲಲು ತಂತ್ರಗಾರಿಕೆ ಶುರು ಮಾಡಿದರೆ, ಪರಾಜಿತ ಅಭ್ಯರ್ಥಿಗಳು ಕೂಡ ಪ್ರಚಾರ ಶುರು ಮಾಡಿ ಕೊಂಡಿದ್ದಾರೆ. ಇದರ ಮಧ್ಯೆ ಕೆಲ ಕ್ಷೇತ್ರಗಳಲ್ಲಿ ಹೊಸ ಮುಖಗಳ ಪ್ರವೇಶವಾ ಗುತ್ತಿದ್ದು, ಕಣ ರಂಗೇರಿಸುವ ಹುಮ್ಮಸ್ಸಿನಲ್ಲಿದ್ದಾರೆ.

ನಗರ ಕ್ಷೇತ್ರದ ಟಿಕೆಟ್‌ಗೆ ಡಿಮ್ಯಾಂಡ್‌: ಸಾಮಾನ್ಯ ವರ್ಗಕ್ಕೆ ಮೀಸಲಾದ ಈ ಕ್ಷೇತ್ರ ದಲ್ಲೀಗ ಟಿಕೆಟ್‌ಗೆ ಭಾರೀ ಪೈಪೋಟಿ ಏರ್ಪ ಟ್ಟಿದೆ. ಹಾಲಿ ಶಾಸಕ ಡಾ| ಶಿವರಾಜ್‌ ಪಾಟೀಲ್‌ ಒಮ್ಮೆ ಜೆಡಿಎಸ್‌, ಮತ್ತೂಮ್ಮೆ ಬಿಜೆಪಿ ಯಿಂದ ಗೆಲುವು ಸಾಧಿ ಸಿದ್ದು, ಈ ಬಾರಿ ಬಿಜೆಪಿಯಿಂದಲೇ ಹ್ಯಾಟ್ರಿಕ್‌ ಗೆಲುವಿಗಾಗಿ ಹವಣಿಸುತ್ತಿದ್ದಾರೆ. ಕಾಂಗ್ರೆಸ್‌ನ ಮಾಜಿ ಶಾಸಕ ಎನ್‌.ಎಸ್‌.ಬೋಸ ರಾಜ್‌ ಅಥವಾ ಅವರ ಪುತ್ರ ರವಿ ಬೋಸರಾಜ್‌ ಸ್ಪರ್ಧೆ ಅಣಿಯಾಗುತ್ತಿದ್ದು, ಪೈ ಪೋಟಿ ಖಚಿತ. ಜೆಡಿಎಸ್‌ ಟಿಕೆಟ್‌ಗೆ ಭಾರೀ ಬೇಡಿಕೆ ಬಂದಿದೆ. ಗುತ್ತಿಗೆದಾರರ ಮುಜಿಬುದ್ದೀನ್‌, ಮುಖಂಡ ರಾಮನ ಗೌಡ ಏಗನೂರು, ನಗರಸಭೆ ಮಾಜಿ ಅಧ್ಯಕ್ಷ ವಿನಯ ಕುಮಾರ್‌, ಡಿಕೆಶಿ ಆಪ್ತ ಎನ್ನಲಾಗುತ್ತಿರುವ ಬೊಮ್ಮ ನ ಹಳ್ಳಿ ಬಾಬು ಹೀಗೆ ಅನೇಕರ ಹೆಸರು ಕೇಳಿ ಬಂದಿದೆ.

ರಾಯಚೂರು ಗ್ರಾಮೀಣ: ಈ ಕ್ಷೇತ್ರದಲ್ಲಿ ಒಮ್ಮೆ ಗೆದ್ದ ವರು ಮತ್ತೂಮ್ಮೆ ಗೆಲುವು ಕಂಡ ಉದಾಹರಣೆ ಇಲ್ಲ. ಹೀಗಾಗಿ ಈ ಕ್ಷೇತ್ರದಲ್ಲಿ ಪ್ರತಿ ಬಾರಿ ಹೊಸಬರ ಪ್ರವೇಶವಾಗು ತ್ತಿದೆ. ಈ ನಿಟ್ಟಿನಲ್ಲಿ ಹಾಲಿ ಶಾಸಕ ಕಾಂಗ್ರೆಸ್‌ನ ದದ್ದಲ್‌ ಬಸನ ಗೌಡ ಕ್ಷೇತ್ರ ಸಂಚಾರ ಶುರು ಮಾಡಿದ್ದಾರೆ. ಪರಾಜಿತ ಅಭ್ಯರ್ಥಿ ಬಿಜೆಪಿಯ ತಿಪ್ಪರಾಜ್‌ ಹವಾಲ್ದಾರ್‌ ಕೂಡ ಮತ್ತೆ ಅದೇ ಪಕ್ಷದಿಂದ ಕಣಕ್ಕಿಳಿಯುವ ಸಾಧ್ಯತೆಗಳಿವೆ. ಜೆಡಿಎಸ್‌ ಕಳೆದ ಬಾರಿ ಉತ್ತಮ ಮತ ಪಡೆದಿತ್ತಾದರೂ ಸೂಕ್ತ ಅಭ್ಯರ್ಥಿ ಸಿಕ್ಕಲ್ಲಿ ಜೆಡಿಎಸ್‌ಗೂ ಅವಕಾಶ ಇಲ್ಲ ಎನ್ನಲಾಗುವುದಿಲ್ಲ.

ದೇವದುರ್ಗದಲ್ಲಿ ಬದಲಾವಣೆ ಪರ್ವ: ಹಾಲಿ ಶಾಸಕ ಕೆ. ಶಿವನಗೌಡ ನಾಯಕ ಕಾಂಗ್ರೆಸ್‌ಗೆ ಹೋಗುತ್ತಾರೆ ಎಂಬ ಗಾಳಿಮಾತು ಹರಿದಾಡುತ್ತಿವೆ. ಮಾಜಿ ಸಂಸದ ಬಿ.ವಿ. ನಾಯಕ ಸ್ಪರ್ಧೆ ಮಾಡಿದರೆ ಪ್ರಬಲ ಪೈಪೋಟಿ ಖಚಿತ. ಇದರ ಜತೆಗೆ ಕಳೆದ ಬಾರಿ ಪಕ್ಷೇತರ ಅಭ್ಯರ್ಥಿಯಾಗಿದ್ದ ಕರೆಮ್ಮ 23 ಸಾವಿರ ಮತ ಪಡೆದ ಗಮನ ಸೆಳೆದಿದ್ದರು. ಈ ಬಾರಿ ಅವರಿಗೆ ಜೆಡಿಎಸ್‌ ಟಿಕೆಟ್‌ ಖಚಿತಗೊಂಡಿದ್ದು, ಇಲ್ಲೂ ತ್ರಿಕೋನ ಸ್ಪರ್ಧೆ ನಿಕ್ಕಿ.

ಕೇಂದ್ರ ಬಿಂದು ಮಸ್ಕಿ: ಮಸ್ಕಿ ಕ್ಷೇತ್ರದ ಉಪ ಚುನಾವಣೆ ಇಡೀ ದೇಶದ ಗಮನ ಸೆಳೆದಿತ್ತು. ಈಗ ಕಾಂಗ್ರೆಸ್‌ ಆಡಳಿತವಿದ್ದು, ಮುಂದಿನ ಚುನಾವಣೆ ಯಲ್ಲೂ ಇದೇ ಗಾಳಿ ಮುಂದುವರಿಯಬಹುದು. ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ್‌ ವಿರೋ ಧಿ ಅಲೆ ಬಿಜೆಪಿಯನ್ನು ನೆಲಕಚ್ಚುವಂತೆ ಮಾಡಿದೆ. ದೊಡ್ಡ ಅಂತರದಲ್ಲಿ ಬಸನಗೌಡ ತುರ್ವಿ ಹಾಳ ಗೆಲುವು ಸಾ ಧಿಸಿದರೂ ಸರ್ಕಾರ ಆಡಳಿತದಲ್ಲಿ ಇಲ್ಲದ್ದಕ್ಕೆ ಕೆಲಸಗಳಾಗಿಲ್ಲ. ಮತದಾರ ಮತ್ತೂಮ್ಮೆ ಕಾಂಗ್ರೆಸ್‌ಗೆ ಒಲವು ತೋರಿದರೂ ಅಚ್ಚರಿ ಇಲ್ಲ. ಸಿಂಧನೂರಲ್ಲಿ ಕೈ-ದಳ ಕಸರತ್ತು: ಸಾಮಾನ್ಯ ವರ್ಗಕ್ಕೆ ಮೀಸಲಾದ ಸಿಂಧನೂರು ಕ್ಷೇತ್ರದಲ್ಲಿ ಕಾಂಗ್ರೆಸ್‌-ಜೆಡಿಎಸ್‌ ನಡುವೆ ನೇರ ಹಣಾಹಣಿ ಯಿದ್ದು, ಇಲ್ಲಿ ಬಿಜೆಪಿಗೆ ನೆಲೆ ಇಲ್ಲ. ಇಲ್ಲಿಯೂ ಒಮ್ಮೆ ಕಾಂಗ್ರೆಸ್‌, ಮತ್ತೂಮ್ಮೆ ಜೆಡಿಎಸ್‌ ಗೆಲ್ಲುತ್ತಿವೆ. ಕಾಂಗ್ರೆಸ್‌ ಯುವ ಮುಖಂಡ ಬಸನಗೌಡ ಬಾದರ್ಲಿ ಸ್ಪರ್ಧೆ ಇಂಗಿತ ವ್ಯಕ್ತಪಡಿಸಿದ್ದು, ಮಾಜಿ ಶಾಸಕ ಹಂಪನಗೌಡ ಬಾದರ್ಲಿಗೆ ಸಂಕಷ್ಟ ಏರ್ಪಟ್ಟಿದೆ. ಹಾಲಿ ಶಾಸಕ ವೆಂಕಟರಾವ್‌ ನಾಡಗೌಡ ಜೆಡಿಎಸ್‌ನಲ್ಲೇ ಭದ್ರವಾಗಿದ್ದಾರೆ.

ಮಾನ್ವಿಯಲ್ಲಿ ಜೆಡಿಎಸ್‌ ಬಲ: ಕಾಂಗ್ರೆಸ್‌ ಭದ್ರಕೋಟೆಯನ್ನು ಬೇಧಿಸುವಲ್ಲಿ ಜೆಡಿಎಸ್‌ ಯಶಸ್ವಿಯಾಗಿತ್ತು. ಬಿಜೆಪಿ ಉತ್ತಮ ಪೈಪೋಟಿ ನೀಡಿತ್ತಾದರೂ ಇನ್ನೂ ಹೆಚ್ಚು ಶ್ರಮಿಸಬೇಕಿದೆ. ಹಾಲಿ ಜೆಡಿಎಸ್‌ ಶಾಸಕ ರಾಜಾ ವೆಂಕಟಪ್ಪ ನಾಯಕ ಮತ್ತೂಮ್ಮೆ ಗೆಲ್ಲುವ ಹುಮ್ಮಸ್ಸಿನಲ್ಲಿದ್ದಾರೆ. ಕಾಂಗ್ರೆಸ್‌ ಗೆ ಪ್ರಬಲ ಅಭ್ಯರ್ಥಿ ಸಿಕ್ಕರೆ ಮಾತ್ರ ಈ ಬಾರಿ ಜೆಡಿಎಸ್‌ ಮಣಿಸಲು ಸಾಧ್ಯ. ಪರಿಶಿಷ್ಟ ಪಂಗಡಕ್ಕೆ ಮೀಸಲಾದ ಈ ಕ್ಷೇತ್ರದ ಮೇಲೆ ಕೆಲ ಶಾಸಕರು ಕಣ್ಣಿಟ್ಟಿದ್ದು, ಈ ಕ್ಷೇತ್ರಕ್ಕೆ ವಲಸೆ ಹೋಗುವ ಲೆಕ್ಕಾಚಾರದಲ್ಲಿದ್ದಾರೆ.

ಲಿಂಗಸುಗೂರಲ್ಲಿ ಪೈಪೋಟಿ ಜೋರು: ಪ.ಜಾತಿಗೆ ಮೀಸಲಾದ ಏಕೈಕ ಕ್ಷೇತ್ರ ಲಿಂಗಸುಗೂರು. ಕಾಂಗ್ರೆಸ್‌ನ ಹಾಲಿ ಶಾಸಕ ಡಿ.ಎಸ್‌.ಹೂಲಗೇರಿ ಮತ್ತೂಮ್ಮೆ ಸ್ಪರ್ಧೆಗೆ ಅಣಿಯಾಗುತ್ತಿದ್ದರೆ, ಕೂದಲೆಳೆ ಅಂತರದಲ್ಲಿ ಸೋಲುಂಡ ಜೆಡಿಎಸ್‌ನ ಸಿದ್ದು ಬಂಡಿ, ಬಿಜೆಪಿಯ ಮಾನಪ್ಪ ವಜ್ಜಲ್‌ ಕೂಡ ಮರು ಸ್ಪರ್ಧೆಗೆ ಸಿದ್ಧಗೊಳ್ಳುತ್ತಿದ್ದಾರೆ. ಹೊಸ ಮುಖಗಳ ಪ್ರವೇಶ ಸಾಧ್ಯತೆ ಕಡಿಮೆ ಇದೆಯಾದರೂ ಈಗಿರುವ ಮೂವರು ಆಕಾಂಕ್ಷಿಗಳಲ್ಲಿ ಪೈಪೋಟಿ ಜೋರಾಗಿದೆ.

 ●ಸಿದ್ಧಯ್ಯಸ್ವಾಮಿ ಕುಕನೂರು

ಟಾಪ್ ನ್ಯೂಸ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

ncp

NCP Vs NCP: ಶರದ್‌ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್‌ ಬಣ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-raichur

Raichur: ರಾತೋ ರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ

1-wewqewq

Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

ಮಂತ್ರಾಲಯ ಶ್ರೀಗಳಿಂದ ತುಂಗಭದ್ರ ನದಿಯಲ್ಲಿ ದಂಡೋದಕ ಸ್ನಾನ

Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ

5-raichur

Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

drowned

Honnavar;ಸಮುದ್ರದಲ್ಲಿ ಮುಳುಗುತ್ತಿದ್ದ ಮೂವರು ಯುವತಿಯರ ರಕ್ಷಣೆ

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

ncp

NCP Vs NCP: ಶರದ್‌ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್‌ ಬಣ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.