ಬೆಂಬಲ ಬೆಲೆಯಲ್ಲಿ 20 ಕ್ವಿಂಟಾಲ್ ರಾಗಿ ಖರೀದಿಗೆ ಒಪ್ಪಿಗೆ
Team Udayavani, Feb 15, 2023, 6:03 AM IST
ವಿಧಾನಸಭೆ:ರೈತರಿಂದ ಬೆಂಬಲ ಬೆಲೆಯಲ್ಲಿ ರಾಗಿ ಖರೀದಿಗೆ ಇರುವ ಮಿತಿಯನ್ನು ಹೆಚ್ಚಿಸಿರುವ ರಾಜ್ಯ ಸರ್ಕಾರ ಪ್ರತಿ ಎಕರೆಗೆ 10 ಕ್ವಿಂಟಾಲ್‌ನಂತೆ ಗರಿಷ್ಠ 20 ಕ್ವಿಂಟಾಲ್ ಖರೀದಿಸಲಿದೆ.
ಶೂನ್ಯವೇಳೆಯಲ್ಲಿ ಶಾಸಕ ಕೆ.ಮಹದೇವು ಅವರ ಪ್ರಸ್ತಾಪಕ್ಕೆ ಉತ್ತರಿಸಿದ ಕಂದಾಯ ಸಚಿವ ಆರ್.ಅಶೋಕ, 2022-23ನೇ ಸಾಲಿನಲ್ಲಿ ಮುಂಗಾರು ಋತುವಿನಲ್ಲಿ ಕನಿಷ್ಠ ಬೆಂಬಲ ಯೋಜನೆಯಡಿ ರಾಜ್ಯದ ರೈತರಿಂದ 5 ಲಕ್ಷ ಮೆಟ್ರಿಕ್ ಟನ್ ರಾಗಿಯನ್ನು ಖರೀದಿಸಲು ಕೇಂದ್ರ ಸರ್ಕಾರ ಅನುಮತಿ ನೀಡಿತ್ತು. ರಾಜ್ಯದಲ್ಲಿ ಸಣ್ಣ ಮತ್ತು ಅತೀ ಸಣ್ಣ ರೈತರಿಂದ ಪ್ರತಿ ಎಕರೆಗೆ 10 ಕ್ವಿಂಟಾಲ… ನಂತೆ ಗರಿಷ್ಠ 20 ಕ್ವಿಂಟಾಲ್ ರಾಗಿಯನ್ನು ಖರೀದಿಸಲಾಗುತ್ತಿದೆ ಎಂದು ಹೇಳಿದರು.
ಇದುವರೆಗೆ 4.85 ಲಕ್ಷ ಮೆಟ್ರಿಕ್ ಟನ್ ರಾಗಿಯನ್ನು ಮಾರಾಟ ಮಾಡಲು 3,24,476 ರೈತರು ನೋಂದಣಿ ಮಾಡಿಕೊಂಡಿದ್ದಾರೆ. ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಖರೀದಿಸಲಾಗಿರುವ ಸಂಪೂರ್ಣ ರಾಗಿಯನ್ನು ಸಾರ್ವಜನಿಕ ವಿತರಣಾ ಪದ್ಧªತಿಯಲ್ಲಿ ರಾಜ್ಯದಲ್ಲಿನ ಪಡಿತರ ಫಲಾನುಭವಿಗಳಿಗೆ ವಿತರಿಸಲಾಗುತ್ತದೆ. ರಾಗಿ ಪ್ರಮುಖ ಆಹಾರವಾಗಿದ್ದು, ಜಿÇÉೆಗಳ ಪಡಿತರ ಫಲಾನುಭವಿಗಳಿಗೆ 10 ತಿಂಗಳ ಅವಧಿಯಲ್ಲಿ 5 ಲಕ್ಷ ಮೆಟ್ರಿಕ್ ಟನ್ ರಾಗಿಯನ್ನು ವಿತರಿಸಲಾಗುತ್ತದೆ ಎಂದು ವಿವರಿಸಿದರು.
ಮಾರುಕಟ್ಟೆಯಲ್ಲಿ ಪ್ರತಿ ಟನ್ ರಾಗಿಗೆ 1800 ರೂ.ಬೆಲೆ ಇದೆ. ಬೆಂಬಲ ಬೆಲೆಯಲ್ಲಿ 3075 ರೂ.ನಂತೆ ಖರೀದಿ ಮಾಡಲಾಗುತ್ತದೆ. ಆದರೆ ಐದು ಎಕರೆ ಮೇಲ್ಪಟ್ಟು ಭೂಮಿಯನ್ನು ಹೊಂದಿರುವ ರೈತರಿಂದಲೂ ಖರೀದಿ ಮಾಡಬೇಕೆಂಬ ಆಗ್ರಹಕ್ಕೆ ಸರ್ಕಾರ ಮಣಿದಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
MUST WATCH
ಹೊಸ ಸೇರ್ಪಡೆ
MUDA Scam: ಕೇಸ್ ವಾಪಸ್ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು
Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?
Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ
Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ
ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.