17 ರಿಂದ ನಾಲ್ಕು ದಿನಗಳ ಕೃಷಿ ಹಬ್ಬ; 10 ಲಕ್ಷ ಜನ ಭಾಗಿಯಾಗುವ ನಿರೀಕ್ಷೆ

2 ವರ್ಷಗಳ ಬಳಿಕ ರೈತರ ಮೇಳ ; ಬೀಜ ಮೇಳ ಮೂಲಕ ಚಾಲನೆ

Team Udayavani, Sep 15, 2022, 12:57 PM IST

8

ಧಾರವಾಡ: ಕೊರೊನಾ ಮಹಾಮಾರಿಯಿಂದಾಗಿ ಕಳೆದೆರಡು ವರ್ಷಗಳಿಂದ ಕೈ ಬಿಟ್ಟಿದ್ದ ಪ್ರತಿಷ್ಠಿತ ಧಾರವಾಡ ಕೃಷಿ ವಿವಿ ನಡೆಸುವ ಧಾರವಾಡ ಕೃಷಿ ಮೇಳವನ್ನು ಸೆ.17ರಿಂದ ಸೆ.20ರವರೆಗೆ ನಡೆಸಲು ಕೃಷಿ ವಿಶ್ವವಿದ್ಯಾಲಯ ತೀರ್ಮಾನಿಸಿದೆ.

ನಾಲ್ಕು ದಿನಗಳವರೆಗೆ ನಡೆಯುವ ಈ ವರ್ಷದ ಕೃಷಿ ಮೇಳವನ್ನು “ರೈತರ ಆದಾಯ ದ್ವಿಗುಣಗೊಳಿಸಲು ಕೃಷಿ ತಾಂತ್ರಿಕತೆಗಳು’ ಎಂಬ ಶೀರ್ಷಿಕೆಯಡಿಯಲ್ಲಿ ಆಯೋಜಿಸಲಾಗಿದ್ದು, ಶನಿವಾರವೇ ಬೀಜ ಮೇಳದ ಮೂಲಕ ರೈತರ ಹಬ್ಬಕ್ಕೆ ಚಾಲನೆ ದೊರೆಯಲಿದೆ. ಕಳೆದ 2-3 ವರ್ಷಗಳಿಂದ ನೆರೆ ಹಾವಳಿ, ಕೋವಿಡ್‌-19 ಹೊಡೆತದಿಂದ ಮುಂದೂಡುತ್ತ ರದ್ದಾಗಿದ್ದ ಕೃಷಿ ಮೇಳವು ಈ ಸಲ ರಂಗೇರಿದ್ದು, ಮೇಳಕ್ಕಾಗಿ ಈಗಾಗಲೇ ತಯಾರಿ ಅಂತಿಮ ರೂಪ ಪಡೆದಿದೆ. ವಿವಿ ಆವರಣದಲ್ಲಿ ಮಳಿಗೆಗಳ ನಿರ್ಮಾಣ ಕಾರ್ಯ ಮುಗಿದಿದ್ದು, ಮುಖ್ಯ ವೇದಿಕೆ ಸಿದ್ಧಪಡಿಸುವ ಕಾರ್ಯ ಸಾಗಿದೆ.

ನಾಲ್ಕು ದಿನಗಳ ಈ ಮೇಳದಲ್ಲಿ ಸುಮಾರು 10 ಲಕ್ಷ ರೈತರು ಭಾಗವಹಿಸುವ ನಿರೀಕ್ಷೆಯಿದ್ದು, ಕೃಷಿ ಹಾಗೂ ಕೃಷಿ ಪೂರಕ ತಂತ್ರಜ್ಞಾನಗಳೊಂದಿಗೆ ಬೀಜ ಮೇಳ-ಮತ್ಸ್ಯ ಮೇಳವೂ ಇರಲಿದೆ. ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿ ಬರುವ ಆವರಣಗಳಲ್ಲಿ ಕೈಗೊಂಡ ಬೋಧನೆ, ಸಂಶೋಧನೆ, ವಿಸ್ತರಣಾ ಚಟುವಟಿಕೆಗಳ ಸಮಗ್ರ ಮಾಹಿತಿ ಮೇಳದಲ್ಲಿ ಸಿಗಲಿದೆ. ಇದಲ್ಲದೇ ವಿಶ್ವವಿದ್ಯಾಲಯದಿಂದ ಬಿಡುಗಡೆಯಾದ ಮತ್ತು ಬಿಡುಗಡೆಯ ಹಂತದಲ್ಲಿರುವ ತಂತ್ರಜ್ಞಾನಗಳ ಬಗ್ಗೆ ರೈತರಿಗೆ ಕ್ಷೇತ್ರ ಪ್ರಯೋಗ ಹಾಗೂ ವಿವಿಧ ಪ್ರಾತ್ಯಕ್ಷಿಕೆಗಳ ಮೂಲಕ ಮನದಟ್ಟಾಗುವ ರೀತಿಯಲ್ಲಿ ನಿಯೋಜಿಸಲಾಗಿದೆ.

 ಹೈಟೆಕ್‌ ಮಳಿಗೆಗಳು ಸಿದ್ಧ: ಕೃಷಿ ವಸ್ತು ಪ್ರದರ್ಶನದಲ್ಲಿ 184 ಹೈಟೆಕ್‌ ಮಳಿಗೆಗಳು, 364 ಸಾಮಾನ್ಯ ಮಳಿಗೆಗಳು, 21 ಯಂತ್ರೋಪಕರಣ ಮಳಿಗೆಗಳು, 27 ಆಹಾರ ಮಳಿಗೆಗಳು, 54 ಜಾನುವಾರು ಪ್ರದರ್ಶನ ಮಳಿಗೆಗಳು, 9 ಕ್ಷೇತ್ರ ಮಳಿಗೆಗಳ ವ್ಯವಸ್ಥೆ ಮಾಡಲಾಗಿದೆ. ರೈತರಿಗೆ ಕ್ಷೇತ್ರ ವೀಕ್ಷಣೆಗಾಗಿ ಕೃಷಿ ಮಹಾವಿದ್ಯಾಲಯ ಮುಖ್ಯ ಕಟ್ಟಡದಿಂದ ಪ್ರತಿ 15 ನಿಮಿಷಕ್ಕೆ ವಾಹನದ ವ್ಯವಸ್ಥೆ ಮಾಡಲಾಗಿದೆ. ಇದಲ್ಲದೇ ವಿಮಾ ವ್ಯಾಪ್ತಿಗೆ ಕೃಷಿ ಮೇಳದ ಆವರಣ ಒಳಪಡಿಸಲಾಗಿದ್ದು, ಸನ್ನದ್ಧ ಸ್ಥಿತಿಯಲ್ಲಿರುವ ಅಗ್ನಿಶಾಮಕ ವಾಹನ ಇರಲಿದೆ. ಮೊಬೈಲ್‌ ಎಟಿಎಂ ವಾಹನಗಳು, ಕ್ಷೇತ್ರ ಪ್ರಾತ್ಯಕ್ಷಿಕೆಗಳಿಗೆ ಭೇಟಿ, ಉಚಿತ ವೈದ್ಯಕೀಯ ಸಲಹಾ ಕೇಂದ್ರ, ಸಾರಿಗೆ ನಿರ್ವಹಣಾ ವ್ಯವಸ್ಥೆ, ಪೊಲೀಸ್‌ ಸಹಾಯ ಕೇಂದ್ರಗಳು ಇರಲಿವೆ.

ಮಳೆ ನೀರು ಕೊಯ್ಲು ಮತ್ತು ಅಂತರ್ಜಲ ಮರುಪೂರಣ, ಅಧಿಕ ಇಳುವರಿ ಮತ್ತು ನೀರಿನ ಉಳಿತಾಯಕ್ಕಾಗಿ ಸುಧಾರಿತ ನೀರಾವರಿ ಪದ್ಧತಿಗಳು, ಸಂಪನ್ಮೂಲ ಸಂರಕ್ಷಣೆಗಾಗಿ ಸಮಗ್ರ ಜಲಾನಯನ ಅಭಿವೃದ್ಧಿ, ಸಮಗ್ರ ಬೆಳೆ, ಪೋಷಕಾಂಶ, ಪೀಡೆಗಳ ನಿರ್ವಹಣೆ, ಕೃಷಿಯಲ್ಲಿ ಜೈವಿಕ ಹಾಗೂ ನ್ಯಾನೋ ತಂತ್ರಜ್ಞಾನಗಳ ಬಳಕೆ, ದ್ವಿದಳ ಧಾನ್ಯಗಳ ಉತ್ಪಾದನೆ, ಮೌಲ್ಯವರ್ಧನೆ, ಹೈಟೆಕ್‌ ತೋಟಗಾರಿಕೆ, ಮಣ್ಣು ರಹಿತ ಬೇಸಾಯ, ಸುಗಂಧ ಮತ್ತು ಔಷಧ ಬೆಳೆಗಳು, ಫಲ-ಪುಷ್ಪಗಳ ಪ್ರದರ್ಶನ, ಅಲಂಕಾರಿಕ ಮೀನು ಸಾಕಾಣಿಕೆ, ಮತ್ಸ್ಯ ಸಸ್ಯ ಸಂಗಮ, ಮೀನು ಮತ್ತು ಸಿಗಡಿ ಸಾಕಣೆ ಹಾಗೂ ಅಲಂಕಾರಿಕ ಮೀನುಗಳ ಪ್ರದರ್ಶನ ಮೇಳದಲ್ಲಿ ಗಮನ ಸೆಳೆಯಲಿದೆ.

ಬೀಜದ ಜತೆಗೆ ಜೈವಿಕ ಗೊಬ್ಬರ:ಮೇಳದಲ್ಲಿ 333 ಕ್ವಿಂಟಲ್‌ ಹಿಂಗಾರಿ ಜೋಳ, 344 ಕ್ವಿಂಟಲ್‌ ಗೋಧಿ, 1445 ಕ್ವಿಂಟಲ್‌ ಕಡಲೆ, 39 ಕ್ವಿಂಟಲ್‌ ಕುಸುಬೆ ಮತ್ತು 1 ಕ್ವಿಂಟಲ್‌ ಸಾಸಿವೆ ಒಟ್ಟು 2161 ಕ್ವಿಂಟಲ್‌ ಬೀಜ ಪ್ರಸಕ್ತ ಕೃಷಿ ಮೇಳದಲ್ಲಿ ಮಾರಾಟಕ್ಕೆ ಲಭ್ಯವಿದೆ. ಇದಲ್ಲದೇ ವಿಶ್ವವಿದ್ಯಾಲಯಕ್ಕೆ ಪ್ರಪ್ರಥಮ ಬಾರಿಗೆ ಜೈವಿಕ ಕೃಷಿ ಪರಿಕರಗಳ ಉತ್ಪನ್ನ ಹಾಗೂ ಮಾರಾಟಕ್ಕೆ ಪರವಾನಗಿ ಪತ್ರ ದೊರೆತಿದೆ. ಈ ಹಿನ್ನೆಲೆಯಲ್ಲಿ 847 ಕೆಜಿ ವಿವಿಧ ಪ್ರಕಾರದ ಜೈವಿಕ ಗೊಬ್ಬರಗಳ ಪುಡಿ, 410 ಲೀಟರ್‌ ವಿವಿಧ ಪ್ರಕಾರದ ಜೈವಿಕ ಗೊಬ್ಬರದ ದ್ರವಗಳು ಪ್ರಸಕ್ತ ಕೃಷಿ ಮೇಳದಲ್ಲಿ ಮಾರಾಟಕ್ಕೆ ಲಭ್ಯವಿದೆ.

ಕಾಡುತ್ತಿದೆ ಮಳೆ ಆತಂಕ

ಉತ್ತರ ಕರ್ನಾಟಕ ಭಾಗದಲ್ಲಿ ಮಳೆ ಅಬ್ಬರ, ನೆರೆ ಹಾವಳಿ ಮುಂದುವರಿದಿದ್ದು, ಬೆಳಗಾವಿ, ವಿಜಯಪುರ, ಬಾಗಲಕೋಟೆ ಸೇರಿದಂತೆ ಸುತ್ತಲಿನ ಜಿಲ್ಲೆಗಳಲ್ಲಿ ಕಳೆದ ಒಂದು ವಾರದಿಂದ ವರುಣಾರ್ಭಟ ಸಾಗಿದೆ. ಇದರ ಮಧ್ಯೆಯೇ ಕೃಷಿ ಮೇಳಕ್ಕೆ ವೇದಿಕೆ ಸಜ್ಜಾಗಿದ್ದು, ವರುಣ ದೇವನ ಕೃಪೆ ಕಾದು ನೋಡಬೇಕಿದೆ. ಉತ್ತರ ಕರ್ನಾಟಕ ಭಾಗ ಸೇರಿದಂತೆ ಧಾರವಾಡ ಜಿಲ್ಲೆಯಲ್ಲೂ ವಾಡಿಕೆಗಿಂತ ಅಧಿಕ ಮಳೆಯಾಗಿದ್ದು, ಬೆಳೆ ನಷ್ಟದಿಂದ ರೈತರು ಸಂಕಷ್ಟದಲ್ಲಿದ್ದಾರೆ. ಇದಲ್ಲದೇ ಮೇಳದ ಸಮಯದಲ್ಲಿಯೇ ಮಳೆಯ ಮುನ್ಸೂಚನೆ ಇರುವ ಕಾರಣ ಮಳೆಯ ಆತಂಕವಿದ್ದು, ರೈತರ ಸಂಖ್ಯೆಯಲ್ಲಿ ಇಳಿಮುಖ ಆಗುವ ಸಾಧ್ಯತೆ ಇದೆ.

ಬಾರಿ ದನಕರುಗಳಿಗೆ ಅವಕಾಶ ಇಲ್ಲ

ಕೃಷಿ ವಿಶ್ವವಿದ್ಯಾಲಯ ವ್ಯಾಪ್ತಿಯ 7 ಜಿಲ್ಲೆಗಳಿಂದ 2021-22ನೇ ಸಾಲಿಗೆ ಆಯ್ಕೆಯಾದ ಶ್ರೇಷ್ಠ ಕೃಷಿಕ ಮತ್ತು ಶ್ರೇಷ್ಠ ಕೃಷಿ ಮಹಿಳೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದ್ದು, ಇದೇ ಮೊದಲ ಬಾರಿ ಮೇಳದಲ್ಲಿ ನೀಡುತ್ತಿದ್ದ ತಾಲೂಕುವಾರು ಯುವ ಕೃಷಿಕ ಹಾಗೂ ಮಹಿಳೆ ಪ್ರಶಸ್ತಿಯನ್ನು ಈ ಸಲ ಕೈಬಿಡಲಾಗಿದೆ. ಇನ್ನು ಇದೇ ಮೊದಲ ಬಾರಿಗೆ ಸಾಂಕ್ರಾಮಿಕ ರೋಗ ಹಿನ್ನೆಲೆಯಲ್ಲಿ ಜಾನುವಾರು ಪ್ರದರ್ಶನದಲ್ಲಿ ದನಕರುಗಳಿಗೆ ಅವಕಾಶ ನೀಡಿಲ್ಲ. ಶ್ವಾನ ಸೇರಿದಂತೆ ಬರೀ ಸಾಕು ಪ್ರಾಣಿಗಳಿಗಷ್ಟೇ ಅವಕಾಶ ನೀಡಲಾಗಿದೆ.

ಟಾಪ್ ನ್ಯೂಸ್

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

mohan bhagwat

Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Battery theft at Dharwad District Collector’s Office

Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ

ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ

ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ

13-

Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ

AV-Bellad

Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್‌

Hubli: ಕ್ರಿಮಿನಲ್‌ ಜತೆಯೇ ಪೊಲೀಸ್‌ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್‌ ಕಾರ್ಯಾಚರಣೆ

Hubli: ಕ್ರಿಮಿನಲ್‌ ಜತೆಯೇ ಪೊಲೀಸ್‌ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್‌ ಕಾರ್ಯಾಚರಣೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಳೆಬಾಳುವ ಎತ್ತು ಬಲಿ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಳೆಬಾಳುವ ಎತ್ತು ಬಲಿ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.