ಕೃಷಿ ಸಮ್ಮಾನ್: ಹಣ ಹೊಂದಿಸಲು ಲೆಕ್ಕಾಚಾರ
Team Udayavani, Aug 16, 2019, 3:08 AM IST
ಬೆಂಗಳೂರು: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಗೆ ಪೂರಕವಾಗಿ ರೈತರಿಗೆ ರಾಜ್ಯ ಸರ್ಕಾರ ಘೋಷಿಸಿರುವ ಹೆಚ್ಚುವರಿ 4000 ಸಾವಿರ ರೂ. ಪ್ರೋತ್ಸಾಹ ನೀಡುವ ಯೋಜನೆಗೆ ಹಣ ಹೊಂದಿಸಲು ರಾಜ್ಯ ಸರ್ಕಾರ ಹೊಸ ಲೆಕ್ಕಾಚಾರಕ್ಕೆ ಮುಂದಾಗಿದೆ.
ಯಡಿಯೂರಪ್ಪ ಮುಖ್ಯಮಂತ್ರಿಯಾದ ನಂತರ ಘೋಷಣೆ ಮಾಡಿರುವ ಯೋಜನೆಗೆ ತಕ್ಷಣ ಹಣ ಹೊಂದಿಸುವುದು ಅತಿ ದೊಡ್ಡ ಸವಾಲಾಗಿದ್ದು, ಈ ಯೋಜನೆಗಾಗಿ ಹೊಸ ಸರ್ಕಾರ ಯಾವುದೇ ಬಜೆಟ್‌ನಲ್ಲಿ ಹಣ ಮೀಸಲಿಡದೇ ಇರುವುದರಿಂದ ಈಗ ಜಾರಿಯಲ್ಲಿರುವ ಯೋಜನೆಗಳಲ್ಲಿ ಹಣ ಹೊಂದಾಣಿಕೆ ಮಾಡಲು ಸಾಧ್ಯವಿದೆಯೇ ಎನ್ನುವ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ಹಣಕಾಸು ಇಲಾಖೆ ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಗೆ ಪೂರಕವಾಗಿ ರಾಜ್ಯ ಸರ್ಕಾರದಿಂದಲೂ 4 ಸಾವಿರ ರೂ. ನೀಡುವ ಮೂಲಕ ಸಂಕಷ್ಟದಲ್ಲಿರುವ ರೈತರಿಗೆ ನೆರವಾಗಲು ಯಡಿಯೂರಪ್ಪ ರೈತರಿಗೆ ಎರಡು ಕಂತುಗಳಲ್ಲಿ 4000ರೂ ಹಣ ನೀಡಲು ತೀರ್ಮಾನಿಸಿದ್ದಾರೆ. ಈ ಬಗ್ಗೆ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಿ ಮೊದಲ ಕಂತಿನ 2000 ರೂ. ಮೊತ್ತವನ್ನು ಯೋಜನೆಗೆ ನೋಂದಾಯಿಸಿಕೊಂಡ 1 ಲಕ್ಷ ರೈತರಿಗೆ ನೀಡಲು ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.
ಕಿಸಾನ್ ಸಮ್ಮಾನ್ ಯೋಜನೆ ಜಾರಿಗಾಗಿ ರಾಜ್ಯ ಸರ್ಕಾರಕ್ಕೆ 2200 ಕೋಟಿ ರೂ ಅನುದಾನದ ಅಗತ್ಯವಿದೆ. ಮೊದಲ ಕಂತಿನ ಹಣ ಪಾವತಿಗೆ 1100 ಕೋಟಿ ರೂ ಹಾಗೂ ಎರಡನೇ ಕಂತಿಗೆ ಇಷ್ಟೇ ಮೊತ್ತದ ಹಣದ ಅಗತ್ಯವಿದೆ. ಬಿಜೆಪಿ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಅನುಷ್ಠಾನಗೊಳಿಸಲು ಆರ್ಥಿಕ ವರ್ಷದ ಮಧ್ಯಂತರ ಅವಧಿಯಲ್ಲಿ ಕಷ್ಟ ಎಂದು ಆರ್ಥಿಕ ಇಲಾಖೆ ಅಧಿಕಾರಿಗಳು ಮುಖ್ಯಮಂತ್ರಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ಆದರೆ, ಕೆಲವು ಯೋಜನೆಗಳಲ್ಲಿ ಹಣ ಹೊಂದಾಣಿಕೆ ಮಾಡುವ ಮೂಲಕ ಕಿಸಾನ್ ಸಮ್ಮಾನ್ ಯೋಜನೆಗೆ ಹಣಕಾಸಿನ ಸಮಸ್ಯೆ ನಿವಾರಿಸಬಹುದು ಎಂಬ ಸಲಹೆಯನ್ನೂ ಆರ್ಥಿಕ ಇಲಾಖೆ ಅಧಿಕಾರಿಗಳು ನೀಡಿದ್ದಾರೆ ಎನ್ನಲಾಗಿದೆ.
ಬಿಜೆಪಿ ಸರ್ಕಾರ ಘೋಷಿಸಿದ ಯೋಜನೆ ಜಾರಿಗೊಳಿಸಬೇಕಾದರೆ ಚಾಲ್ತಿಯಲ್ಲಿರುವ ಯೋಜನೆಗಳನ್ನು ಹಾಗೂ ಹೊಸದಾಗಿ ಘೋಷಿಸಲ್ಪಟ್ಟು ಅನುಷ್ಠಾನಗೊಳಿಸದೆ ಇರುವ ಕೆಲವು ಯೋಜನೆಗಳ ಅನುದಾನವನ್ನು ಹೊಂದಾಣಿಕೆ ಮಾಡಿ, ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಗೆ ಅನುದಾನ ಒದಗಿಸಬೇಕಾದರೆ ಕೆಲ ಬದಲಾವಣೆಗಳು ಅಗತ್ಯ ಎಂದು ಆರ್ಥಿಕ ಇಲಾಖೆ ಅಧಿಕಾರಿಗಳು ಮುಖ್ಯಮಂತ್ರಿ ಅವರಿಗೆ ಯೋಜನಾವಾರು ಅನುದಾನದ ಅಂಕಿ ಅಂಶಗಳ ಕುರಿತು ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.
ಯೋಜನಾ ವೆಚ್ಚ ಕಡಿತಕ್ಕೂ ಚಿಂತನೆ
-ಅನ್ನಭಾಗ್ಯ ಯೋಜನೆಯಡಿ ಕೇಂದ್ರ ಸರ್ಕಾರ ಪ್ರತಿ ಯುನಿಟ…ಗೆ 5 ಕೆ.ಜಿ. ಅಕ್ಕಿಯನ್ನು ಪ್ರತಿ ಕೆಜಿಗೆ 3 ರೂ.ನಂತೆ ನೀಡುತ್ತಿದ್ದು ಹೆಚ್ಚುವರಿಯಾಗಿ ರಾಜ್ಯ ಸರ್ಕಾರ 2 ಕೆಜಿ ಸೇರಿಸಿ 7 ಕೆಜಿ ಅಕ್ಕಿ ವಿತರಿಸುತ್ತಿದೆ. ಆದರೆ, ರಾಜ್ಯ ಸರ್ಕಾರ ಅಷ್ಟೂ ಅಕ್ಕಿಯನ್ನು ಉಚಿತವಾಗಿ ಫಲಾನುಭವಿಗಳಿಗೆ ನೀಡುತ್ತಿದ್ದು, ಅದರ ವೆಚ್ಚ ರಾಜ್ಯದ ಬೊಕ್ಕಸದಿಂದಲೇ ಭರಿಸಲಾಗುತ್ತಿದೆ. ಹೆಚ್ಚುವರಿ ನೀಡಲಾಗುವ 2 ಕೆಜಿ ಅಕ್ಕಿಗೆ ವಾರ್ಷಿಕ 2,850 ಕೋಟಿ ರೂ. ವೆಚ್ಚವಾಗುತ್ತಿತ್ತು. ಅದೇ ರೀತಿ 1 ಕೆಜಿ ತೊಗರಿ ಬೇಳೆ ನೀಡಲು 576 ಕೋಟಿ ರೂ ವೆಚ್ಚವಾಗುತ್ತಿದೆ. ಹೆಚ್ಚುವರಿ 2 ಕೆಜಿ ಅಕ್ಕಿ ಹಾಗೂ 1 ಕೆಜಿ ತೊಗರಿ ಬೇಳೆ ಹಂಚಿಕೆಗೆ 500 ಕೋಟಿ ರೂ.ನೀಡಲಾಗುತ್ತಿದೆ. ಹೆಚ್ಚುವರಿ ಅಕ್ಕಿಯ ವೆಚ್ಚವನ್ನು ಕಿಸಾನ್ ಸಮ್ಮಾನ್‌ಗೆ ಬಳಸಬಹುದೇ ಎಂಬುದು ಒಂದು ಲೆಕ್ಕಾಚಾರ.
-ಮೈತ್ರಿ ಸರ್ಕಾರದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಬಜೆಟ್‌ನಲ್ಲಿ ಘೋಷಿಸಿದ್ದ ಕನಿಷ್ಠ ಬೆಂಬಲ ಬೆಲೆ ಯೋಜನೆ ಅಡಿ ಆವರ್ತ ನಿಧಿಗೆ ನಿಗದಿ ಮಾಡಿದ್ದ 500 ಕೋಟಿ ರೂ. ಗಳನ್ನು ಬಳಸಿಕೊಳ್ಳಬಹುದು. ಅಲ್ಲದೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ವಿವಿಧ ಸಮುದಾಯಗಳ ಅಭಿವೃದ್ಧಿಗಾಗಿ ಘೋಷಿಸಿ, ಮೀಸಲಿಟ್ಟಿದ್ದ 134 ಕೋಟಿ ರೂ. ಮತ್ತು ವಿಜಯಪುರ ಜಿಲ್ಲೆಯ ದಾಳಿಂಬೆ ಮತ್ತು ದ್ರಾಕ್ಷಿ ಬೆಳೆಗಾರರಿಗಾಗಿ ಘೋಷಿಸಿದ್ದ 150 ಕೋಟಿ ರೂ. ವಿಶೇಷ ಪ್ಯಾಕೇಜ್ ಮತ್ತು ಕೃಷಿ ಉತ್ಪನ್ನ ಸಂಸ್ಕರಣಾ ಘಟಕಗಳಿಗಾಗಿ ಘೋಷಿಸಿದ್ದ 150 ಕೋಟಿ ರೂ.ಗಳ ಪ್ಯಾಕೆಜ್‌ಗಳನ್ನು ಬಳಸಿಕೊಂಡರೆ 1434 ಕೋಟಿ ರೂ.ದೊರೆಯಲಿದೆ ಎಂಬುದು ಇನ್ನೊಂದು ಲೆಕ್ಕಾಚಾರ.
-ಇತರ ಯೋಜನೆಗಳಲ್ಲಿ ಯೋಜನಾ ವೆಚ್ಚ ಕಡಿತ ಮಾಡುವ ಸಾಧ್ಯತೆ ಬಗ್ಗೆಯೂ ಚಿಂತನೆ
* ಶಂಕರ ಪಾಗೋಜಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kollegala: ಶಾಲಾ ಮಕ್ಕಳಿಗೆ ನೀಡುವ KMF ಹಾಲಿನ ಪುಡಿ ಅಕ್ರಮ ದಾಸ್ತಾನು… ಓರ್ವನ ಬಂಧನ
Namma Metro; 314 ಮನೆಗಳ ಮೇಲೆ ಹಾದು ಹೋಗಲಿದೆ ಮೆಟ್ರೋ ಮಾರ್ಗ
Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್; ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು
ಮಾದಕ ವಸ್ತು ಪತ್ತೆಯಲ್ಲಿ ಕೊಡಗಿನ ಕಾಪರ್ ಗೆ ಚಿನ್ನ, ಅಪರಾಧ ಪತ್ತೆಯಲ್ಲಿ ಬ್ರೂನೊಗೆ ಕಂಚು
Belagavi; ಅಗಲಿದ ಮನಮೋಹನ್ ಸಿಂಗ್ ಅವರಿಗೆ ಕಾಂಗ್ರೆಸ್ ಭಾವಪೂರ್ಣ ಶ್ರದ್ಧಾಂಜಲಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Suzuki; ಆಟೋಮೊಬೈಲ್ ಕ್ಷೇತ್ರದ ದಿಗ್ಗಜ ಒಸಾಮು ಸುಜುಕಿ ವಿಧಿವಶ
Hubli: ವರೂರಿನ ನವಗ್ರಹ ತೀರ್ಥ ಕ್ಷೇತ್ರದಲ್ಲಿ ಜ. 15ರಿಂದ 26ರವರೆಗೆ ಮಹಾಮಸ್ತಕಾಭಿಷೇಕ
Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ
Hubli; ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ
New Delhi: ಸಂಸತ್ತಿನ ಬಳಿ ಬೆಂಕಿ ಹಚ್ಚಿಕೊಂಡಿದ್ದ ಯುವಕ ಸಾ*ವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.