Agriculture: 1.31ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಹೆಸರು ಬಿತ್ತನೆ – ಹಳದಿ ರೋಗ ಭೀತಿ
ತೊಗರಿ ಸೇರಿ ವಿವಿಧ ಬೆಳೆಗಳು ಉತ್ತಮ ಇಳುವರಿ ಬರುವ ನಿರೀಕ್ಷೆಯಲ್ಲಿದ್ದಾರೆ ರೈತರು.
Team Udayavani, Jul 16, 2024, 12:45 PM IST
ಉದಯವಾಣಿ ಸಮಾಚಾರ
ಗದಗ: ಪ್ರಸಕ್ತ ವರ್ಷ ಮುಂಗಾರು ಹಂಗಾಮಿನಲ್ಲಿ ಉತ್ತಮ ಮಳೆಯಾಗುತ್ತಿದ್ದು, ಜಿಲ್ಲೆಯಲ್ಲಿ ಕೃಷಿ ಇಲಾಖೆಯ 1.25 ಲಕ್ಷ ಹೆಕ್ಟೇರ್ ಬಿತ್ತನೆ ಗುರಿ ಪೈಕಿ 1.31 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಹೆಸರು ಬಿತ್ತನೆಯಾಗಿದೆ. ಶೇ.104.60 ಬಿತ್ತನೆಯಾಗುವ ಮೂಲಕ ಕೃಷಿ ಇಲಾಖೆಯ ಗುರಿ ಮೀರಿ ಶೇ. 4.60 ಹೆಚ್ಚಿನ ಪ್ರಮಾಣದಲ್ಲಿ ಹೆಸರು ಬಿತ್ತನೆಯಾಗಿದೆ.
ಕಳೆದ ಬಾರಿ ಮುಂಗಾರು ಕೈಕೊಟ್ಟಿದ್ದರಿಂದ ಕೃಷಿ ಇಲಾಖೆ ನಿಗದಿಪಡಿಸಿದ್ದ ಬಿತ್ತನೆ ಗುರಿ ಮುಟ್ಟಿದ್ದಿಲ್ಲ. ಜತೆಗೆ ಸಮಯಕ್ಕೆ
ಸರಿಯಾಗಿ ಮಳೆಯಾಗದ ಕಾರಣ ಹೆಸರು ಬಿತ್ತನೆ ವಿಳಂಬವಾಗಿತ್ತು. ಈ ಕಾರಣದಿಂದ ಹೆಸರಿಗೆ ಬೂದಿರೋಗ ಅಂಟಿಕೊಂಡು ಇಳುವರಿ ಸಂಪೂರ್ಣ ಕೈಕೊಟ್ಟಿತ್ತು. ಪ್ರಸಕ್ತ ಸಾಲಿನಲ್ಲಿ ಮಳೆ ನಿಗದಿತ ಸಮಯದಲ್ಲಿ ಆಗಿದ್ದರಿಂದ ರೈತರು ಸರಿಯಾದ ಸಮಯದಲ್ಲಿ ಹೆಸರು ಬಿತ್ತನೆ ಮಾಡಿದ್ದಾರೆ. ಆದ್ದರಿಂದ ಕೆಲವೆಡೆ ಹೆಸರು ಹೂಬಿಟ್ಟು ಕಾಯಿಯಾಗುವ ಹಂತದಲ್ಲಿದ್ದರೆ, ಕೆಲವೆಡೆ ಮಿಡಿಕಾಯಿ ಕಾಯಿಯಾಗುವ ಹಂತದಲ್ಲಿವೆ. ಇನ್ನೂ ಕೆಲವೆಡೆ ಹೂವು ಬಿಡುವ ಹಂತದಲ್ಲಿದೆ.
ಗಜೇಂದ್ರಗಡ, ರೋಣ, ಲಕ್ಷ್ಮೇಶ್ವರ ಸೇರಿ ಕೆಲವೆಡೆ ಹೆಸರು ಬೆಳೆಗೆ ಬೂದಿ ರೋಗ ಕಾಣಿಸಿಕೊಂಡಿದ್ದು, ಇನ್ನು ಕೆಲವೆಡೆ ಹೆಸರು ಉತ್ತಮ ಇಳುವರಿ ನೀಡುವ ಹಂತದಲ್ಲಿದೆ. ಹೆಸರು, ಮೆಕ್ಕೆಜೋಳ, ತೊಗರಿ ಸೇರಿ ವಿವಿಧ ಬೆಳೆಗಳು ಉತ್ತಮ ಇಳುವರಿ ಬರುವ ನಿರೀಕ್ಷೆಯಲ್ಲಿದ್ದಾರೆ ರೈತರು.
ಗುರಿ ಸಾಧನೆ ಮೀರಿ ಬಿತ್ತನೆ: ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನ ಪ್ರಮುಖ ಬೆಳೆಗಳಾದ ಹೆಸರು ಮತ್ತು ಮೆಕ್ಕೆಜೋಳ ಕೃಷಿ ಇಲಾಖೆ ನಿರೀಕ್ಷೆಗೂ ಮೀರಿ ಬಿತ್ತನೆಯಾಗಿದೆ. 1.25 ಲಕ್ಷ ಹೆಕ್ಟೇರ್ ಬಿತ್ತನೆ ಗುರಿ ಪೈಕಿ 1.31 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಹೆಸರು ಬಿತ್ತನೆಯಾಗಿದ್ದರೆ, 1.01 ಲಕ್ಷ ಹೆಕ್ಟೇರ್ ಬಿತ್ತನೆ ಗುರಿ ಪೈಕಿ 1.02 ಲಕ್ಷ ಹೆಕ್ಟೇರ್ ಮೆಕ್ಕೆಜೋಳ ಬಿತ್ತನೆಯಾಗಿದೆ.
ಇನ್ನು ದ್ವಿದಳ ಧಾನ್ಯದ ಪ್ರಮುಖ ಬೆಳೆ ತೊಗರಿ 750 ಹೆಕ್ಟೇರ್ ಬಿತ್ತನೆ ಗುರಿ ಪೈಕಿ 1,155 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗಿದೆ. 29 ಸಾವಿರ ಹೆಕ್ಟೇರ್ ಬಿತ್ತನೆ ಗುರಿ ಪೈಕಿ 28 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಶೇಂಗಾ ಬಿತ್ತನೆಯಾಗಿದೆ. ಜಿಲ್ಲೆಯಲ್ಲಿ ತೃಣಧಾನ್ಯ, ದ್ವಿದಳ ಧಾನ್ಯ, ಎಣ್ಣೆಕಾಳು ಹಾಗೂ ವಾಣಿಜ್ಯ ಬೆಳೆ ಸೇರಿ 3.01 ಲಕ್ಷ ಹೆಕ್ಟೇರ್ ಗುರಿ ಪೈಕಿ 2.93 ಲಕ್ಷ ಹೆಕ್ಟೇರ್ ಬಿತ್ತನೆಯಾಗಿದ್ದು, ಶೇ. 97.44 ಸಾಧನೆಯಾಗಿದೆ.
ಹೆಸರು ಬೆಳೆಗೆ ರೋಗಗಳು-ಹತೋಟಿ ಕ್ರಮಗಳು
ನಂಜುರೋಗ: ಎಲೆಗಳ ಮೇಲೆ ತಿಳಿ ಹಳದಿ ಬಣ್ಣದ ಕಲೆಗಳು ಕಾಣಿಸುವುದರಿಂದ ಬೆಳೆ ಸಣ್ಣದಾಗುತ್ತದೆ. ಈ ರೋಗ ತೀವ್ರವಾಗಿದ್ದರೆ ಕಾಯಿ ಬಿಡಲ್ಲ. ಕಾಯಿ ಬಿಟ್ಟರೆ ಕಾಳುಗಳು ಸಣ್ಣದಾಗಿ, ಇಳುವರಿ ಕಡಿಮೆಯಾಗುತ್ತದೆ. ಆದ್ದರಿಂದ ರೋಗಕ್ಕೆ ತುತ್ತಾದ ಗಿಡಗಳನ್ನು ಆರಂಭದ ಹಂತದಲ್ಲಿ ಗುರುತಿಸಿ ಕಿತ್ತು ಮಣ್ಣಿನಲ್ಲಿ ಹೂಳಬೇಕು. ನಂತರ ಡೈಮಿಥೊಯೇಟ 1.7 ಮಿ.ಲೀ. ಅಥವಾ ಇಮಿಡಾಕ್ಲೊಪ್ರಿಡ್ 0.3 ಮಿ.ಲೀ. ಔಷಧಿಯನ್ನು ಪ್ರತಿ ಲೀಟರ್‌ಗೆ ಕೂಡಿಸಿ ಸಿಂಪಡಣೆ ಮಾಡಿ ರಸ ಹೀರುವ ಕೀಟಗಳನ್ನು ಹತೋಟಿ ಮಾಡಿ ರೋಗ ಉಲ್ಬಣಿಸುವುದನ್ನು ತಡೆಯಬಹುದು.
ಬೂದಿರೋಗ
ಎಲೆಯ ಮೇಲೆ ಶಿಲೀಂಧ್ರದ ಬಿಳಿಯ ಪುಡಿಯಂಥ ಬೆಳವಣಿಗೆ ಕಾಣಬಹುದು. ಇದರಿಂದ ಗಿಡಗಳು ಪೂರ್ತಿಯಾಗಿ ಒಣಗುತ್ತವೆ. ಇದರಿಂದ ಶೇ.10-60 ಇಳುವರಿ ನಷ್ಟವಾಗಬಹುದು. ಈ ರೋಗ ನಿಯಂತ್ರಿಸಲು ಪ್ರೊಪಿಕೋನೊಜೋಲ್ 1ಮಿ.ಲೀ. ಅಥವಾ
ಕಾರ್ಬಂಡೈಜಿಮ್ 1 ಗ್ರಾಂ ಅಥವಾ ನೀರಿನಲ್ಲಿ ಕರಗುವ ಗಂಧಕ 3 ಗ್ರಾಂ ಔಷಧಿಯನ್ನು ಪ್ರತಿ ಲೀಟರ್ ನೀರಿಗೆ ಕೂಡಿಸಿ ಸಿಂಪರಿಸಬೇಕು.
ಪ್ರಸ್ತುತ ಮುಂಗಾರಿನಲ್ಲಿ ಉತ್ತಮ ಮಳೆಯಾಗಿದ್ದರಿಂದ ಜಿಲ್ಲಾದ್ಯಂತ ಹೆಸರು, ಮೆಕ್ಕೆಜೋಳ, ಶೇಂಗಾ, ತೊಗರಿ ಅಧಿಕ ಕ್ಷೇತ್ರಗಳಲ್ಲಿ ಬಿತ್ತನೆಯಾಗಿದೆ. ಕೆಲವೆಡೆ ಮಾತ್ರ ಬೂದಿರೋಗ ಕಂಡು ಬಂದಿದ್ದು, ಬೂದಿ ರೋಗ ನಿಯಂತ್ರಣಕ್ಕಾಗಿ ಅಧಿಕಾರಿಗಳು ರೈತರಿಗೆ
ಮಾರ್ಗದರ್ಶನ ನೀಡುತ್ತಿದ್ದಾರೆ. ಉಳಿದಂತೆ ಜಿಲ್ಲಾದ್ಯಂತ ಉತ್ತಮ ಇಳುವರಿ ನಿರೀಕ್ಷೆ ಮಾಡಲಾಗಿದೆ.
●ತಾರಾಣಿ ಜಿ.ಎಚ್.,
ಜಂಟಿ ಕೃಷಿ ನಿರ್ದೇಶಕರು, ಗದಗ
ಪ್ರಕಸ್ತ ವರ್ಷ ಮುಂಗಾರಿನಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ 4 ಎಕರೆ ಪ್ರದೇಶದಲ್ಲಿ ಹೆಸರು ಬೆಳೆದಿದ್ದೇನೆ. ಬೆಳೆ ಹೂವು ಬಿಟ್ಟು ಕಾಯಿಯಾಗುವ ಹಂತದಲ್ಲಿದ್ದು, ಉತ್ತಮ ಇಳುವರಿ ನಿರೀಕ್ಷೆಯಲ್ಲಿದ್ದೇನೆ. ಈ ಸಂದರ್ಭದಲ್ಲಿ ಅತಿಯಾದ ಮಳೆ, ಯಾವುದೇ ರೋಗಗಳು ಬಾಧಿಸದಿರಲಿ ಎಂದು ದೇವರಲ್ಲಿ ಪ್ರಾರ್ಥಿಸಿಕೊಳ್ಳುತ್ತಿದ್ದೇನೆ.
●ರಮೇಶ ಭೀಮನಗೌಡರ,
ರೈತ, ಬಳಗಾನೂರ ಗ್ರಾಮ.
■ ಅರುಣಕುಮಾರ ಹಿರೇಮಠ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gajendragad: ಮನೆಯಲ್ಲೇ ಮುಖ್ಯ ಶಿಕ್ಷಕಿಯ ಹ*ತ್ಯೆ
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Gadag: ಬಡವರಿಗೆ ಶಕ್ತಿ ತುಂಬುವ ಗ್ಯಾರಂಟಿ ಯೋಜನೆಗಳಿಗೆ ವಿಪಕ್ಷಗಳಿಂದ ವಿರೋಧ: ಸಿದ್ದರಾಮಯ್ಯ
CM Siddaramaiah: ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಿ ನುಡಿದಂತೆ ನಡೆದ ಸರ್ಕಾರ ನಮ್ಮದು
Gadag: ಬಿಂಕದಕಟ್ಟಿ ಮೃಗಾಲಯದಲ್ಲಿ 16 ವರ್ಷದ ಹೆಣ್ಣು ಹುಲಿ ಅನುಸೂಯ ನಿಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.