ಕೋವಿಡ್ 19 ನಿರ್ವಹಣೆ ಕುರಿತು ಶ್ವೇತಪತ್ರ ಬಿಡುಗಡೆಗೊಳಿಸಿದ ರಾಹುಲ್ ಗಾಂಧಿ
ಬಿಜೆಪಿ ಸರ್ಕಾರ ಏನೇ ಒಳ್ಳೆ ಕೆಲಸ ಮಾಡಿದರೂ ಅದನ್ನು ಹಾದಿ ತಪ್ಪಿಸುವಲ್ಲಿ ಅವರು ನಿರತರಾಗಿರುತ್ತಾರೆ'' ಎಂದಿದ್ದಾರೆ.
Team Udayavani, Jun 23, 2021, 8:40 AM IST
ನವದೆಹಲಿ: ಪ್ರಸ್ತುತ ಇಡೀ ದೇಶವನ್ನೇ ಆವರಿಸಿರುವ ಕೋವಿಡ್ ಪರಿಸ್ಥಿತಿಯ ನಿರ್ವಹಣೆ ಕುರಿತಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಪಕ್ಷದ ಪರವಾಗಿ ಶ್ವೇತಪತ್ರವೊಂದನ್ನು ಹೊರತಂದಿದ್ದಾರೆ.
ಇದನ್ನೂ ಓದಿ:ಛಲದಂಕಮಲ್ಲ: ತಾನು ಕಟ್ಟಿದ್ದ ದೈತ್ಯ ಆ್ಯಪಲ್ ಕಂಪನಿಯಿಂದಲೇ ಹೊರಬಿದ್ದಿದ್ದ ಸ್ಟೀವ್ ಜಾಬ್ಸ್!
ಈ ಕುರಿತಂತೆ, ವರ್ಚ್ಯುವಲ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “”ಕೇಂದ್ರ ಸರ್ಕಾರದ ಕಡೆಗೆ ಬೆರಳು ತೋರುವುದಲ್ಲ. ಬದಲಿಗೆ, ದೇಶ ಎದುರಿಸುತ್ತಿರುವ ಸಾಂಕ್ರಾಮಿಕ ಸಮಸ್ಯೆಯನ್ನು ಎದುರಿಸುವ ಕುರಿತು ಕೆಲವು ಸಲಹೆಗಳನ್ನು ಕೊಡುವ ನಿಟ್ಟಿನಲ್ಲಿ ಈ ಶ್ವೇತಪತ್ರ ತರಲಾಗಿದೆ” ಎಂದು ಹೇಳಿದ್ದಾರೆ.
“ದೇಶದ 82.7 ಜನರಿಗೆ ಲಸಿಕೆ ಸಿಗುವಂತೆ ಮಾಡಿರುವುದು ಶ್ಲಾಘನೀಯ. ಆದರೆ, ಈ ಮೂಲಕ ದಾಖಲೆ ಬರೆದೆವು ಎಂದು ಬೀಗಬಾರದು. ಲಸಿಕೆ ನೀಡುವಿಕೆಯನ್ನು ಸಮರೋಪಾದಿಯಲ್ಲಿ ಮುಂದುವರಿಸಬೇಕು. ಕೋವಿಡ್ ವಿಚಾರದಲ್ಲಿ ಎಲ್ಲಾ ರಾಜ್ಯಗಳನ್ನೂ ಸಮಾನವಾಗಿ ನೋಡಬೇಕು” ಎಂದಿದ್ದಾರೆ.
ಬಿಜೆಪಿ ಆಕ್ಷೇಪ: ರಾಹುಲ್ ಅವರ ಶ್ವೇತಪತ್ರವನ್ನು ಬಿಜೆಪಿ ಆಕ್ಷೇಪಿಸಿದೆ. “ಕೋವಿಡ್ ವಿಚಾರದಲ್ಲಿ ರಾಹುಲ್ ಗಾಂಧಿ ಅನಗತ್ಯವಾಗಿ ರಾಜಕೀಯ ಮಾಡುತ್ತಿದ್ದಾರೆ. ಕೋವಿಡ್ ಪರಿಸ್ಥಿತಿ ನಿರ್ವಹಣೆಯಲ್ಲಿ ಬಿಜೆಪಿ ಸರ್ಕಾರ ಏನೇ ಒಳ್ಳೆ ಕೆಲಸ ಮಾಡಿದರೂ ಅದನ್ನು ಹಾದಿ ತಪ್ಪಿಸುವಲ್ಲಿ ಅವರು ನಿರತರಾಗಿರುತ್ತಾರೆ” ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ
Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು
Gujarat: 700 ಕೆ.ಜಿ. ಡ್ರಗ್ಸ್ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ
Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್
Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.