Law: ಮುರುಘಾಶ್ರೀ ವಿರುದ್ಧದ ಎಲ್ಲ ಪ್ರಕರಣಕ್ಕೆ ತಡೆ
Team Udayavani, Nov 22, 2023, 12:27 AM IST
ಬೆಂಗಳೂರು: ಮುರುಘಾ ಶರಣರ ವಿರುದ್ಧದ ಎರಡನೇ ಪೋಕ್ಸೋ ಪ್ರಕರಣದಲ್ಲಿ ಚಿತ್ರದುರ್ಗ ಜಿಲ್ಲಾ ನ್ಯಾಯಾಲಯದ ನಿಲುವು ಹಾಗೂ ಸರಕಾರಿ ಅಭಿಯೋಜಕರ ನಡೆಯ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಹೈಕೋರ್ಟ್, ಪ್ರಕರಣ ಯಾವುದು, ಯಾರದ್ದು ಎನ್ನುವುದು ಮುಖ್ಯವಲ್ಲ. ನ್ಯಾಯಾಂಗ ಶಿಸ್ತು ಮುಖ್ಯ ಎಂದು ಅಭಿಪ್ರಾಯಪಟ್ಟಿದೆ.
ಇದೇ ವೇಳೆ ಚಿತ್ರದುರ್ಗ 2ನೇ ಅಪರ ಜಿಲ್ಲಾ ನ್ಯಾಯಾಧೀಶರ ಮುಂದೆ ವಿಚಾರಣೆಗಿರುವ ಮುರುಘಾ ಶ್ರೀಗಳ ಎಲ್ಲ ಪ್ರಕರಣಗಳಿಗೆ ತಡೆ ನೀಡಿ ಆದೇಶಿಸಿರುವ ಹೈಕೋರ್ಟ್, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗ 2ನೇ ಅಪರ ಜಿಲ್ಲಾ ನ್ಯಾಯಾಲಯದಲ್ಲಿರುವ ಎಲ್ಲ ಕಡತಗಳನ್ನು ತರಿಸಿಕೊಂಡು ಪರಿಶೀಲಿಸಿ ನ್ಯಾಯಾಲಯಕ್ಕೆ ವರದಿ ಸಲ್ಲಿಸುವಂತೆ ರಿಜಿಸ್ಟ್ರಾರ್ ಜನರಲ್ ಅವರಿಗೆ ನಿರ್ದೇಶನ ನೀಡಿರುವ ಹೈಕೋರ್ಟ್, ಸ್ಥಳೀಯ ಪಬ್ಲಿಕ್ ಪ್ರಾಸಿಕ್ಯೂಟರ್ ವಿರುದ್ಧ ತನಿಖೆ ನಡೆಸಲು ರಾಜ್ಯ ವಿಶೇಷ ಸರಕಾರಿ ಅಭಿಯೋಜಕರಿಗೆ ಆದೇಶಿಸಿದೆ.
ತಮ್ಮ ವಿರುದ್ಧದ ಪ್ರಕರಣಗಳನ್ನು ರದ್ದುಪಡಿಸುವಂತೆ ಕೋರಿ ಮುರುಘಾ ಶರಣರು ಸಲ್ಲಿಸಿರುವ ನಾಲ್ಕು ಕ್ರಿಮಿನಲ್ ಅರ್ಜಿಗಳನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ, ಮಂಗಳವಾರ ಈ ಆದೇಶ ನೀಡಿದೆ.
ಅಜ್ಞಾನ ಪ್ರದರ್ಶಿಸಿದ ಜಿಲ್ಲಾ ನ್ಯಾಯಾಧೀಶರು; ಅಸಮಾಧಾನ
ವಾದ-ಪ್ರತಿವಾದ ಆಲಿಸಿದ ನ್ಯಾಯ ಪೀಠ, ವಿಚಾರಣೆಗೆ ಹೈಕೋರ್ಟ್‌ನಲ್ಲಿ ತಡೆ ಇದ್ದರೂ, ಆರೋಪಿತ ಸ್ವಾಮೀಜಿಯನ್ನು ತರಾ ತುರಿಯಲ್ಲಿ ಬಂಧಿಸಿದ ಕ್ರಮಕ್ಕೆ ಅಸಮಾಧಾನ ವ್ಯಕ್ತಪಡಿಸಿತು. ಆರೋಪಿಯನ್ನು ಬಿಡುಗಡೆ ಮಾಡಿದ ಜೈಲು ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶಿಸಿದ್ದಾರೆ. ಹೈಕೋರ್ಟ್ ಆದೇಶ ಪಾಲಿಸಿದ್ದಕ್ಕೆ ಈ ಕ್ರಮ ಸರಿಯಲ್ಲ. ಆರೋಪಿ ಯಾರೇ ಇರಲಿ ಅದು ನಮಗೆ ಮುಖ್ಯವಲ್ಲ. ನ್ಯಾಯಾಂಗ ಶಿಸ್ತು ನಮಗೆ ಮುಖ್ಯ. ಹೈಕೋರ್ಟ್ ಆದೇಶವನ್ನು ನಿಷ್ಫಲಗೊಳಿಸುವ ಪ್ರಯತ್ನ ಒಪ್ಪುವುದಿಲ್ಲ. ಹೈಕೋರ್ಟ್ ಆದೇಶದ ಬಗ್ಗೆ ಜಿಲ್ಲಾ ನ್ಯಾಯಾಧೀಶರು ಅಜ್ಞಾನ ಪ್ರದರ್ಶಿಸಿದ್ದಾರೆ, ಸಾಲು-ಸಾಲು ತಪ್ಪುಗಳನ್ನು ಮಾಡಿದ್ದಾರೆ ಎಂದು ನ್ಯಾಯಪೀಠ ಹೇಳಿದೆ.
ಪೂರ್ವಾಗ್ರಹಪೀಡಿತ ಕ್ರಮ
ಅರ್ಜಿದಾರರ ಪರ ಹಿರಿಯ ವಕೀಲ ಸಿ.ವಿ. ನಾಗೇಶ್ ಹಾಗೂ ಸಂದೇಶ ಚೌಟ ವಾದ ಮಂಡಿಸಿ, 2ನೇ ಅಪರ ಜಿಲ್ಲಾ ನ್ಯಾಯಾಧೀಶರಿಂದ ಪೂರ್ವಾಗ್ರಹಪೀಡಿತ ಕ್ರಮವಾಗಿದೆ ಎಂದು ಆರೋಪಿಸಿ ಸಾಕ್ಷಿ ವಿಚಾರಣೆ ಬೇರೆ ಕೋರ್ಟ್‌ಗೆ ವರ್ಗಾಯಿಸಲು ಮನವಿ ಮಾಡಿದರು.
ಹೈಕೋರ್ಟ್ ಜಾಮೀನು ನೀಡಿದಾಗಲೂ ತತ್‌ಕ್ಷಣ ಬಿಡುಗಡೆಗೆ ಆದೇಶಿಸಲಿಲ್ಲ. ಆದೇಶ ಹೊರಡಿಸಲು ವಿಳಂಬ ಮಾಡಿದ್ದಾರೆ. ಇದರಿಂದಾಗಿ 3 ದಿನ ಶ್ರೀಗಳು ಜೈಲಿನಲ್ಲಿ ರಬೇಕಾಯಿತು. ವಿಚಾರಣೆ ಮುಂದೂಡುವಂತೆ ಹೈಕೋರ್ಟ್ ಆದೇಶಿಸಿದ್ದರೂ, ವಿಚಾರಣೆ ನಡೆಸಲಾಗಿದೆ. ಚಿತ್ರದುರ್ಗಕ್ಕೆ ಬರದಂತೆ ಹೈಕೋರ್ಟ್ ನಿರ್ಬಂಧಿಸಿದ್ದರೂ, ವಾರೆಂಟ್ ಜಾರಿಗೊಳಿಸಿ ಚಿತ್ರದುರ್ಗ ಜಿಲ್ಲೆಗೆ ಕರೆತರುವಂತೆ 2ನೇ ಅಪರ ಜಿಲ್ಲಾ ನ್ಯಾಯಾಧೀಶರು ಆದೇಶಿಸಿದ್ದಾರೆ. ಪಾಸ್‌ಪೋರ್ಟ್ ವಶಕ್ಕೆ ನೀಡಿದಾಗಲೂ ಅದರ ಪರಿಶೀಲನೆಗೆ ಕಳುಹಿಸಿದರು. ಹೈಕೋರ್ಟ್ ಆದೇಶ ವಿಫಲಗೊಳಿಸಲು ಬಂಧನಕ್ಕೆ ಆದೇಶಿಸಿದ್ದಾರೆ ಎಂದರು. ಅರ್ಜಿದಾರರ ಪರ ವಕೀಲ ಕೆ.ಬಿ.ಕೆ. ಸ್ವಾಮಿ ವಕಾಲತ್ತು ವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.