ಶೀಘ್ರವೇ “112′ ಮೂಲಕ ಎಲ್ಲ ತುರ್ತು ಸೇವೆಗಳು ಲಭ್ಯ

Team Udayavani, Jun 23, 2019, 3:08 AM IST

shiogra

ಬೆಂಗಳೂರು: ಆ್ಯಂಬುಲೆನ್ಸ್‌, ಪೊಲೀಸ್‌ ಸಹಾಯವಾಣಿ ಮತ್ತು ಅಗ್ನಿಶಾಮಕ ದಳ ಸೇರಿ ಇತರ ತುರ್ತು ಸೇವೆಗಳು ಮುಂದಿನ ದಿನಗಳಲ್ಲಿ ಒಂದೇ ದೂರವಾಣಿ ಸಂಖ್ಯೆ ಮೂಲಕ ದೊರೆಯಲಿವೆ. ಭವಿಷ್ಯದಲ್ಲಿ ಅನುಕೂಲವಾಗುವ ನಿಟ್ಟಿನಲ್ಲಿ ವಿದೇಶದ ಮಾದರಿಯಲ್ಲಿ ಒಂದೇ ನಂಬರ್‌ ಮೂಲಕ ಸಾರ್ವಜನಿಕ ತುರ್ತುಸೇವೆಗಳನ್ನು ಒದಗಿಸಲು ರಾಜ್ಯ ಪೊಲೀಸ್‌ ಇಲಾಖೆ ಸಿದ್ಧತೆ ನಡೆಸಿದ್ದು, ಶೇ.90ರಷ್ಟು ಯೋಜನೆ ಪೂರ್ಣಗೊಂಡಿದೆ.

ಈಗಾಗಲೇ ದೇಶದ 16 ರಾಜ್ಯಗಳಲ್ಲಿ ಜಾರಿಯಲ್ಲಿರುವಂತೆ ರಾಜ್ಯದಲ್ಲಿಯೂ ಏಕರೂಪದ ಸಹಾಯವಾಣಿ ಕೇಂದ್ರ ಆರಂಭಿಸುವುದರ ಜತೆಗೆ ಪ್ರಸ್ತುತವಿರುವ 100(ಪೊಲೀಸ್‌ ಸಹಾಯವಾಣಿ), 101(ಅಗ್ನಿಶಾಮಕ ದಳ), 108 (ಆ್ಯಂಬುಲೆನ್ಸ್‌) ರಂತೆಯೇ “112′ ನಂಬರ್‌ ಕಾರ್ಯ ನಿರ್ವಹಿಸಲಿದೆ.

ಒಂದೊಮ್ಮೆ ನೂತನ ವ್ಯವಸ್ಥೆ ಜಾರಿಯಾದರೆ ಸಾರ್ವಜನಿಕರು ತುರ್ತು ಸಂದರ್ಭವಿದ್ದಲ್ಲಿ ಈ ಹಿಂದೆ ಕರೆ ಮಾಡುತ್ತಿದ್ದ ಸಂಖ್ಯೆಗಳ ಬದಲಿಗೆ 112 ನಂಬರ್‌ಗೆ ಕರೆ ಮಾಡಬಹುದು. ಕರೆಗಳನ್ನು ಸ್ವೀಕರಿಸುವ ಆಪರೇಟರ್‌ಗಳು, ಅದನ್ನು ಸಂಬಂಧಪಟ್ಟ ಇಲಾಖೆಗಳಿಗೆ ವರ್ಗಾಯಿಸಿ, ಈ ಹಿಂದಿನಂತೆ ಸೇವೆ ಒದಗಿಸಲಿದ್ದಾರೆ.

ಬೆಂಗಳೂರಿನಲ್ಲಿ ಕೇಂದ್ರ ಕಚೇರಿ: ದೇಶಾದ್ಯಂತ ಎಮರ್ಜೆನ್ಸಿ ರೆಸ್ಪಾನ್ಸ್‌ ಸಪೋರ್ಟ್‌ ಸಿಸ್ಟಂ (ಇಆರ್‌ಎಸ್‌ಎಸ್‌) ಆಗಿ ಜಾರಿಗೆ ಬಂದಿರುವ 112 ಸಂಖ್ಯೆಯೂ ರಾಜ್ಯದ ವಿವಿಧ ಜಿಲ್ಲೆಗಳೊಂದಿಗೆ ಸಂಪರ್ಕ ಹೊಂದಿರುತ್ತದೆ. ಅದರ ನಿಯಂತ್ರಣ ಕೊಠಡಿ ನಗರದ ಎಂ.ಜಿ.ರಸ್ತೆಯಲ್ಲಿರುವ ಪೊಲೀಸ್‌ ಸಂವಹನ, ಲಾಜಿಸ್ಟಿಕ್‌ ಮತ್ತು ಆಧುನೀಕರಣ ಕೇಂದ್ರ ಕಚೇರಿ ಆವರಣದಲ್ಲಿರುತ್ತದೆ.

ರಾಜ್ಯವ್ಯಾಪಿಯಿಂದ ಬರುವ ಎಲ್ಲ ತುರ್ತು ಕರೆಗಳನ್ನು ಇಲ್ಲಿರುವ ಸಿಬ್ಬಂದಿ ಸ್ವೀಕರಿಸಿ ನಂತರ ಜಿಲ್ಲಾ ನಿಯಂತ್ರಣ ಕೇಂದ್ರಗಳಿಗೆ ವರ್ಗಾಯಿಸುತ್ತಾರೆ. ನಂತರ, ಅಲ್ಲಿಂದ ಸಮೀಪದಲ್ಲಿರುವ ತುರ್ತು ವಾಹನ ಅಥವಾ ಸಿಬ್ಬಂದಿಯನ್ನು ಸ್ಥಳಕ್ಕೆ ಕಳುಹಿಸಲಾಗುತ್ತದೆ ಎಂದು ಹಿರಿಯ ಪೊಲೀಸ್‌ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.

ಪ್ರಾಯೋಗಿಕ ಕಾರ್ಯಾಚರಣೆ: ಜುಲೈ ಮೊದಲ ಅಥವಾ ಎರಡನೇ ವಾರದಿಂದ ಪ್ರಾಯೋಗಿಕವಾಗಿ ಇದರ ಕಾರ್ಯಾಚರಣೆ ಆರಂಭಿಸಲಾಗುತ್ತದೆ. ಮೊದಲಿಗೆ ಪೊಲೀಸ್‌ ಸಹಾಯವಾಣಿ ಸಂಖ್ಯೆ 100ನ್ನು ಮಾತ್ರ 112 ಜತೆ ಹೊಂದಾಣಿಕೆ ಮಾಡಲಿದ್ದು, ಮುಂದಿನ ದಿನಗಳಲ್ಲಿ ಹಂತ-ಹಂತವಾಗಿ 101, 108 ಮತ್ತು 1098 (ಮಕ್ಕಳ ಸಹಾಯವಾಣಿ),

1090(ಮಹಿಳಾ ಸಹಾಯವಾಣಿ) ಸೇರಿ ಇತರ ತುರ್ತು ಸೇವೆಗಳ ಸಹಾಯವಾಣಿ ಸಂಖ್ಯೆಗಳನ್ನು ಜೋಡಣೆ ಮಾಡಲಾಗುತ್ತದೆ. 112 ಈ ಸಂಖ್ಯೆಯನ್ನು ನೆನಪಿನಲ್ಲಿ ಇಟ್ಟುಕೊಳ್ಳುವುದು ಸುಲಭ. ಯಾವುದೇ ಸಮಸ್ಯೆ ಎದುರಾದಾಗ ಅಥವಾ ತುರ್ತು ಸಂದರ್ಭಗಳಲ್ಲಿ ಜನರು ಈ ಸಂಖ್ಯೆಗೆ ಕರೆ ಮಾಡಬಹುದೆಂದು ಅಧಿಕಾರಿ ವಿವರಿಸಿದರು.

ಸಿಬ್ಬಂದಿಗೆ ಸೂಕ್ತ ತರಬೇತಿ: ಪೊಲೀಸ್‌ ಸಂವಹನ, ಲಾಜಿಸ್ಟಿಕ್‌ ಮತ್ತು ಆಧುನೀಕರಣ ಕೇಂದ್ರದ ಎಡಿಜಿಪಿ ಮಾಲಿನಿ ಕೃಷ್ಣಮೂರ್ತಿ ನೇತೃತ್ವದಲ್ಲಿ ಈಗಾಗಲೇ ಯೋಜನಾ ಕಾರ್ಯ ನಡೆಯುತ್ತಿದೆ. ಈ ಹಿಂದಿನ ನಗರ ಪೊಲೀಸ್‌ ಆಯುಕ್ತ, ಎಡಿಜಿಪಿ ಟಿ.ಸುನಿಲ್‌ ಕುಮಾರ್‌ ಸಹ ಕಾರ್ಯ ನಿರ್ವಹಣೆ ಬಗ್ಗೆ ಪರಿಶೀಲಿಸಿದ್ದರು.

ಕೇಂದ್ರ ಸರ್ಕಾರದ ಅಧೀನದಲ್ಲಿರುವ ಸಿಡಿಎಸಿ (ಸೆಂಟರ್‌ ಆಫ್ ಡೆವಲಪ್‌ಮೆಂಟ್‌ ಆಫ್ ಅಡ್ವಾನ್ಸ್‌ಡ್‌ ಕಂಪ್ಯೂಟಿಂಗ್‌), ನಿಯಂತ್ರಣ ಕೊಠಡಿಯ ತಾಂತ್ರಿಕ ನಿರ್ವಹಣೆ ಮಾಡುತ್ತದೆ. ಎಲ್ಲ ತುರ್ತು ಸೇವೆಗಳ ಸಹಾಯವಾಣಿ ನಂಬರ್‌ಗಳನ್ನು ಒಂದೇ ನಂಬರ್‌ಗೆ ಜೋಡಣೆ ಮಾಡಿದ ಬಳಿಕ ಅದನ್ನು ಸಮರ್ಪಕವಾಗಿ ನಿರ್ವಹಿಸಲು ನಿಯಂತ್ರಣ ಕೊಠಡಿಯಲ್ಲಿ ಕೆಲಸ ಮಾಡುವ ಸಿಬ್ಬಂದಿಗೆ ನಿಸ್ತಂತು (ವೈರ್‌ಲೆಸ್‌) ವಿಭಾಗದ ಹಿರಿಯ ಅಧಿಕಾರಿಗಳಿಂದ ಸೂಕ್ತ ತರಬೇತಿ ಕೊಡಲಾಗುತ್ತದೆ.

ದೂರುಗಳನ್ನು ಸ್ವೀಕರಿಸುವ ಆಪರೇಟರ್‌ಗಳು ಇತರ ಇಲಾಖೆಯ ಸಹಾಯವಾಣಿ ಕೇಂದ್ರದ ಸಿಬ್ಬಂದಿ ಜತೆ ಹೇಗೆ ವ್ಯವಹರಿಸಬೇಕು?, ಯಾವ ರೀತಿ ಸ್ಪಂದಿಸಬೇಕು? ಎಂಬೆಲ್ಲ ಮಾಹಿತಿಯನ್ನು ತರಬೇತಿ ಮೂಲಕ ನೀಡಲಾಗುತ್ತದೆ. ಹೊಸದಾಗಿ ಸಿದ್ದವಾಗುತ್ತಿರುವ ನಿಯಂತ್ರಣ ಕೊಠಡಿಯಲ್ಲಿ 24/7 ಅಂತೆ ಪ್ರತಿ ಪಾಳಿಯಲ್ಲಿ 50-60 ಮಂದಿ ಕಾರ್ಯ ನಿರ್ವಹಿಸಲಿದ್ದು, ಕರೆ ಸ್ವೀಕರಿಸುವ ಸಿಬ್ಬಂದಿ ಇತರ ಇಲಾಖೆಗೆ ಕರೆ ಹಸ್ತಾಂತರಿಸಿ, ಕೇವಲ 7-8 ನಿಮಿಷಗಳಲ್ಲಿ ಸೇವೆ ಒದಗಿಸಲಿದ್ದಾರೆ. ಭವಿಷ್ಯದಲ್ಲಿ ಅದನ್ನು ಕೇವಲ ಒಂದೆರಡು ನಿಮಿಷಕ್ಕೆ ಕಡಿತ ಮಾಡುವ ಬಗ್ಗೆ ಕ್ರಮ ಕೈಗೊಳ್ಳಲಾಗುತ್ತಿದೆ.

ಒಬ್ಬ ವ್ಯಕ್ತಿಗೆ ಏಕಕಾಲದಲ್ಲಿ ಪೊಲೀಸ್‌ ಹಾಗೂ ಆ್ಯಂಬುಲೆನ್ಸ್‌ ಸೇವೆ ಅಗತ್ಯವಿದ್ದರೆ, ಎರಡರಿಂದ ಮೂರು ಸಂಖ್ಯೆಗಳಿಗೆ ಕರೆ ಮಾಡುವ ಬದಲು ಒಂದೇ ಸಂಖ್ಯೆಗೆ ಕರೆ ಮಾಡಿ ಎರಡೂ ಸೇವೆಗಳನ್ನು ಪಡೆಯಬಹುದು ಎಂದು ಅಧಿಕಾರಿ ಹೇಳಿದರು.

ಎಂಡಿಟಿ ಅಳವಡಿಕೆ: ಪ್ರತಿ ಜಿಲ್ಲೆಯಲ್ಲೂ ತುರ್ತು ಸೇವೆಗಳ ವಾಹನಗಳಿದ್ದು, ಪ್ರತಿ ವಾಹನದಲ್ಲೂ ಮೊಬೈಲ್‌ ಡೇಟಾ ಟರ್ಮಿನಲ್‌(ಎಂಡಿಟಿ) ಇರುತ್ತದೆ. ಅದು ಪೊಲೀಸರಿಗೆ ಜಿಪಿಎಸ್‌ ಮೂಲಕ ಸಮೀಪದಲ್ಲಿರುವ ವಾಹನದ ಬಗ್ಗೆ ಮಾಹಿತಿ ನೀಡುತ್ತದೆ. ಹೀಗಾಗಿ, ಕೂಡಲೇ ವಾಹನ ಸ್ಥಳಕ್ಕೆ ತಲುಪಲು ಸಹಾಯ ಆಗುತ್ತದೆ. ಇದರಿಂದ ಸಮಯದ ಉಳಿತಾಯವೂ ಆಗುತ್ತದೆ ಎಂದು ಅಧಿಕಾರಿ ವಿವರಿಸಿದರು.

* ಮೋಹನ್‌ ಭದ್ರಾವತಿ

ಟಾಪ್ ನ್ಯೂಸ್

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

121

Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ

CM-Siddu-High-Court

MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ

Trump–Kamala

US Election 2024, Kamala Vs Trump: ಅಮೆರಿಕ ಅಧ್ಯಕ್ಷರ ಚುನಾವಣೆ ಹೇಗೆ? ಏನು? ಎತ್ತ?

ಮಂಗಳೂರಿಗೆ ವಾಟರ್‌ ವೆುಟ್ರೋ; ಎಂಡಬ್ಲ್ಯುಎಂಪಿ ನಿರ್ಮಾಣಕ್ಕೆ ಮುಂದಾಗಿರುವ ಕೆಎಂಬಿ

ಮಂಗಳೂರಿಗೆ ವಾಟರ್‌ ವೆುಟ್ರೋ; ಎಂಡಬ್ಲ್ಯುಎಂಪಿ ನಿರ್ಮಾಣಕ್ಕೆ ಮುಂದಾಗಿರುವ ಕೆಎಂಬಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

CM-Siddu-High-Court

MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ

Bidar-Solha-kamb

Waqf Property: ಬೀದರ್‌ನ ಬಹುಮನಿ ಕೋಟೆಗೂ ವಕ್ಫ್ ಮೊಹರು!

dam-1724038171

Karnataka: 50 ವರ್ಷ ಮೀರಿದ ಜಲಾಶಯ ದುರಸ್ತಿಗೆ 10 ಸಾವಿರ ಕೋ.ರೂ.

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

121

Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ

CM-Siddu-High-Court

MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.