ಎಲ್ಲರಿಗೂ ನನ್ನ ಮೇಲೆಯೇ ಕಣ್ಣು: ಎಚ್.ಡಿ.ಕುಮಾರಸ್ವಾಮಿ
Team Udayavani, Aug 10, 2021, 3:40 PM IST
ರಾಮನಗರ: ನಾನು ಅಧಿಕಾರದಲ್ಲಿ ಇರಲಿ, ಇಲ್ಲದಿರಲಿ ಎಲ್ಲರಿಗೂ ನನ್ನ ಮೇಲೆಯೇ ಕಣ್ಣು. ಹೀಗೆ ಪ್ರತಿಕ್ರಿಯಿಸಿದ್ದು ಚನ್ನಪಟ್ಟಣ ಶಾಸಕ ಹಾಗೂ ಮಾಜಿ ಸಿಎಂ ಎಚ್.ಡಿ.ಕುಮಾರ ಸ್ವಾಮಿ.
ಕಾಂಗ್ರೆಸ್ ಶಾಸಕ ಜಮೀರ್ ಅಹಮದ್ ಅವರ ಮನೆಯ ಮೇಲೆ ಇಡಿ ದಾಳಿಯ ನಂತರ ಸುದ್ದಿಗಾರರೊಂದಿಗೆ ಮಾತನಾಡುವ ವೇಳೆ ತಮ್ಮ ಹಳೇ ಪಕ್ಷದವರೇ ತಮ್ಮ ಮೇಲೆ ದೂರು ನೀಡಿರಬಹುದು ಎಂದು ಹೇಳಿಕೆ ನೀಡಿದ್ದರು.ಜಮೀರ್ ಅವರ ಹೇಳಿಕೆಗೆ ಕುಮಾರಸ್ವಾಮಿ ಹೀಗೆ ಪ್ರತಿಕ್ರಿಯಿಸಿದರು.
ಅದಕ್ಕೆಲ್ಲ ಪ್ರತಿಕ್ರಿಯೆ ನೀಡಲ್ಲ: ಬಿಡದಿಯ ಕೇತಗಾನಹಳ್ಳಿ ತೋಟದ ಮನೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಜಮೀರ್ ಅಹಮದ್ ಅವರಿಗೆ ತಮ್ಮ ಮೇಲೆ ವಿಶೇಷ ಪ್ರೀತಿ. ಹಳೆಯ ಸ್ನೇಹಿತ. ಹೀಗಾಗಿಯೇ ತಮ್ಮ ವಿರುದ್ಧ ಆರೋಪ ಮಾಡಿದ್ದಾರೆ. ಅದಕ್ಕೆಲ್ಲ ಪ್ರತಿಕ್ರಿಯೆ ನೀಡುವುದಿಲ್ಲ. ಕೇಂದ್ರ ಸರ್ಕಾರವಾಗಲಿ, ಇಡಿ, ಐಟಿ ಇಲಾಖೆಗಳು ತಮ್ಮ ಕೈಯಲ್ಲಿ ಇಲ್ಲ. ಏನೇ ಆದರೂ ಅದಕ್ಕೆಲ್ಲ ತಾವೇ ಕಾರಣ ಎನ್ನುವ ಭಾವನೆ ಬಂದು ಬಿಟ್ಟಿದೆ ಎಂದು ಹೇಳಿದರು.
ಇದನ್ನೂ ಓದಿ:ಇಂದಿರಾ ಕ್ಯಾಂಟೀನ್ ಹೆಸರು ಬದಲಾಯಿಸುವ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚರ್ಚೆಯಾಗಿಲ್ಲ: ಅಶೋಕ್
ಚರ್ಚೆ ಮಾಡುವ ಅವಶ್ಯವಿಲ್ಲ: ತಂದೆ ಕಲಿಸಿದ್ದು ಕೃಷಿ ತಾವು ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ್ದರೂ, ಕೈಗಾರಿಕೆಗಳು, ಶಿಕ್ಷಣ ಸಂಸ್ಥೆ
ಗಳನ್ನು ತೆರೆಯಲಿಲ್ಲ. ಕೇತಗಾನಹಳ್ಳಿಯಲ್ಲಿ ಕೃಷಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿರುವುದಾಗಿ, ಬೇರೆಯವರು ಏನು ಮಾಡುತ್ತಿದ್ದಾರೆ ಎಂಬುದರ ಬಗ್ಗೆ ತಮಗೆ ಆಸಕ್ತಿ ಇಲ್ಲ. ತಮ್ಮದು ಕೃಷಿ ಮೂಲ ಕುಟುಂಬ, ತಮ್ಮ ತಂದೆಯವರು ತಮಗೆ ಕಲಿಸಿದ್ದು ಕೃಷಿ. ಕೇತ ಗಾನಹಳ್ಳಿಯಲ್ಲಿ ಕೃಷಿ ಚಟುವಟಿಕೆಯಲ್ಲೇ ತೊಡಗಿಸಿಕೊಂಡಿದ್ದೇನೆ, ಸಿನೆಮಾ ಅಥವಾ ಇನ್ನಾವುದು ಅಲ್ಲ. ಜತೆಗೆ ಪಕ್ಷಕ್ಕಾಗಿ ಸಂಘಟನೆಗೆ ಏನು ಮಾಡಬೇಕೊ ಅದನ್ನು ಮಾಡುತ್ತಿರುವುದಾಗಿ, ತೋಟದಲ್ಲಿ ಪಕ್ಷದ ಕಾರ್ಯಕರ್ತರನ್ನು ಭೇಟಿ ಮಾಡುತ್ತಿರುವುದಾಗಿ ತಿಳಿಸಿದರು. ಅವರ (ಜಮೀರ್) ಹೇಳಿಕೆಗಳಿಗೆ ಪ್ರತಿಕ್ರಿಯಿಸಿ ಚರ್ಚೆ ಮಾಡುವ ಅವಶ್ಯಕತೆ ಇಲ್ಲ ಎಂದು ತಿಳಿಸಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Election: ಚನ್ನಪಟ್ಟಣದಲ್ಲಿ ಧರ್ಮ-ಅಧರ್ಮದ ನಡುವೆ ಚುನಾವಣೆ: ಎಚ್.ಡಿ.ಕುಮಾರಸ್ವಾಮಿ
By Poll: ರಣರಂಗವೂ ಇಲ್ಲ, ಚದುರಂಗವೂ ಇಲ್ಲ, ಜನರೇ ಪಟ್ಟಿ ಮಾಡಿ, ಅಂಕ ನೀಡ್ತಾರೆ: ಡಿಕೆಶಿ
By Election: ಮಾತೃ ಹೃದಯಗಳಲ್ಲಿ ಕಣ್ಣೀರು ಸಹಜ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ
By Election: ರಾಜ್ಯ ಸರ್ಕಾರ ನಿರ್ಜೀವ, ನಿಂತ ನೀರು: ಕೇಂದ್ರ ಸಚಿವ ವಿ.ಸೋಮಣ್ಣ ಟೀಕೆ
By Election: ಕಣ್ಣೀರು ಹಾಕುವವರಿಗೆ ಮತ ನೀಡಬಾರದು: ಅಭ್ಯರ್ಥಿ ಸಿ.ಪಿ.ಯೋಗೇಶ್ವರ್
MUST WATCH
ಹೊಸ ಸೇರ್ಪಡೆ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ
MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.