ಮೈತ್ರಿ ಚರ್ಚೆ: ಎಚ್ಡಿಕೆ, ವಿಜಯೇಂದ್ರ ದಿಲ್ಲಿಗೆ

-ಶಾ, ನಡ್ಡಾ ಜತೆ ಮಾತ್ರ ಮಾಜಿ ಸಿಎಂ ಸೀಟು ಹಂಚಿಕೆ ಚರ್ಚೆ

Team Udayavani, Dec 21, 2023, 1:03 AM IST

vija hdk

ಬೆಂಗಳೂರು: ಮುಂದಿನ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮೈತ್ರಿಗೆ ನಿರ್ಧರಿಸಿರುವ ಬಿಜೆಪಿ ಮತ್ತು ಜೆಡಿಎಸ್‌, ಟಿಕೆಟ್‌ ಹಂಚಿಕೆ ಮತ್ತು ಮೈತ್ರಿ ವಿಸ್ತರಣೆ ಕುರಿತು ಬಿಜೆಪಿ ವರಿಷ್ಠರ ಜತೆಗೆ ಚರ್ಚಿಸಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಪ್ರತ್ಯೇಕವಾಗಿ ದಿಲ್ಲಿಗೆ ತೆರಳಿದ್ದಾರೆ.

ಎಲ್ಲ ರಾಜ್ಯ ಘಟಕಗಳ ಅಧ್ಯಕ್ಷರ ಜತೆಗಿನ ಕಾರ್ಯ ಕಾರಿಣಿಯಲ್ಲಿ ಮಾತ್ರ ವಿಜಯೇಂದ್ರ ಭಾಗವಹಿಸಲಿದ್ದಾರೆ. ಸೀಟು ಹಂಚಿಕೆ ಸಂಬಂಧ ಬಿಜೆಪಿ ರಾಷ್ಟ್ರಿಯ ಅಧ್ಯಕ್ಷ ಜೆ.ಪಿ.ನಡ್ಡಾ ಹಾಗೂ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಜತೆಗೆ ಕುಮಾರಸ್ವಾಮಿ ಮಾತ್ರ ಚರ್ಚೆ ನಡೆಸಲಿದ್ದಾರೆ.

ಸಂಸತ್‌ ಅಧಿವೇಶನ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ದಿಲ್ಲಿಯಲ್ಲಿಯೇ ಇದ್ದಾರೆ. ಅವರು ಬಿಜೆಪಿ ವರಿಷ್ಠರನ್ನು ಭೇಟಿಯಾಗುತ್ತಾರೋ, ಇಲ್ಲವೋ ಎಂಬುದು ಸ್ಪಷ್ಟವಾಗಿಲ್ಲ.
ಮಂಗಳವಾರವಷ್ಟೇ ಸಿಂಗಾಪುರದಿಂದ ಬೆಂಗಳೂರಿಗೆ ಆಗಮಿಸಿರುವ ಕುಮಾರಸ್ವಾಮಿಗೆ ಬಿಜೆಪಿ ವರಿಷ್ಠರು ತುರ್ತು ಬುಲಾವ್‌ ನೀಡಿದ ಹಿನ್ನೆಲೆ ಯಲ್ಲಿ ಅವರು ದಿಲ್ಲಿಗೆ ತೆರಳಿದ್ದಾರೆ. ಈ ಪ್ರಯಾಣವನ್ನು ಗುಟ್ಟಾಗಿಡಲು ಕುಮಾರಸ್ವಾಮಿ ಎಷ್ಟೇ ಪ್ರಯತ್ನಿಸಿದರೂ ಸಾಧ್ಯವಾಗಿಲ್ಲ. “ನಾನು ವೈಯಕ್ತಿಕ ಕಾರಣಕ್ಕಾಗಿ ದಿಲ್ಲಿಗೆ ಹೋಗುತ್ತಿದ್ದೇನೆ. ಸೀಟು ಹಂಚಿಕೆ ಸಂಬಂಧ ಬಿಜೆಪಿ ವರಿಷ್ಠರನ್ನು ಭೇಟಿ ಮಾಡುತ್ತಿಲ್ಲ” ಎಂದು ಸ್ಪಷ್ಟನೆ ನೀಡಿದ್ದಾರೆ.

ಸೀಟು ಹಂಚಿಕೆ ವಿಷಯವನ್ನು ಆದಷ್ಟು ಬೇಗ ಇತ್ಯರ್ಥಗೊಳಿಸಿಕೊಳ್ಳುವುದು ಸೂಕ್ತ ಎಂಬುದು ಜೆಡಿಎಸ್‌ ನಾಯಕರ ನಿಲುವಾಗಿದೆ. ಕೊನೆ ಹಂತದಲ್ಲಿ ಕೊಡು ಕೊಳ್ಳುವಿಕೆಗಿಂತಲೂ ಯಾರಿಗೆ ಎಷ್ಟು ಸ್ಥಾನ ಎಂಬುದು ಈಗಲೇ ಇತ್ಯರ್ಥಗೊಂಡರೆ ಗೊಂದಲವಿಲ್ಲದೆ, ಸಂಘಟನ ಕಾರ್ಯ ನಡೆಸಬಹುದೆಂಬುದು ಜೆಡಿಎಸ್‌ ನಿಲುವಾಗಿದೆ. ಆ ಪಕ್ಷದ ಮೂಲಗಳ ಪ್ರಕಾರ ಹಳೆ ಮೈಸೂರು ಭಾಗದ ಐದು ಕ್ಷೇತ್ರಗಳನ್ನು ಬಿಟ್ಟುಕೊಡುವಂತೆ ಜೆಡಿಎಸ್‌ ಪಟ್ಟು ಹಿಡಿಯಬಹುದು. ಅಂತಿಮವಾಗಿ ಮೂರು ಸ್ಥಾನಕ್ಕೆ ತೃಪ್ತಿಪಟ್ಟುಕೊಳ್ಳುವ ಸಾಧ್ಯತೆ ಇದೆ.

ಕುಮಾರಸ್ವಾಮಿ ಸ್ಪರ್ಧೆ ?
ಇದೆಲ್ಲದರ ಮಧ್ಯೆ ಕುಮಾರಸ್ವಾಮಿ ಅವರ ಲೋಕಸಭಾ ಚುನಾವಣೆ ಸ್ಪರ್ಧೆ ಬಗೆಗಿನ ವದಂತಿಗೂ ಈ ಭೇಟಿಯಲೇ ಸ್ಪಷ್ಟತೆ ಸಿಗುವ ಸಾಧ್ಯತೆ ಇದೆ. ಕುಮಾರಸ್ವಾಮಿಯವರನ್ನು ಕೇಂದ್ರ ಸಂಪುಟಕ್ಕೆ ತೆಗೆದುಕೊಳ್ಳಲು ಬಿಜೆಪಿ ವರಿಷ್ಠರು ಆಸಕ್ತರಾಗಿದ್ದಾರೆ. ಹೀಗಾಗಿ ಅವರಿಗೆ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯುವಂತೆ ಸೂಚನೆ ನೀಡಲಾಗಿದೆ ಎಂಬ ಸುದ್ದಿಯನ್ನು ಜೆಡಿಎಸ್‌ ಪಾಳಯದಿಂದ ಹರಿಬಿಡ ಲಾಗಿದೆ.

ಆದರೆ ನಮ್ಮ ಪಾರಂಪರಿಕ ಕ್ಷೇತ್ರಗಳನ್ನು ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ ಎಂಬುದು ಬಿಜೆಪಿ ರಾಜ್ಯ ಘಟಕದ ವಾದವಾಗಿದೆ. ಹೀಗಾಗಿ ಸೀಟು ಹಂಚಿಕೆ ಚರ್ಚೆ ನಡೆದರೆ ಬೆಂಗಳೂರು “ಉತ್ತರ’ದ ಕುರಿತು ಎದ್ದಿರುವ “ಪ್ರಶ್ನೆ”ಗಳಿಗೆ ಸ್ಪಷ್ಟತೆ ಸಿಗಲಿದೆ.

ಭಾಗಿಯಿಲ್ಲ
ಸೀಟು ಹಂಚಿಕೆ ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭಾಗವಹಿಸುವ ಸಾಧ್ಯತೆ ಕಡಿಮೆ ಇದೆ. ಅವರು ಕುಮಾರಸ್ವಾಮಿಯವರ ಜತೆಗೆ ಯಾವುದೇ ಜಂಟಿ ಸಭೆಯಲ್ಲಿ ಭಾಗವಹಿಸುತ್ತಿಲ್ಲ. ಆದರೆ ಪ್ರಧಾನಿ ಭೇಟಿಗೆ ವಿಜಯೇಂದ್ರ ಸಮಯ ಕೋರಿದ್ದಾರೆ ಎಂದು ತಿಳಿದು ಬಂದಿದೆ.

ಸೋಮಣ್ಣ ಮೌನಕ್ಕೆ ಶರಣಾಗಿದ್ದೇಕೆ?
ವಿಜಯೇಂದ್ರ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನೇಮಕಗೊಂಡ ಹಿನ್ನೆಲೆಯಲ್ಲಿ ಬೇಸರಗೊಂಡಿದ್ದ ಮಾಜಿ ಸಚಿವ ವಿ. ಸೋಮಣ್ಣ ಇದ್ದಕ್ಕಿದ್ದಂತೆ ಮೌನಕ್ಕೆ ಶರಣಾಗಿದ್ದಾರೆ. ಡಿಸೆಂಬರ್‌ 19ರ ಬಳಿಕ ದಿಲ್ಲಿಗೆ ಹೋಗುತ್ತೇನೆಂದು ಘೋಷಿಸಿದ್ದರೂ ಅವರಿಗಿನ್ನೂ ವರಿಷ್ಠರು ಸಮಯಾವಕಾಶ ನೀಡಿಲ್ಲ. ಇನ್ನೊಬ್ಬ ಬಂಡಾಯ ನಾಯಕ ಬಸನಗೌಡ ಯತ್ನಾಳ್‌ ದಿಲ್ಲಿಯಲ್ಲೇ ಬೀಡುಬಿಟ್ಟಿದ್ದು, ಮುಂದಿನ ವಾರ ವಿಪಕ್ಷ ನಾಯಕ ಆರ್‌.ಅಶೋಕ್‌ ದಿಲ್ಲಿಗೆ ತೆರಳಲಿದ್ದಾರೆ.

ಎಲ್ಲ ರಾಜ್ಯಗಳ ಬಿಜೆಪಿ ನಾಯಕರ ಜತೆಗಿನ ಸಭೆಯಲ್ಲಿ ಭಾಗವಹಿಸಲು ದಿಲ್ಲಿಗೆ ಹೋಗುತ್ತಿದ್ದೇನೆ. ಸೀಟು ಹಂಚಿಕೆ ಕುರಿತು ಸಭೆ ನಡೆಯುವ ಬಗ್ಗೆ ನನಗೆ ಮಾಹಿತಿ ಇಲ್ಲ.
-ಬಿ.ವೈ.ವಿಜಯೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷ

ಟಾಪ್ ನ್ಯೂಸ್

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

1-pk

Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು

vij

Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

crime (2)

Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ

1-pk

Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು

vij

Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.