JDS ಜತೆಗೆ ವರಿಷ್ಠರ ಹಂತದಲ್ಲಿ ಮೈತ್ರಿ


Team Udayavani, Sep 14, 2023, 12:47 AM IST

BJP JDS

ಬೆಂಗಳೂರು: ಲೋಕಸಭೆ ಚುನಾವಣೆ ಸನ್ನಿಹಿತವಾಗುತ್ತಿರುವಂತೆ ಜೆಡಿಎಸ್‌ ಜತೆಗೆ ಮೈತ್ರಿ ಮಾತುಕತೆ ಮಾಡುತ್ತಿರುವ ಬಿಜೆಪಿ, ಎಷ್ಟು ಸ್ಥಾನಗಳನ್ನು ಪರಸ್ಪರ ಹಂಚಿಕೊಳ್ಳಬೇಕು ಎಂಬುದನ್ನಿನ್ನೂ ನಿರ್ಧರಿಸಿಲ್ಲ. ಇದು ವರಿಷ್ಠರ ಹಂತದಲ್ಲಿ ನಡೆಯುತ್ತಿರುವ ಮಾತುಕತೆ ಆಗಿರುವುದರಿಂದ ರಾಜ್ಯ ನಾಯಕರು ಅನ್ಯಮನಸ್ಕರಾಗಿದ್ದಾರೆ.

ಈ ಮೈತ್ರಿಯಿಂದ ಹೆಚ್ಚೇನೂ ಲಾಭವಾಗುವುದಿಲ್ಲ ಎಂಬ ಅನಿಸಿಕೆ ಕೆಲವರಲ್ಲಿದ್ದರೆ, ಲಾಭ ಮಾಡಿಕೊಳ್ಳುವುದು ನಮಗೆ ಬಿಟ್ಟ ವಿಚಾರ ಎಂಬ ಉಮೇದಿನಲ್ಲಿ ಮತ್ತಷ್ಟು ನಾಯಕರಿದ್ದಾರೆ. ಒಟ್ಟಾರೆ “ಮೈತ್ರಿ’ಯ ಲಾಭ-ನಷ್ಟದ ಲೆಕ್ಕಾಚಾರಗಳು ಶುರುವಾಗಿದ್ದು, ಇದಕ್ಕಾಗಿ ಮೇಲ್ಮಟ್ಟದ ನಾಯಕರು ಯಾವ ರೀತಿಯ ತೀರ್ಮಾನ ಮಾಡುತ್ತಾರೆ ಎಂಬುದನ್ನು ಕೆಳಮಟ್ಟದ ನಾಯಕರು, ಕಾರ್ಯಕರ್ತರು ಕಾದು ನೋಡುವಂತಾಗಿದೆ. ಏನೂ ಅರಿಯದವರಂತೆ ಎಲ್ಲಕ್ಕೂ ವರಿಷ್ಠರತ್ತ ಬೆರಳು ಮಾಡಿ ಸುಮ್ಮನಾಗುವುದು ಕ್ಷೇಮ ಎನ್ನುವುದು ರಾಜ್ಯ ನಾಯಕರ ಲೆಕ್ಕಾಚಾರವಾಗಿದೆ.
ಕಳೆದ ವಿಧಾನಸಭೆ ಚುನಾವಣೆ ವೇಳೆ ಹಳೇ ಮೈಸೂರು ಭಾಗದಲ್ಲಿ ಪಕ್ಷದ ಬೇರು ಗಟ್ಟಿಗೊಳಿಸುವಂತೆ ಬಿಜೆಪಿ ವರಿಷ್ಠರೇ ಸೂಚಿಸಿದ್ದರು. ಇದರಿಂದಾಗಿ ಜೆಡಿಎಸ್‌ ಹೀನಾಯ ಸೋಲು ಕಂಡಿತ್ತು. ಕಾಂಗ್ರೆಸ್‌ಗೆ ಹೆಚ್ಚು ಲಾಭ ಆಗಿತ್ತು. ಇದಕ್ಕೀಗ ಪಶ್ಚಾತ್ತಾಪಪಟ್ಟುಕೊಂಡಿರುವ ಉಭಯ ಪಕ್ಷಗಳೂ ಪರಸ್ಪರ ಕೈ ಹಿಡಿದು ಮೇಲೇಳುವ ಪ್ರಯತ್ನಕ್ಕೆ ಕೈಹಾಕಿವೆ.

ಹಾಲಿ ಸಂಸದರ ಪಾಡೇನು?
ಮಂಡ್ಯದಲ್ಲಿ ಸ್ವತಂತ್ರವಾಗಿ ಗೆದ್ದರೂ ಬಿಜೆಪಿಗೆ ಬೆಂಬಲ ಸೂಚಿಸಿದ್ದ ಸುಮಲತಾರ ಸ್ಥಾನ ಏನಾಗಲಿದೆ? ಹಾಸನವನ್ನು ಜೆಡಿಎಸ್‌ಗೆ ಬಿಟ್ಟು ಕೊಟ್ಟರೆ ಮಾಜಿ ಪ್ರಧಾನಿ ದೇವೇಗೌಡರು ಸ್ಪರ್ಧಿಸುತ್ತಾರೋ? ಮತ್ತೆ ಪ್ರಜ್ವಲ್‌ ರೇವಣ್ಣ ಕಣಕ್ಕಿಳಿಯುತ್ತಾರೋ? ಹೊಸ ಮುಖಕ್ಕೆ ಮಣೆ ಹಾಕುತ್ತಾರೋ ಎಂಬುದಿನ್ನೂ ಸ್ಪಷ್ಟವಾಗಿಲ್ಲ. ತುಮಕೂರಿನಲ್ಲಿ ಬಸವರಾಜು ಸ್ಪರ್ಧಿಸುವುದಿಲ್ಲ ಎಂದಿರುವುದರಿಂದ ಮಾಜಿ ಸಚಿವ ವಿ.ಸೋಮಣ್ಣ ಆಕಾಂಕ್ಷಿಯಾಗಿದ್ದಾರೆ. ಹಳೆಯ ವರಸೆಯಂತೆ ದೇವೇಗೌಡರೇ ಸ್ಪರ್ಧಿಸಿದರೆ ಸೋಮಣ್ಣರ ಆಸೆಗೆ ಮತ್ತೆ ತಣ್ಣೀರು ಬೀಳುವ ಸಂಭವವಿದೆ. ಕೋಲಾರದಲ್ಲಿ ಬಿಜೆಪಿ ಸಂಸದ ಮುನಿಸ್ವಾಮಿಗೆ ಜೆಡಿಎಸ್‌ನ ನಿಸರ್ಗ ನಾರಾಯಣಸ್ವಾಮಿ ಪೈಪೋಟಿ ನೀಡುವ ಸಾಧ್ಯತೆಗಳಿವೆ. ಹೀಗಾಗಿ ಬಚ್ಚೇಗೌಡರು ಪ್ರತಿನಿಧಿಸುತ್ತಿದ್ದ ಚಿಕ್ಕಬಳ್ಳಾಪುರಕ್ಕೆ ಮುನಿಸ್ವಾಮಿ ಸ್ಥಳಾಂತರಗೊಳ್ಳುವರೇ? ಚಾಮರಾಜನಗರದಿಂದ ಶ್ರೀನಿವಾಸಪ್ರಸಾದ್‌ ಬಿಟ್ಟರೆ ಬೇರಾರು ಸ್ಪರ್ಧಿಸುತ್ತಾರೆ ಎಂಬುದೂ ಅಸ್ಪಷ್ಟ. ಹೀಗೆ ಅನೇಕ ಕಡೆಗಳಲ್ಲಿ ಹಾಲಿ ಸಂಸದರು ಕ್ಷೇತ್ರ ಬಿಟ್ಟುಕೊಡಬೇಕಾಗಿ ಬಂದರೆ ತ್ಯಾಗ ಮಾಡುವರೇ ಎಂಬ ಪ್ರಶ್ನೆಗಳು ಉದ್ಭವಿಸಿವೆ.

ಗೊಂದಲದಲ್ಲಿ ಯಡಿಯೂರಪ್ಪ
ಈ ಮಧ್ಯೆ ದಿಲ್ಲಿ ತಲುಪಿರುವ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಅವರು ಮೈತ್ರಿ ಕುರಿತು ಯಾವುದೇ ಸ್ಪಷ್ಟ ಚಿತ್ರಣವಿಲ್ಲವೆಂದು ಹೇಳುವ ಮೂಲಕ ಅವರ ಹೇಳಿಕೆ ಸಾಕಷ್ಟು ಗೊಂದಲ ಮೂಡಿಸಿದೆ. ಇದಕ್ಕೂ ಮುನ್ನ ಕೆಲವು ದಿನಗಳ ಹಿಂದೆ ಬೆಂಗಳೂರಿನಲ್ಲಿ ಮೈತ್ರಿ ಸಾಧ್ಯತೆ ಹೆಚ್ಚಿದೆ ಎಂದು ಹೇಳಿಕೆ ನೀಡಿದ್ದರು. ಇಂದಿನ ಹೇಳಿಕೆ ಅಚ್ಚರಿ ಹಾಗೂ ಗೊಂದಲ ಸೃಷ್ಟಿಸಿದೆ.

ಉತ್ತರ ಕರ್ನಾಟಕದಲ್ಲಿ ಲಾಭ
ಭಿನ್ನ ಮನಸ್ಕರಾಗಿರುವ ಒಕ್ಕಲಿಗ ಹಾಗೂ ವೀರಶೈವ-ಲಿಂಗಾಯತರ ಉಪಪಂಗಡಗಳ ಮತಗಳು ಈ ಮೈತ್ರಿಯಿಂದ ಒಗ್ಗೂಡಬಹುದು ಎಂಬ ರಾಜಕೀಯ ಸೂತ್ರವನ್ನು ಬಿಜೆಪಿ ಹೆಣೆದಿದೆ. ಈ ಭಾಗದ ಲೋಕಸಭಾ ಕ್ಷೇತ್ರಗಳನ್ನು ಬಿಜೆಪಿ ತನ್ನ ತೆಕ್ಕೆಗೆ ತೆಗೆದುಕೊಂಡರೆ ಸ್ಥಳೀಯವಾಗಿ ಬಿಜೆಪಿಯ ಹಿಡಿತ ಗಟ್ಟಿಯಾಗಲಿದೆ. ಮುಂದಿನ ಚುನಾವಣೆಗಳಲ್ಲಿ ಇದು ಪಕ್ಷಕ್ಕೆ ಲಾಭವಾಗಲಿದೆ ಎಂಬುದೂ ರಹಸ್ಯವೂ ಮೈತ್ರಿಯ ಹಿಂದೆ ಅಡಗಿದೆ.

ಟಾಪ್ ನ್ಯೂಸ್

Mangalore-Taxi-meet

Mangaluru: ಪ್ಯಾನಿಕ್‌ ಬಟನ್‌, ಜಿಪಿಎಸ್‌ ರದ್ದುಪಡಿಸಿ; ಸಾರಿಗೆ ಸಚಿವ ರೆಡ್ಡಿಗೆ ಮನವಿ

Tiger-Hunasuru

Nagarhole Park Tiger Fight: ಹುಲಿಗಳ ಕಾದಾಟ ಗಂಡು ಹುಲಿಗೆ ಗಾಯ!

Vijayapura-Sainik

Vijayapura: ನೌಕಾಪಡೆ ಅನೇಕ ಕಾರ್ಯಾಚರಣೆಯಲ್ಲಿದ್ದ ಹೆಲಿಕಾಪ್ಟರ್ ಸೈನಿಕ ಶಾಲೆಯಲ್ಲಿ ಸ್ಥಾಪನೆ

police

Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ

1-ammi

J&K Assembly polls; ಈಗ ಪಾಕಿಸ್ಥಾನವು ಮೋದಿಗೆ ಹೆದರುತ್ತಿದೆ: ಅಮಿತ್ ಶಾ ವಾಗ್ದಾಳಿ

Achraya-das

Tirupati laddoo: ʼಅಯೋಧ್ಯೆ ರಾಮಮಂದಿರ ಪ್ರಾಣಪ್ರತಿಷ್ಠೆಯಲ್ಲಿ ಲಡ್ಡು ಪ್ರಸಾದ ಹಂಚಿದ್ದೆವುʼ

1-ewqewqe

AtishiAAP; ದೆಹಲಿಯ ಮೂರನೇ ಮಹಿಳಾ ಸಿಎಂ ಆದ ಆತಿಷಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

R Ashok (2)

BJP; ವಿಪಕ್ಷ ನಾಯಕ ಆರ್‌. ಅಶೋಕ್‌ ನಡೆಗೆ ಕಾಂಗ್ರೆಸ್‌ ಖಂಡನೆ

1-frr

Munirathna ವಿರುದ್ಧದ ಪ್ರಕರಣಗಳ ತನಿಖೆಗೆ ಎಸ್‌ಐಟಿ ರಚಿಸಿದ ರಾಜ್ಯ ಸರಕಾರ

1-weewqe

Road roller ಅಡಿಯಲ್ಲಿ ಸಿಲುಕಿ ಇಬ್ಬರು ದಾರುಣ ಸಾ*ವು

yatnal

BJP; ರಮೇಶ ಜಾರಕಿಹೊಳಿ ಸಿಟ್ಟು ಕಡಿಮೆಯಾಗಿಲ್ಲ,ಅವರ ನಿರ್ಧಾರಕ್ಕೆ ಬದ್ಧ: ಯತ್ನಾಳ್

1-darshan

Darshan ಜಾಮೀನು ಅರ್ಜಿ ಕೊನೆಗೂ ಸಲ್ಲಿಕೆ:ವಿಚಾರಣೆ ಮುಂದೂಡಿದ ಕೋರ್ಟ್

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Mangalore-Taxi-meet

Mangaluru: ಪ್ಯಾನಿಕ್‌ ಬಟನ್‌, ಜಿಪಿಎಸ್‌ ರದ್ದುಪಡಿಸಿ; ಸಾರಿಗೆ ಸಚಿವ ರೆಡ್ಡಿಗೆ ಮನವಿ

R Ashok (2)

BJP; ವಿಪಕ್ಷ ನಾಯಕ ಆರ್‌. ಅಶೋಕ್‌ ನಡೆಗೆ ಕಾಂಗ್ರೆಸ್‌ ಖಂಡನೆ

Tiger-Hunasuru

Nagarhole Park Tiger Fight: ಹುಲಿಗಳ ಕಾದಾಟ ಗಂಡು ಹುಲಿಗೆ ಗಾಯ!

Vijayapura-Sainik

Vijayapura: ನೌಕಾಪಡೆ ಅನೇಕ ಕಾರ್ಯಾಚರಣೆಯಲ್ಲಿದ್ದ ಹೆಲಿಕಾಪ್ಟರ್ ಸೈನಿಕ ಶಾಲೆಯಲ್ಲಿ ಸ್ಥಾಪನೆ

Arrested: ಬಜಪೆ ಪೊಲೀಸರ ಕಾರ್ಯಾಚರಣೆ; ಗಾಂಜಾ ಸೇವನೆ ಆರೋಪಿಗಳ ಬಂಧನ

Arrested: ಬಜಪೆ ಪೊಲೀಸರ ಕಾರ್ಯಾಚರಣೆ; ಗಾಂಜಾ ಸೇವನೆ ಆರೋಪಿಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.